ಜಿಲ್ಲಾಡಳಿತದಿಂದ ಸರಳ 75ನೇ ಸ್ವಾತಂತ್ರ್ಯೋತ್ಸವ ಆಚರಣೆ;

0
🌐 Belgaum News :

ಬದುಕನ್ನು ಪಣಕ್ಕಿಟ್ಟು ದೇಶಕ್ಕೆ ಸ್ವಾಭಿಮಾನವನ್ನು ತಂದುಕೊಟ್ಟ ಮಹನೀಯರನ್ನು ಸ್ಮರಿಸೋಣ: ಕಾರಜೋಳ


ಬೆಳಗಾವಿ: ಅಗಸ್ಟ್ 15 : ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ರವಿವಾರ (ಆ.15) 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಸಮಾರಂಭವನ್ನು ಆಚರಿಸಲಾಯಿತು.
ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಸಾರ್ವಜನಿಕರಿಗೆ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.
ಆಕರ್ಷಕ ಪಥಸಂಚಲನ:
ಕವಾಯತ ಕಮಾಂಡರ್ ಆಡಿವೆಪ್ಪ ಎಸ್ ವಾರದ ಹಾಗೂ ಸಹಾಯಕ ಕವಾಯತ ಕಮಾಂಡರ್ ಎ.ಎಸ್ ಬೂದಿಗೊಪ್ಪ ಅವರ ನೇತೃತ್ವದಲ್ಲಿ ಆಕರ್ಷಕ ಪಥಸಂಚಲನ ಜರುಗಿತು. ಸಿಎಆರ್, ಕೆಎಸ್‍ಆರ್‍ಪಿ, ಸಶಸ್ತ್ರ ಪೊಲೀಸ್, ಮಹಿಳಾ ಪೊಲೀಸ್, ಅರಣ್ಯ ಇಲಾಖೆ, ಗೃಹರಕ್ಷಕ ದಳ, ಕರ್ನಾಟಕ ಅಗ್ನಿ ಶಾಮಕದಳ, ಜಿಲ್ಲಾ ಅಬಕಾರಿ ಪೊಲೀಸ್ ಪಡೆ, ನಾಗರಿಕ ಪೊಲೀಸ್ ಪಡೆ ಹಾಗೂ ಪೊಲೀಸ್ ಬ್ಯಾಂಡ್ ತಂಡದವರು ಪಥಸಂಚಲನದಲ್ಲಿ ಭಾಗವಹಿಸಿದ್ದರು.

ಕೋವಿಡ್ ವಾರಿಯರ್ಸ್‍ಗೆ ಸನ್ಮಾನ:
ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ 75 ನೇ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಕೊರೊನಾ ಸಂದರ್ಭದಲ್ಲಿ ಉತ್ತಮ ಸೇವೆಗೈದ ವೈದ್ಯಕೀಯ ಇಲಾಖೆಯ ಸಿಬ್ಬಂದಿ ಹಾಗೂ ಮತ್ತಿತರ ಕೋವಿಡ್ ವಾರಿಯರ್ಸ್‍ಗಳಿಗೆ ಪುಸ್ತಕ ನೀಡಿ ಗೌರವಿಸಿದರು.

ಡಾ. ಜಯಾನಂದ ಧನ್ವಂತ ಡಾ. ಪ್ರದೀಪ ಭಜಂತ್ರಿ, ಲ್ಯಾಬ್ ಟೆಕ್ನಿಶಿಯನ್ ಪ್ರತಿಮಾ ಹೆಚ್, ಕಮ್ಯುನಿಟಿ ಸೇಪ್ಟಿ ಆಫಿಸರ್ ಅನಿತಾ ಜಿ ಗಾಣಗಿ ಮತ್ತು ಸಮಾಜಮುಖಿ ಕಾರ್ಯಕರ್ತರಾದ ಸೋನಾಲಿ ಡೊಲೇಕರ್, ಮಲ್ಲೇಶಿ ಚಿಕ್ಕರಪ್ಪ ಹಾಗೂ ಆಶಾ ಕಾರ್ಯಕರ್ತೆಯರಾದ ಸವಿತಾ ಡೋಲೆಕರ್, ಗೀತಾ ಕುರುಬರ ಅವರಿಗೆ ಪುಸ್ತಕಗಳನ್ನು ನೀಡಿ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೊಜನೆಯಯಡಿ ಉತ್ತಮವಾಗಿ ಕಾರ್ಯ ನಿರ್ವಹಿಸಿದ ಕಕಮರಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕೆ.ಎಲ್‍ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ಎಮ್ ಆರ್ ಸಿ ಬೆಳಗಾವಿ ಈ ಆರೋಗ್ಯ ಸಂಸ್ಥೆಗಳಿಗೂ ಕೂಡ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಸಂಸದರಾದ ಮಂಗಲಾ ಅಂಗಡಿ, ಶಾಸಕರಾದ ಅನಿಲ್ ಬೆನಕೆ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೆÇಲೀಸ್ ಆಯುಕ್ತರಾದ ಡಾ.ಕೆ. ತ್ಯಾಗರಾಜನ್, ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದರ್ಶನ ಹೆಚ್. ವಿ. ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಎಚ್‍ಓ ಡಾ.ಎಸ್.ವಿ.ಮುನ್ಯಾಳ ಸೇರಿದಂತೆ ಎಲ್ಲ ಇಲಾಖೆಗಳ ಅಧಿಕಾರಿಗಳು ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸಚಿವರ ಸಂದೇಶ:
75 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಈ ಶುಭ ಸಂದರ್ಭದಲ್ಲಿ ನಾಡಿನ ಸಮಸ್ತ ಜನತೆಗೆ ಹಾಗೂ ಇಲ್ಲಿ ನೆರೆದಿರುವ ಸ್ವಾತಂತ್ರ್ಯ ಹೋರಾಟಗಾರರು, ಜಿಲ್ಲೆಯ ಸಮಸ್ತ ಚುನಾಯಿತ ಜನಪ್ರತಿನಿಧಿಗಳು, ಗಣ್ಯಮಾನ್ಯರು, ಎಲ್ಲಾ ಆಮಂತ್ರಿತರು, ಅಧಿಕಾರಿ ವರ್ಗದವರು, ನಾಗರಿಕ ಬಂಧುಗಳು ಮತ್ತು ಮಾಧ್ಯಮದ ಸ್ನೇಹಿತರೇ ತಮಗೆಲ್ಲರಿಗೂ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು.
‘ಸ್ವಾತಂತ್ರ್ಯ’ ಎಂದರೆ ಸ್ವಾಭಿಮಾನ. ತಮ್ಮ ಬದುಕನ್ನು ಪಣಕ್ಕಿಟ್ಟು ದೇಶಕ್ಕೆ ಇಂತಹ ಸ್ವಾಭಿಮಾನವನ್ನು ತಂದುಕೊಟ್ಟ ಮಹನೀಯರನ್ನು ಇಂದು ನಾವೆಲ್ಲರೂ ಹೆಮ್ಮೆಯಿಂದ ಸ್ಮರಿಸಬೇಕು.

ಬ್ರಿಟೀಷರ ಕಪಿಮುಷ್ಠಿಯಿಂದ ಅವರ ದರ್ಪ, ದೌರ್ಜನ್ಯದಿಂದ ಭಾರತವನ್ನು ಸ್ವಾತಂತ್ರ್ಯಗೊಳಿಸಲು ಹೆಸರಿಸಲಾಗದ ಅಸಂಖ್ಯಾತ ನಮ್ಮ ಬಂಧು-ಬಾಂಧವರು ಹೋರಾಡಿದ್ದಾರೆ. ನಮ್ಮ ಪೂರ್ವಜರ ತ್ಯಾಗ, ಬಲಿದಾನ, ಆತ್ಮಾರ್ಪಣೆಯ ಪ್ರತಿಫಲದಿಂದ ನಾವಿಂದು ಸ್ವತಂತ್ರ ಭಾರತದಲ್ಲಿದ್ದೇವೆ.

ತ್ಯಾಗ, ಬಲಿದಾನ, ಧೈರ್ಯ, ಶೌರ್ಯ, ಅಹಿಂಸೆಯ ಮೂಲಕ ನಮ್ಮ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಟ್ಟ ಮಹಾತ್ಮ ಗಾಂಧಿಜೀ, ನೇತಾಜಿ ಸುಭಾಷ್ಚಂದ್ರ ಭೋಸ್, ಸರ್ದಾರ್ ವಲ್ಲಭಬಾಯಿ ಪಟೇಲ್, ಭಗತ್ಸಿಂಗ್, ಚಂದ್ರಶೇಖರ ಆಜಾದ್, ವೀರಸಾವರ್ಕರ್, ಬಾಲಗಂಗಾಧರ ತಿಲಕ್, ಬಿಪಿನ್ ಚಂದ್ರಪಾಲ್, ಪಂಡಿತ್ ಜವಾಹರಲಾಲ್ ನೆಹರು ಅವರಂತಹ ಸಾವಿರಾರು ಸ್ವಾತಂತ್ರ್ಯ ಹೋರಾಟಗಾರರನ್ನು ಶುದ್ಧ ಮನಸ್ಸಿನಿಂದ ನೆನೆಪಿಸಿಕೊಳ್ಳುವ ಶುಭ ಸಂದರ್ಭವಿದು.

ಅಹಿಂಸೆ ಎಂಬ ಅಸ್ತ್ರವನ್ನು ಬಳಸಿ ಭಾರತವನ್ನು ಬ್ರಿಟೀಷರಿಂದ ಬಂಧಮುಕ್ತಗೊಳಿಸಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹೋರಾಟ ಇಡೀ ಜಗತ್ತಿಗೆ ಮಾದರಿ. ಇಂದಿಗೂ ಇಡೀ ಜಗತ್ತಿನ ಪ್ರೀತಿ, ಗೌರವ ಆದರ ಅಭಿಮಾನಗಳಿಗೆ ಪಾತ್ರರಾಗುತ್ತಲೇ ಇರುವ ರಾಷ್ಟ್ರಪಿತನ ನಾಡಿನಲ್ಲಿ ಜನಿಸಿರುವ ನಾವೇ ಪುಣ್ಯವಂತರು, ಭಾಗ್ಯವಂತರು.

ಮಹಾನ್ ಮಾನವತಾವಾದಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ರವರು ‘ಇತಿಹಾಸ ಮರೆತವರು ಭವಿಷ್ಯವನ್ನು ಸೃಷ್ಠಿಸಲಾರರು’ ಎಂದ ಮಾತು ಎಲ್ಲ ಕಾಲಕ್ಕೂ ನಮಗೆ ಮಾರ್ಗದರ್ಶಿಯಾಗುತ್ತಲೇ ಇರುತ್ತದೆ.

ವಿವಿಧತೆಯಲ್ಲಿ ಏಕತೆ, ಏಕತೆಯಲ್ಲಿ ಅಖಂಡತೆಯನ್ನು ಪ್ರತಿಪಾದಿಸುವ ನಮ್ಮ ದೇಶ ಸಾಮರಸ್ಯದ ಬದುಕಿಗೆ ಹೆಸರುವಾಸಿ. ಭಾರತ ಮಾತೆಯ ತನುಜಾತೆಯಾದ ಕರ್ನಾಟಕವು ಇದಕ್ಕೆ ಹೊರತಾಗಿಲ್ಲ ಎಂಬುದು ಅಷ್ಟೇ ಸತ್ಯ.

ಸ್ವಾತಂತ್ರ್ಯ ಹೋರಾಟಕ್ಕೆ ಕನ್ನಡಿಗರ ಕೊಡುಗೆ ಅಪಾರ. ಸ್ವಾತಂತ್ರ್ಯ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಪಾತ್ರವು ಪ್ರಮುಖವಾಗಿದೆ. ಅಪ್ರತಿಮ ಹೋರಾಟಗಾರರು, ಅಪ್ಪಟ ದೇಶಭಕ್ತರು, ಸ್ವಾಭಿಮಾನಿ ಸೇನಾನಿಗಳನ್ನು ದೇಶಕ್ಕೆ ಕೊಡುಗೆ ನೀಡಿರುವ ನಮ್ಮ ಜಿಲ್ಲೆಯು ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿತ್ತು.

ಕಿತ್ತೂರು ರಾಣಿ ಚೆನ್ನಮ್ಮ ಮೊಳಗಿಸಿದ ಸ್ವಾತಂತ್ರ್ಯದ ಕಹಳೆಯು ಕಾಡ್ಗಿಚ್ಚಿನಂತೆ ಎಲ್ಲೆಡೆ ಹಬ್ಬಿತು. ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆ ಹೊಂದಿದ್ದ ಚೆನ್ನಮ್ಮ, ಆಂಗ್ಲರ ಈಸ್ಟ್ ಇಂಡಿಯಾ ಕಂಪೆನಿಗೆ ದುಸ್ವಪ್ನವಾಗಿ ಕಾಡಿದ್ದು, ಅಜರಾಮರವಾಗಿದೆ.
ಅದೇ ಕಿತ್ತೂರು ಸಂಸ್ಥಾನದಲ್ಲಿ ಸೇನಾಧಿಪತಿಯಾಗಿದ್ದ ಸಂಗೊಳ್ಳಿ ರಾಯಣ್ಣ ಆಂಗ್ಲರ ಬಂದೂಕುಗಳಿಗೆ ಬೆದರದೇ ತಾಯ್ನಾಡಿನ ಸ್ವಾತಂತ್ರ್ಯಕ್ಕಾಗಿ ನೇಣುಗಂಬಕ್ಕೇರಿದ ಅಪ್ರತಿಮ ದೇಶಭಕ್ತ. ಅಂತಹ ರಾಯಣ್ಣ ಹುಟ್ಟಿದ್ದು ಆಗಸ್ಟ್ 15ರಂದು.

ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಮತ್ತೊಬ್ಬ ಮಹನೀಯರು ಶ್ರೀ ಗಂಗಾಧರರಾವ್ ದೇಶಪಾಂಡೆ. ‘ಕರ್ನಾಟಕದ ಸಿಂಹ’ ಹಾಗೂ ‘ಕರ್ನಾಟಕದ ಖಾದಿ ಭಗೀರಥ’ ಎಂದು ಗುರುತಿಸಿಕೊಂಡಿದ್ದ ದೇಶಪಾಂಡೆಯವರ ಕೊಡುಗೆ ಅಪಾರ. ಇವರ ಜತೆಗೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿದ್ದ ಅನೇಕರು ನಮಗೆ ಆದರ್ಶಪ್ರಾಯರು/ ಸದಾ ಪ್ರಾಥಃಸ್ಮರಣೀಯರು.
ಭವ್ಯ ಪರಂಪರೆ, ಇತಿಹಾಸ ಹೊಂದಿರುವ ಭಾರತದ, ಕರ್ನಾಟಕದ ಇತಿಹಾಸವನ್ನು ಮೆಲಕುಹಾಕುತ್ತ, ವರ್ತಮಾನದಲ್ಲಿ ನಿಂತು, ಭೂತಕಾಲವನ್ನು ನೆನೆಯುತ್ತ, ಭವಿಷತ್ನ್ನು ಕಟ್ಟಿಕೊಳ್ಳುವುದರತ್ತ ಸನ್ನದ್ಧರಾಗೋಣ.

ಸ್ವಾತಂತ್ರ್ಯ ದೊರೆತು 75 ವರ್ಷಗಳ ಸಂದಿರುವ ಈ ಶುಭ ಸಂದರ್ಭದ ಸವಿನೆನಪಿನಲ್ಲಿ “ಅಜಾದಿ ಕಾ ಅಮೃತ್ ಮಹೋತ್ಸವ” ಕಾರ್ಯಕ್ರಮವನ್ನು ಆಚರಿಸಲಾಗುತ್ತಿದೆ. ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 12, 2021 ರಂದು ಸ್ವಾತಂತ್ರ್ಯ ಮಹೋತ್ಸವದ ಘೋಷಣೆ ಮಾಡಿದ್ದಾರೆ. ಈ ಕಾರ್ಯಕ್ರಮವನ್ನು ದಿನಾಂಕ 15.8.2023 ರವರೆಗೆ ಆಚರಿಸಲಾಗುವುದು.
ಮಾನ್ಯ ಪ್ರಧಾನಮಂತ್ರಿಗಳು ಉದ್ಘಾಟನಾ ಭಾಷಣದಲ್ಲಿ ಉಲ್ಲೇಖಿಸಿದ 5 ಆಧಾರಸ್ಥಂಬಗಳಾದ ಸ್ವಾತಂತ್ಯ ಸಂಗ್ರಾಮ, 75ರ ಆಲೋಚನೆಗಳು, 75ರ ಸಾಧನೆಗಳು, 75ರ ಕಾರ್ಯಯೋಜನೆಗಳು ಹಾಗೂ 75ರ ಸಂಕಲ್ಪಗಳನ್ನು ಸ್ಪೂರ್ತಿಯಾಗಿಟ್ಟುಕೊಂಡು ಕನಸುಗಳು ಹಾಗೂ ಕರ್ತವ್ಯಗಳನ್ನು ಮುನ್ನಡೆಸಲು ಮಾರ್ಗಸೂತ್ರಗಳಾಗಿವೆ.

ಈ ಮಹೋತ್ಸವದ ಮುಖ್ಯ ಉದ್ದೇಶ ನಮ್ಮ ಸ್ವಾತಂತ್ರ್ಯ ಸಂಗ್ರಾಮದ ಪ್ರತಿಯೊಂದು ಪ್ರಮುಖ ಕ್ಷಣವನ್ನು ಸ್ಮರಿಸುವುದು ಹಾಗೂ ಭಾರತಸಂವಿಧಾನದ ಮೂಲಕ ಪ್ರಜಾತಂತ್ರದ ಬೇರುಗಳನ್ನು ಬಲಪಡಿಸುವ ಹೊಸದೃಷ್ಠಿಕೋನದೊಂದಿಗೆ ಭವಿಷ್ಯವನ್ನು ರೂಪಿಸುವುದಾಗಿದೆ. ಸ್ವಾತಂತ್ರ್ಯದ ಹೋರಾಟದ ಪ್ರಮುಖ ಕ್ಷಣಗಳನ್ನು ಚಿರಸ್ಥಾಯಿಯಾಗಿಸಲು ಹಾಗೂ ಯುವ ಪೀಳಿಗೆಯಲ್ಲಿ ದೇಶಪ್ರೇಮವನ್ನು ಉತ್ತೇಜಿಸಲು ಅಮೃತ ಮಹೋತ್ಸವದ ಅಂಗವಾಗಿ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ.

ಕರ್ನಾಟಕದ ಮೂರು ಸ್ಥಳಗಳೂ ಸೇರಿದಂತೆ ದೇಶದ ಆಯ್ದ 75 ಸ್ಥಳಗಳಲ್ಲಿ ನಡೆದ “ಆಜಾದಿ ಕಾ ಅಮೃತ ಮಹೋತ್ಸವ” ವರ್ಷಾಚರಣೆಯ ವರ್ಚುವಲ್ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಚಾಲನೆ ನೀಡಿದರು. ಈ 75 ಸ್ಥಳಗಳ ಪೈಕಿ ಚೆನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲೂ ಈ ಕಾರ್ಯಕ್ರಮ ನಡೆದಿರುವುದು ನಮಗೆ ಹೆಮ್ಮೆಯ ವಿಷಯವಾಗಿದೆ.

ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲೂ ಸ್ವಾತಂತ್ರ್ಯ ಅಮೃತ ಮಹೋತ್ಸವದದ ಬಗ್ಗೆ ಅರಿವು ಮೂಡಿಸಲು ಪ್ರಬಂಧ ಸ್ಪರ್ಧೆ, ಬೀದಿ ನಾಟಕ, ಆನ್ಲೈನ್ ವಿನ್ಯಾಸ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಕವನ ವಾಚನಗೋಷ್ಠಿ ನಡೆಸಲು ಹಾಗೂ ಪೆÇೀಸ್ಟರ್ಗಳು ಹಾಗೂ ಬ್ಯಾನರ್ಗಳ ಮೂಲಕ ಸ್ವಾತಂತ್ರ್ಯಯೋಧರ ಸಾಧನೆಗಳನ್ನು ಪ್ರದರ್ಶಿಸಲಾಗುವುದು. ಪರಿಸರ ಸಂರಕ್ಷಣೆ, ಜಲಸಂಕ್ಷಣೆ, ಡಿಜಿಟಲ್ ತಂತ್ರಜ್ಞಾನ ಹಾಗೂ ಸ್ಪಚ್ಚಭಾರತ ಅಭಿಯಾನದಂತಹ ಪ್ರಮುಖ ವಿಷಯಗಳ ಕುರಿತು ಜಾಗೃತಿ ಮೂಡಿಸಲಾಗುವುದು.

ಈ ಅಮೃತ ಮಹೋತ್ಸವದಲ್ಲಿ 130 ಕೋಟಿ ದೇಶವಾಸಿಗಳು ಪಾಲ್ಗೊಂಡು ಲಕ್ಷಾಂತರ ಸ್ವಾತಂತ್ರ್ಯ ಯೋಧರಿಂದ ಸ್ಪೂರ್ತಿ ಪಡೆಯುವರು ಎನ್ನುವ ಭರವಸೆ ಇದ್ದು, ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವಾರ್ಪಣೆ ಸಲ್ಲಿಸಲು ಹಾಗೂ ನಮ್ಮ ಕನಸಿನ ಭಾರತವನ್ನು ಕಟ್ಟುವುದಕ್ಕೆ ಸಂಕಲ್ಪ ಮಾಡಲು ಇದು ಉತ್ತಮವಾದ ಮಾರ್ಗವಾಗಿದೆ

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಮಹಾಮಾರಿ ಕೋವಿಡ್ ಹಾಗೂ ಪ್ರವಾಹ ಪರಿಸ್ಥಿತಿ ನಿರ್ವಹಣೆಯ ಸವಾಲುಗಳ ನಡುವೆಯೂ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸಿದೆ.

ಕೊರೋನಾ ವೈರಸ್ ಜಗತ್ತಿನ ಹಲವು ರಾಷ್ಟ್ರಗಳಿಗೆ ವ್ಯಾಪಿಸಿದಂತೆ, ಭಾರತ ದೇಶಕ್ಕೂ ಪ್ರವೇಶಿಸಿ, ಭೀಕರ ಪರಿಣಾಮವನ್ನು ಉಂಟುಮಾಡಿತು. ಜನಪ್ರಿಯ ಹಾಗೂ ಸಮರ್ಥ ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿಜಿ ಅವರ ಮಾರ್ಗದರ್ಶನದಲ್ಲಿ ನಮ್ಮ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಪರಿಹಾರೋಪಾಯ ಕಾರ್ಯಗಳನ್ನು ಕೈಗೊಂಡು ಇಡೀ ದೇಶಕ್ಕೆ ಮಾದರಿಯಾಗಿದೆ.

ಕೊರೊನಾ ಸಂಕಷ್ಟದಿಂದ ಪಾರುಮಾಡಿ, ಸಣ್ಣ, ಅತೀಸಣ್ಣ ಉದ್ಯಮಿಗಳಿಗೆ, ಎಲ್ಲಾ ವರ್ಗದವರ ಏಳಿಗೆಗಾಗಿ, ದೇಶದ ಪ್ರಗತಿಗೆ ಪೂರಕವಾಗಿ ಆತ್ಮನಿರ್ಭರತೆ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ದೇಶದಾದ್ಯಂತ ಜನಮನ್ನಣೆ ಪಡೆಯಲಾಗುತ್ತಿದೆ.
ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಸೋಂಕಿತರ ಪರೀಕ್ಷೆ, ಚಿಕಿತ್ಸೆ ಹಾಗೂ ಸೋಂಕಿತರಿಂದ ಸಂಪರ್ಕಕ್ಕೆ ಬಂದವರ ಸಮೀಕ್ಷೆಗಳ ಬಗ್ಗೆ ತೀವ್ರ ನಿಗಾ ಇಟ್ಟು, ವೈರಸ್ ಹರಡದಂತೆ ಕ್ರಮ ಜರುಗಿಸಲಾಗುತ್ತಿದೆ.

ಕೊರೋನಾ ವೈರಸ್ ವಿರುದ್ಧ ಹೋರಾಟಕ್ಕೆ ಜಿಲ್ಲಾಡಳಿತ ಸಮರೋಪಾದಿಯಲ್ಲಿ ಶ್ರಮಿಸಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಗಳನ್ನು ಅಚ್ಚುಕಟ್ಟಾಗಿ ಅನುಷ್ಠಾನಗೊಳಿದೆ. ಸಂಶಯಾಸ್ಪದ ರೋಗಿಗಳ ಗಂಟಲು ದ್ರವದ ಮಾದರಿ ತಪಾಸಣೆ ಮಾಡಿ, ಸೋಂಕಿತರಿಗೆ ಉಚಿತ ಚಿಕಿತ್ಸೆ ಹಾಗೂ ಉಪಚಾರನ್ನೂ ನೀಡಲಾಗಿದೆ. ಕೋವಿಡ್ ಲಸಿಕೆಯನ್ನು ಯಶಸ್ವಿಯಾಗಿ ನೀಡಲಾಗುತ್ತಿದೆ. ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಎಲ್ಲಾ ಇಲಾಖೆಗಳ ಕಾರ್ಯನಿರ್ವಹಣೆ ಶ್ಲಾಘನೀಯವಾಗಿದೆ. ಕೋವಿಡ್ ನಿಯಂತ್ರಣಕ್ಕಾಗಿ ನಿರ್ಬಂಧ ಜಾರಿಗೊಳಿಸಲಾದ ಅವಧಿಯಲ್ಲಿ ಸಂಕಷ್ಟಕ್ಕೊಳಗಾದ ಸಾಂಪ್ರದಾಯಿಕ ಕಸುಬು ನಡೆಸುತ್ತಿರುವವರಿಗೆ, ನೇಕಾರರಿಗೆ, ಹೂ, ಹಣ್ಣು ತರಕಾರಿ ಬೆಳೆಗಾರರಿಗೆ, ಕಲಾವಿದರಿಗೆ ಪರಿಹಾರಧನವನ್ನು ನೀಡಲಾಗಿದೆ.

ತಮ್ಮ ಜೀವ ಹಾಗೂ ಕುಟುಂಬದ ಜೀವದ ಹಂಗನ್ನು ತೊರೆದು ಕೋವಿಡ್ ಸೋಂಕಿತರ ಜೀವ ಉಳಿಸಲು ಹಗಲಿರುಳು ಶ್ರಮಿಸಿದ ವೈದ್ಯರು, ಸ್ಟಾಪ್ ನರ್ಸಗಳು, ಸಫಾಯಿ ಕರ್ಮಚಾರಿಗಳು, ಪೆÇಲೀಸರು ಸೇರಿದಂತೆ ಎಲ್ಲಾ ಕೊವಿಡ್ ವಾರಿಯರ್ಗಳನ್ನು ಸ್ವಾತಂತ್ರ್ಯ ಹೋರಾಟಗಾರರ ಜೊತೆಗೆ ಸ್ಮರಿಸುವುದು ಅಷ್ಟೆ ಪ್ರಸ್ತುತವೆನಿಸುತ್ತದೆ.
ಜಿಲ್ಲೆಯಲ್ಲಿ ಜುಲೈ 22, 2021 ರಿಂದ ಆಗಸ್ಟ್ 5, 2021 ರವರೆಗೆ ಉಂಟಾದ ಅತಿವೃಷ್ಟಿ/ಪ್ರವಾಹದಿಂದ 14 ತಾಲ್ಲೂಕುಗಳ 201 ಗ್ರಾಮಗಳು ಬಾಧಿತಗೊಂಡಿವೆ.

1,50,015 ಜನರನ್ನು ಹಾಗೂ 67,329 ಜಾನುವಾರುಗಳನ್ನು ರಕ್ಷಿಸಲಾಗಿದೆ. ಸಂತ್ರಸ್ತರಿಗೆ ತಾತ್ಕಾಲಿಕ ಆಶ್ರಯ ಒದಗಿಸಲು ಕಾಳಜಿ ಕೇಂದ್ರಗಳನ್ನು ತೆರೆದು, ಸಂತ್ರಸ್ತರಿಗೆ ಆಶ್ರಯ ಒದಗಿಸಿ ಊಟೋಪಚಾರದ ವ್ಯವಸ್ಥೆ ಕಲ್ಪಿಸಲಾಗಿದೆ. ಜಾನುವಾರುಗಳ ಶಿಬಿರಗಳನ್ನು ತೆರೆದು ಜಾನುವಾರುಗಳಿಗೂ ಆಶ್ರಯ ಕಲ್ಪಿಸಲಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಒಟ್ಟಾರೆ 2800 ಕೋಟಿ ರೂಪಾಯಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಸುಮಾರು 1,15,661 ಹೆಕ್ಟೇರ್ ಪ್ರದೇಶ ಬಾಧಿತ ಕ್ಷೇತ್ರವೆಂದು ಅಂದಾಜಿಸಲಾಗಿದ್ದು, ಜಂಟಿ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿರುತ್ತದೆ.
ಭಾರತದ ದೇಶದ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 309-ಬಿ ರನ್ವಯ ಎಲ್ಲಾ ಗ್ರಾಮ ಪಂಚಾಯತ್ಗಳಿಗೆ ಅನ್ವಯವಾಗುವಂತೆ ದೂರದೃಷ್ಠಿ ಯೋಜನೆಯನ್ನು ತಯಾರಿಸಿ “ಜನರ ಯೋಜನೆ“ ಎಂಬ ಹೆಸರಿನಲ್ಲಿ ಅನುಷ್ಠಾನಗೊಳಿಸಲಾಗುವುದು. ಸಂಪನ್ಮೂಲ ಗುಚ್ಚದಿಂದ ಆದ್ಯತೆಗನುಗುಣವಾಗಿ ಪ್ರತಿವರ್ಷ ಲಭ್ಯವಾಗುವ ಅನುದಾನಕ್ಕೆ ಅನುಗುಣವಾಗಿ ದೂರದೃಷ್ಠಿ ಯೋಜನೆಯನ್ನು ತಯಾರಿಸಿ ವಾರ್ಷಿಕ ಕ್ರಿಯಾ ಯೋಜನೆಯಲ್ಲಿ ಕಾರ್ಯಕ್ರಮಗಳನ್ನು ಕೈಗೊಳ್ಳಲಾಗುವುದು.

“ನನ್ನ ಬೆಳೆ ನನ್ನ ಹಕ್ಕು” ಎಂಬ ಘೋಷ್ಯವಾಕ್ಯದೊಂದಿಗೆ ರೈತರು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಮೂಲಕ ದಾಖಲಿಸುವ ಯೋಜನೆಯನ್ನು ಕೃಷಿ ಇಲಾಖೆಯ ವತಿಯಿಂದ ಆರಂಭಿಸಲಾಗಿದೆ.
ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ಬೆಳೆ ಸಮೀಕ್ಷೆಯನ್ನು ಈ ಆ್ಯಪ್ ಮೂಲಕ ಮಾಡಿದ್ದಲ್ಲಿ ಈ ಮಾಹಿತಿಯು ಬೆಳೆ ವಿಮೆ ಪರಿಹಾರ, ಕನಿಷ್ಟ ಬೆಂಬಲ ಬೆಲೆ ಯೋಜನೆ, ಬೆಳೆ ಸಾಲ ಪಡೆಯುವ ಸಂದರ್ಭಗಳಲ್ಲಿ ಹಾಗೂ ಇತರೆ ಪರಿಹಾರಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ.
ನೀವು ಕೈಗೊಳ್ಳುವ ಈ ಬೆಳೆ ಸಮೀಕ್ಷೆಯ ವಿವರಗಳು ಪಹಣಿಗಳಲ್ಲಿ ದಾಖಲಾಗುತ್ತದೆ ಹಾಗೂ ಇಲಾಖೆಯಿಂದ ದೊರೆಯುವ ಸವಲತ್ತುಗಳನ್ನು ಪಡೆಯಲು ಅನುಕೂಲವಾಗುತ್ತದೆ.

ಕಳೆದ ವರ್ಷ ಸಹ ತಾವು ಖುದ್ದಾಗಿ ಬೆಳೆ ಸಮೀಕ್ಷೆ ವಿವರಗಳನ್ನು ಆ್ಯಪ್ ಮೂಲಕ ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವುದಕ್ಕೆ ತಮಗೆ ಅಭಿನಂದನೆಗಳು.
ರೈತ ಬಂಧುಗಳೇ, ತಾವು ದಾಖಲಿಸುವ ಪ್ರತಿಯೊಂದು ಮಾಹಿತಿಯು ಮಹತ್ವವನ್ನು ಹೊಂದಿರುತ್ತದೆ. ಎಲ್ಲಾ ರೈತರು ಕೂಡಲೇ ಕಾರ್ಯೋನ್ಮುಖರಾಗಿ ರಾಜ್ಯ ಸರ್ಕಾರದ ಈ ಮಹಾತ್ವಾಕಾಂಕ್ಷಿ ಯೋಜನೆಯಲ್ಲಿ ಪಾಲ್ಗೊಳ್ಳಲು ಈ ಮೂಲಕ ವಿನಂತಿಸಿದೆ. ಕೇಂದ್ರ ಸರ್ಕಾರವು ಈ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿರುತ್ತದೆ.

ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು, ಅಧಿಕಾರ ಸ್ವೀಕರಿಸಿದ ತಕ್ಷಣವೇ ರೈತರ ಮಕ್ಕಳಿಗೆ ನೂತನ ವಿದ್ಯಾರ್ಥಿ ವೇತನ ಯೋಜನೆಯನ್ನು ಜಾರಿಗೊಳಿಸಿದ್ದಾರೆ. ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿ ಮೀಸಲಿಟ್ಟಿದ್ದಾರೆ.
ಇದಲ್ಲದೇ ಸಚಿವ ಸಂಪುಟದ ಸಭೆಯಲ್ಲಿ ಸಂಧ್ಯಾ ಸುರಕ್ಷಾ ಯೋಜನೆಯಡಿ ನೀಡಲಾಗುತ್ತಿದ್ದ ಪಿಂಚಣಿಯನ್ನು 1000 ರೂಪಾಯಿಗಳಿಂದ 1200 ರೂಪಾಯಿಗೆ ಹೆಚ್ಚಳ ಮಾಡಲಾಗಿದ್ದು, ಇದರಿಂದ 863.52 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗಲಿದ್ದು, ರಾಜ್ಯದ 35.98 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ.

ಅದೇ ರೀತಿ ವಿಧವಾ ವೇತನವನ್ನು ಕೂಡ ರೂ. 600 ರಿಂದ 800 ರೂಪಾಯಿಗೆ ಹೆಚ್ಚಿಸಲಾಗಿದ್ದು, ಇದಕ್ಕಾಗಿ 414 ಕೋಟಿ ರೂಪಾಯಿ ಹೆಚ್ಚುವರಿ ವೆಚ್ಚವಾಗಲಿದೆ. 17.25 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ.
ಇನ್ನು ಅಂಗವಿಕಲರ ಮಾಸಿಕ ವೇತನವನ್ನು ಕೂಡ ರೂ.600 ರಿಂದ 800 ರೂಪಾಯಿಗೆ ಹೆಚ್ಚಿಸಲಾಗಿದೆ. ಇದಕ್ಕೆ 90 ಕೋಟಿ ರಊಪಾಯಿ ಹೆಚ್ಚುವರಿ ವೆಚ್ಚವಾಗಲಿದ್ದು, 3.66 ಲಕ್ಷ ಫಲಾನುಭವಿಗಳಿಗೆ ಇದರ ಪ್ರಯೋಜನ ದೊರಕಲಿದೆ.

ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ನಮ್ಮ ಸರ್ಕಾರ ಕಂಕಣಬದ್ದವಾಗಿದ್ದು, ಅನೇಕ ಮಹತ್ತರ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಕೋವಿಡ್ ಹಿನ್ನೆಲೆಯಲ್ಲಿ ಸಾಧನೆಗಳ ವಿವರವನ್ನು ವಿಸ್ತøತವಾಗಿ ವಿವರಿಸಲು ಹೋಗುವುದಿಲ್ಲ.
ನಾನು ಜಿಲ್ಲಾ ಉಸ್ತುವಾರಿ ವಹಿಸಿಕೊಂಡ ನಂತರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳು, ಸವಾಲುಗಳನ್ನು ಮನಗಂಡಿದ್ದೇನೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ.

ವಿವಿಧತೆಯಲ್ಲಿ ಏಕತೆ ಸಾಧಿಸಿರುವ ನಮ್ಮ ದೇಶವು ಸ್ವತಂತ್ರಗೊಂಡು ಈ 74 ವಸಂತಗಳಲ್ಲಿ ಶಿಕ್ಷಣ, ವಿಜ್ಞಾನ-ತಂತ್ರಜ್ಞಾನ, ಕ್ರೀಡೆ, ವೈದ್ಯಕೀಯ, ಸಾಮಾಜಿಕ ಹಾಗೂ ಕಲೆ-ಸಾಂಸ್ಕಂತಿಕ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆಗೈದು ವಿಶ್ವದ ಮುಂಚೂಣಿ ರಾಷ್ಟ್ರವಾಗಿ ಹೊರಹೊಮ್ಮಿದೆ. ಇಂತಹ ಸುವರ್ಣ ಕಾಲಘಟ್ಟದಲ್ಲಿರುವ ನಮ್ಮ ಮೇಲೆ ದೇಶದ ಏಕತೆ-ಸಮಗ್ರತೆಯ ರಕ್ಷಣೆಯ ಜತೆಗೆ ಪ್ರಗತಿಯ ಈ ರಥವನ್ನು ಹಾಗೂ ಸ್ವಾತಂತ್ರ್ಯವನ್ನು ನಮ್ಮ ಮುಂದಿನ ಪೀಳಿಗೆಗೆ ತಲುಪಿಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಶ್ರಮಿಸೋಣ. ಎಲ್ಲರಿಗೂ ಮತ್ತೊಮ್ಮೆ ಸ್ವಾತಂತ್ರ್ಯೋತ್ಸವದ ಶುಭಾಶಯಗಳು.
ಜೈ ಹಿಂದ ಜೈ ಕರ್ನಾಟಕ…….

ಬೆಳಗಾವಿ ಜಿಲ್ಲೆಯ ಪ್ರಗತಿ ವರದಿ
ಕೋವಿಡ್ ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಈವರೆಗೆ 11,42,106 ಸಂಶಯಾಸ್ಪದ ರೋಗಿಗಳ ಗಂಟಲು ದ್ರವದ ಮಾದರಿ ತಪಾಸಣೆ ಮಾಡಲಾಗಿ ಒಟ್ಟು 78,672 ಜನರಲ್ಲಿ ಕೋವಿಡ್ ಸೋಂಕು ದೃಡಪಟ್ಟಿರುತ್ತದೆ. ಇವರಿಗೆ ಆಸ್ಪತ್ರೆಗಳಲ್ಲಿ ಉಪಚಾರ ನೀಡಿದ್ದು ಇವರಲ್ಲಿ 77,385 ರೋಗಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುತ್ತಾರೆ.
ಜಿಲ್ಲೆಯಿಂದ ವiಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿಯಂತೆ ಬಿಗಿ ಕ್ರಮಗಳನ್ನು ಕೈಕೊಳ್ಳಲಾಗಿದೆ.

ಜಿಲ್ಲೆಯಲ್ಲಿ 36,14,324 ಜನರಿಗೆ ಕೋವಿಡ್ ಲಸಿಕೆಯ ಮೊದಲ ಡೋಸ್ ನೀಡುವ ಗುರಿಯನ್ನು ಹೊಂದಲಾಗಿರುತ್ತದೆ. 12-8-2021 ರಂದು ಅನ್ವಯಿಸುವಂತೆ 15,73,245 ಜನರಿಗೆ ಲಸಿಕೆ ನೀಡಲಾಗಿದ್ದು, ಶೇಕಡಾ 43.53% ರಷ್ಟು ಪ್ರಗತಿ ಸಾಧಿಸಲಾಗಿದೆ. ಒಟ್ಟಾರೆ 7,46,400 ಜನರಿಗೆ 2 ನೇ ಡೋಸ್ ಲಸಿಕೆ ನೀಡುವ ಗುರಿ ಇದ್ದು ಅವರಲ್ಲಿ 4,28,589 ಜನರಿಗೆ ಲಸಿಕೆ ನೀಡಲಾಗಿದ್ದು, ಶೇ. 57..42 ರಷ್ಟು ಪ್ರಗತಿ ಸಾಧಿಸಲಾಗಿದೆ.
ಕೋವಿಡ್ ಸಮಯದಲ್ಲಿ ಫಲಾನುಭವಿಗಳಾದ ಗರ್ಭಿಣಿಯರು, ಬಾಣಂತಿಯರು ಹಾಗು ಅಂಗನವಾಡಿ ಮಕ್ಕಳಿಗೆ ಮನೆಗೆ ಪೂರಕ ಪೌಷ್ಠಿಕ ಆಹಾರ ಪದಾರ್ಥಗಳ ಕಿಟ್ಗಳನ್ನು ತಲುಪಿಸಲಾಗಿರುತ್ತದೆ. ಕೋವೀಡ್-19 ಸಂದರ್ಭದಲ್ಲಿ ಹಾನಿಗೊಳಗಾದ ಹೂ, ಹಣ್ಣು ಮತ್ತು ತರಕಾರಿ ಬೆಳೆದ ರೈತರಿಗೆ ಪ್ರತಿ ಹೆಕ್ಟೇರ್ಗೆ ರೂ.10000/- ಪರಿಹಾರ ಧನವನ್ನು ಒಟ್ಟು 16,174 ರೈತರಿಗೆ ಹಂಚಿಕೆ ಮಾಡಲಾಗುತ್ತಿದೆ.
ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಸಂಕಷ್ಟಕ್ಕೆ ಸಿಲುಕಿದ ಜಿಲ್ಲೆಯ ಕಲಾವಿದರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಒಟ್ಟು 1728 ಜನ ಕಲಾವಿದರಿಗೆ ರೂ. 3000 ಗಳಂತೆ ಸಹಾಯಧನ ಸಂದಾಯವಾಗಿರುತ್ತದೆ.

ಮೇ ಮತ್ತು ಜೂನ್ 2021 ನೇ ಮಾಹೆಯಲ್ಲಿ ಕೋವಿಡ್-19 ಎರಡನೆ ಅಲೆ ತೀವ್ರವಾಗಿ ಹಬ್ಬಿರುವ ಸಮಯದಲ್ಲಿ ಜಿಲ್ಲೆಯಲ್ಲಿ 68,883 ಅಂತ್ಯೋದಯ ಹಾಗೂ 10,67,158 ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವವರಿಗೆ ಹಾಗೂ ಆನ್ಲೈನನಲ್ಲಿ ಆದ್ಯತಾ ಪಡಿತರ ಚೀಟಿ ಕೋರಿ ಬಂದ ಅರ್ಜಿಗಳಿಗೂ ಸಹ ಪ್ರತಿ ಅರ್ಜಿಗೆ 10 ಕೆ.ಜಿ ಅಕ್ಕಿ ಉಚಿತವಾಗಿ ಪಡಿತರವನ್ನು ವಿತರಿಸಲಾಗಿರುತ್ತದೆ.

ಪ್ರಧಾನಮಂತ್ರಿಗಳ ಗರೀಬ್ ಕಲ್ಯಾಣ ಅನ್ನ ಯೋಜನೆ ಅಡಿ ಮೇ 2021 ರಿಂದ ಎಲ್ಲ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿಯಲ್ಲಿರುವ ಕುಟುಂಬದ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಉಚಿತವಾಗಿ ವಿತರಿಸಲಾಗುತ್ತಿದೆ. ಮುಖ್ಯಮಂತ್ರಿ ಅನಿಲಭಾಗ್ಯ ಯೋಜನೆಯಡಿ ಜಿಲ್ಲೆಯಲ್ಲಿ 11,885 ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಉಚಿತವಾಗಿ ಗ್ಯಾಸ್ ಸಂಪರ್ಕ ಒದಗಿಸಿದ್ದು, ಸದರಿ ಫಲಾನುಭವಿಗಳಿಗೆ ಎಪ್ರಿಲ್, ಮೇ ಮತ್ತು ಜೂನ್ 2021 ನೇ ಮಾಹೆಗಳಲ್ಲಿ ಪ್ರತಿ ಮಾಹೆಗೆ ಒಂದರಂತೆ ಉಚಿತವಾಗಿ ಸಿಲಿಂಡಗಳನ್ನು ವಿತರಿಸಲಾಗುತ್ತಿದೆ.
ವಿದ್ಯುತ್ ಮಗ್ಗ ನೇಕಾರರಿಗೆ ಕೋವಿಡ್ ಪ್ರಯುಕ್ತ 2020-21ನೇ ಸಾಲಿನಲ್ಲಿ ಒಟ್ಟು 15,215 ಫಲಾನುಭವಿಗಳಿಗೆ ತಲಾ ರೂ.2,000 ರಂತೆ ಪರಿಹಾರಧನವನ್ನು ಡಿ.ಬಿ.ಟಿ ಮೂಲಕ ಜಮಾ ಮಾಡಲಾಗಿರುತ್ತದೆ.

2021-22ನೇ ಸಾಲಿನಲ್ಲಿ ಕೋವಿಡ್ 2ನೇ ಅಲೆ ಪ್ರಯುಕ್ತ ಒಂದು ಸಲದ ಪರಿಹಾರ ಯೋಜನೆಯಡಿ ಪ್ರತಿ ವಿದ್ಯುತ್ ಮಗ್ಗಕ್ಕೆ ಇಬ್ಬರು ನೇಕಾರರಂತೆ ತಲಾ ರೂ.3,000 ಗಳನ್ನು ಡಿ.ಬಿ.ಟಿ ಮೂಲಕ ಜಮಾ ಮಾಡುವ ಕಾರ್ಯ ಪ್ರಗತಿಯಲ್ಲಿದೆ. ಈ ಪೈಕಿ ಈಗಾಗಲೇ 15,215 ಫಲಾನುಭವಿಗಳಿಗೆ ತಲಾ ರೂ.3,000 ಗಳನ್ನು ಡಿ.ಬಿ.ಟಿ. ಮೂಲಕ ಜಮಾ ಮಾಡಲಾಗಿರುತ್ತದೆ.
ಬೆಳಗಾವಿ ಜಿಲ್ಲೆಯ 16 ಸಮುದಾಯ ಆರೋಗ್ಯ ಕೇಂದ್ರಗಳಿಗೆ ಮೆಡಿಕಲ್ ಆಕ್ಸಿಜನ್ ಏರ್ ವ್ಯಾಕೂಮ್ ಗ್ಯಾಸ್ ಪೈಪಲೈನ್ ಅಳವಡಿಸಲು 6.78 ಕೋಟಿ ರೂಪಾಯಿ ಮಂಜೂರಾಗಿದ್ದು ಸಂಪೂರ್ಣ ಹಣವನ್ನು ವಿನಿಯೋಗಿಸಲಾಗಿದೆ. ಆಯುಷ್ಮಾನ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ 30 ಜೂನ್ 2021 ವರೆಗೆ ಒಟ್ಟು 73,133 ಫಲಾನುಭವಿಗಳಿಗೆ ರೂ.10,45,610 ಲಕ್ಷ ರೂಗಳನ್ನು ವಿನಿಯೋಗಿಸಲಾಗಿದೆ. ಕೊರೋನಾ ಸಾಂಕ್ರಾಮಿಕ ರೋಗದ ಅಡಿಯಲ್ಲಿ 403 ಕೇಸ್ಗಳಿಗೆ 296 ಲಕ್ಷ ರೂಪಾಯಿ ವಿನಿಯೋಗಿಸಲಾಗಿದೆ.

ಅತಿವೃಷ್ಟಿ ವೇಳೆ ಜನರಿಗೆ ತಾತ್ಕಾಲಿಕ ಆಶ್ರಯ ಒದಗಿಸಲು ಜಿಲ್ಲೆಯಲ್ಲಿ ಒಟ್ಟಾರೆ 230 ಕಾಳಜಿ ಕೇಂದ್ರಗಳನ್ನು ತೆರೆದು 87,982 ಜನರಿಗೆ ಆಶ್ರಯ ಒದಗಿಸಿ ಊಟೋಪಾಹಾರದ ವ್ಯವಸ್ಥೆ ಕಲ್ಪಿಸಲಾಗಿದೆ. 132 ಜಾನುವಾರು ಶಿಬಿರಗಳನ್ನು ತೆರೆದು 67,329 ಜಾನುವಾರುಗಳಿಗೆ ಆಶ್ರಯ ನೀಡಲಾಗಿದೆ. ಅತಿವೃಷ್ಟಿಯಿಂದ 324 ಮನೆಗಳು ಸಂಪೂರ್ಣ ಹಾನಿಯಾಗಿದ್ದು, 5003 ಮನೆಗಳು ಭಾಗಶಃ ಹಾನಿಗೊಳಗಾಗಿವೆ.
ಪ್ರಾಥಮಿಕ ಮಾಹಿತಿ ಪ್ರಕಾರ 1.15 ಲಕ್ಷ ಹೆಕ್ಟೇರ್ ಕೃಷಿ ಬೆಳೆ ಹಾಗೂ 3761 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಅದೇ ರೀತಿ 81 ಸೇತುವೆಗಳು, 1979 ಕಿ.ಮೀ. ರಸ್ತೆ, 1084 ಸರ್ಕಾರಿ ಶಾಲಾ ಕಟ್ಟಡಗಳು, 49 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾನಿಗೊಳಗಾಗಿವೆ. ಬೆಳೆ, ರಸ್ತೆ, ಸೇತುವೆ ಹಾಗೂ ಇನ್ನಿತರ ಮೂಲಸೌಕರ್ಯಗಳು ಸೇರಿದಂತೆ ಪ್ರಾಥಮಿಕ ಪ್ರಕಾರ ಬೆಳಗಾವಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಒಟ್ಟಾರೆ 2800 ಕೋಟಿ ರೂಪಾಯಿ ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಸುಮಾರು 115661 ಹೆಕ್ಟೇರ್ ಪ್ರದೇಶ ಬಾಧಿತ ಕ್ಷೇತ್ರವೆಂದು ಅಂದಾಜಿಸಲಾಗಿದ್ದು, ಜಂಟಿ ಸಮೀಕ್ಷೆ ಕಾರ್ಯ ಪ್ರಗತಿಯಲ್ಲಿರುತ್ತದೆ.

ಜಿಲ್ಲೆಯಲ್ಲಿ 54 ಕೋಟಿ ರೂ ವೆಚ್ಚದಲ್ಲಿ 4 ತಾಯಿ ಮಕ್ಕಳ ಆಸ್ಪತ್ರೆಗಳು ಮಂಜೂರಾಗಿದ್ದು, ಕಾಮಗಾರಿ ಪ್ರಗತಿಯ ಹಂತದಲ್ಲಿದೆ. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ 1 ಸೂಪರ್ ಸ್ಪೆಶಾಲಿಟಿ ಆಸ್ಪತ್ರೆಯ ನಿರ್ಮಾಣಕ್ಕಾಗಿ 140 ಕೋಟಿ ರೂಪಾಯಿ ಮಂಜೂರಾಗಿದ್ದು, ಇಲ್ಲಿಯವರೆಗೆ 78.87 ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ.
ಬೆಳಗಾವಿ ಜಿಲ್ಲೆಯ 16 ಸಮುದಾಯ ಆರೋಗ್ಯ ಕೇಂದ್ರಗಳಿಗೆ ಮೆಡಿಕಲ್ ಆಕ್ಸಿಜನ್ ಏರ್ ವ್ಯಾಕೂಮ್ ಗ್ಯಾಸ್ ಪೈಪಲೈನ್ ಅಳವಡಿಸಲು 6.78 ಕೋಟಿ ರೂಪಾಯಿ ಮಂಜೂರಾಗಿದ್ದು ಸಂಪೂರ್ಣ ಹಣವನ್ನು ವಿನಿಯೋಗಿಸಲಾಗಿದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಯಲ್ಲಿ ಮೆಡಿಕಲ್ ಆಕ್ಸಿಜನ್ ಏರ್ ವ್ಯಾಕೂಮ್ ಗ್ಯಾಸ್ ಪೈಪಲೈನ್ ಅಳವಡಿಸಲು 3.53 ಕೋಟಿ ರೂಪಾಯಿ ಮಂಜೂರಾಗಿದ್ದು ಇಲ್ಲಿಯವರೆಗೆ 1.54 ಕೋಟಿ ರೂಪಾಯಿ ವಿನಿಯೋಗಿಸಲಾಗಿದೆ.
ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ನರ್ಸಿಂಗ್ ಸ್ಕೂಲ್ ಹಾಗೂ ಹಾಸ್ಟೆಲ್ ಕಟ್ಟಡ ನಿರ್ಮಾಣಕ್ಕೆ 8.5 ಕೋಟಿ ರೂಪಾಯಿ ಮಂಜೂರಾಗಿರುತ್ತದೆ.
ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗಿರುವುದರಿಂದ ರೈತರಿಗೆ ಬಿತ್ತನೆ ಕಾರ್ಯಕ್ಕೆ ಅನುಕೂಲಕರವಾಗಿದೆ. 6.94 ಲಕ್ಷ ಹೆಕ್ಟೇರ್ಗಳಷ್ಟು ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲಿ ರಿಯಾಯಿತಿ ದರದಲ್ಲಿ ಒಟ್ಟು 1.68 ಲಕ್ಷ ರೈತರಿಗೆ 12.02 ಕೋಟಿ ರೂ.ಗಳ ಅನುದಾನದಲ್ಲಿ 45819 ಕ್ವಿಂಟಲ್ ಉತ್ತಮ ಗುಣಮಟ್ಟದ ಬಿತ್ತನೆ ಬೀಜಗಳನ್ನು ಪೂರೈಸಲಾಗಿದೆ.
ಪ್ರಧಾನ ಮಂತ್ರಿ ಕಿಸಾನ ಸಮ್ಮಾನ ನಿಧಿ ಯೋಜನೆ ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ 989.36 ಕೋಟಿ ರೂ.ಗಳನ್ನು 5.48 ಲಕ್ಷ ರೈತರ ಖಾತೆಗಳಿಗೆ ಜಮಾ ಮಾಡಲಾಗಿದೆ.

ತುರ್ತು ಸಂದರ್ಭದಲ್ಲಿ ರೈತರ ಮನೆ ಬಾಗಿಲಿಗೆ ತೆರಳಿ ಅವರ ಜಾನುವಾರುಗಳಿಗೆಶಸ್ತ್ರಚಿಕಿತ್ಸೆಯನ್ನು ಒದಗಿಸಲು “ಪಶು ಸಂಜೀವಿನಿ” ವಾಹನದ ಮೂಲಕ ತಕ್ಷಣದ ಸೇವೆಯನ್ನು ಒದಗಿಸಲಾಗುತ್ತಿದೆ. ಬೆಳಗಾವಿಯಲ್ಲಿ 3 ಕೋಟಿ ರೂಪಾಯಿ ಅನುದಾನದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರುವ ಸುಸಜ್ಜಿತ ಪಶು ಆಸ್ಪತ್ರೆಯ ಕಟ್ಟಡದ ಕಾಮಗಾರಿ ಪ್ರಗತಿಯಲ್ಲಿದೆ.

ಕರ್ನಾಟಕ ನೀರಾವರಿ ನಿಗಮ ನಿಯಮಿತದ ಉತ್ತರ ವಲಯ ಬೆಳಗಾವಿ ಈ ವಲಯದಡಿ ಅನೇಕ ಪ್ರಮುಖ ನೀರಾವರಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಘಟಪ್ರಭಾ ಯೋಜನೆಯಿಂದ 308326 ಹೆಕ್ಟೇರ್ ತೂಬುಗಾಲುವೆ ಕ್ಷೇತ್ರವನ್ನು ಹಾಗೂ 280466 ಹೆಕ್ಟರ್ ಹೊಲಗಾಲುವೆ ಕ್ಷೇತ್ರವನ್ನು ನಿರ್ಮಿಸಲಾಗಿದೆ. ಹಿಪ್ಪರಗಿ ಯೋಜನೆಯಿಂದ 74742 ಹೆಕ್ಟೇರ್ ತೂಬುಗಾಲುವೆ ಕ್ಷೇತ್ರವನ್ನು ಹಾಗೂ 69474 ಹೆಕ್ಟೇರ್ ಹೊಲಗಾಲುವೆ ಕ್ಷೇತ್ರವನ್ನು ನಿರ್ಮಿಸಲಾಗಿದೆ. ಈ ಯೋಜನೆಯಡಿ 4 ಏತ ನೀರಾವರಿ ಯೋಜನೆಯನ್ನು ಪೂರ್ಣಗೊಂಡಿರುತ್ತದೆ.
ಮಾರ್ಕಂಡೇಯ ಯೋಜನೆಯಿಂದ 14383 ಹೇಕ್ಟರ್ ತೂಬುಗಾಲುವೆ ಕ್ಷೇತ್ರವನ್ನು ಹಾಗೂ 10915 ಹೆಕ್ಟರ್ ಹೊಲಗಾಲುವೆ ಕ್ಷೇತ್ರವನ್ನು ನಿರ್ಮಿಸಲಾಗಿದೆ. ಶ್ರೀ ರಾಮೇಶ್ವರ ಏತ ನೀರಾವರಿ ಯೋಜನೆಯಿಂದ 13772 ಹೆಕ್ಟರ್ ತೂಬುಗಾಲುವೆ ಕ್ಷೇತ್ರವನ್ನು ಹಾಗೂ 13287 ಹೇ. ಹೊಲಗಾಲುವೆ ಕ್ಷೇತ್ರವನ್ನು ನಿರ್ಮಿಸಲಾಗಿದೆ. ಈ ಯೋಜನೆಯನ್ನು ಪೂರ್ಣಗೊಂಡಿರುತ್ತದೆ. ಘಟಪ್ರಭಾ ಎಡದಂಡೆ ಕಾಲುವೆ ಆಧುನೀಕರಣ ಕಾಮಗಾರಿಯಡಿ ಘಟಪ್ರಭಾ ಎಡದಂಡೆ ಕಾಲುವೆಯ74.00ಕಿಮೀ ಮತ್ತು 56.00ಕಿಮೀ ವಿತರಣಾ ಕಾಲುವೆಯನ್ನು ಪುನಃಶ್ಚೇತನಗೊಳಿಸಲಾಗಿದೆ.

ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯಿಂದ ಒಟ್ಟು 52700 ಹೇ. ಕ್ಷೇತ್ರಕ್ಕೆ ನೀರಾವರಿ ಕಲ್ಪಿಸಲು ಉದ್ದೇಶಿಸಲಾಗಿತ್ತು, ಈ ಯೋಜನೆಯಡಿ 43000 ಹೆಕ್ಟರ್ ತೂಬುಗಾಲುವೆ ಕ್ಷೇತ್ರವನ್ನು ನಿರ್ಮಿಸಲಾಗಿದೆ. ಈ ಯೋಜನೆಯ ಕಾಮಗಾರಿಯು ಪ್ರಗತಿಯಲ್ಲಿರುತ್ತದೆ. ಬಳ್ಳಾರಿ ನಾಲಾ ಯೋಜನೆಯಿಂದ 8200 ಹೆಕ್ಟರ್ ಕ್ಷೇತ್ರಕ್ಕೆ, ಕಿಣಿಯೆ ಯೋಜನೆಯಿಂದ 1200 ಹೆಕ್ಟರ್ ಕ್ಷೇತ್ರಕ್ಕೆ, ಬಸವೇಶ್ವರ (ಕೆಂಪವಾಡ) ಏತ ನೀರಾವರಿ ಯೋಜನೆಯಿಂದ 27462 ಹೆಕ್ಟರ್ ಕ್ಷೇತ್ರಕ್ಕೆ, ಚಚಡಿ ಏತ ನೀರಾವರಿ ಯೋಜನೆಯಿಂದ 2718 ಹೆಕ್ಟರ್ ಕ್ಷೇತ್ರಕ್ಕೆ, ಮುರುಗೋಡ ಏತ ನೀರಾವರಿ ಯೋಜನೆಯಿಂದ 1939 ಹೆಕ್ಟರ್ ಕ್ಷೇತ್ರಕ್ಕೆ, ವೀರಭದ್ರೆಶ್ವರ ಏತ ನೀರಾವರಿ ಯೋಜನೆಯಿಂದ 17377 ಹೆಕ್ಟರ್ ಕ್ಷೇತ್ರಕ್ಕೆ, ಸಾಲಾಪೂರ ಏತ ನೀರಾವರಿ ಯೋಜನೆಯಿಂದ 13000 ಹೇಕ್ಟರ್ ಕ್ಷೇತ್ರಕ್ಕೆ ನೀರಾವರಿ ಕಲ್ಪಿಸಲು ಉದ್ದೇಶಿಸಲಾಗಿದೆ. ಈ ಎಲ್ಲಾ ಯೋಜನೆಗಳ ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ.

2018-19 ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಲಾದ ಗಟ್ಟಿ ಬಸವಣ್ಣ ಯೋಜನೆ(ಡ್ಯಾಂ ನಿರ್ಮಾಣ)ಗೆ ರೂ 990.00ಕೋಟಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಟೆಂಡರ ಪ್ರಕ್ರಿಯೆಯಲ್ಲಿದೆ. ಬೆಳಗಾವಿ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಕೆರೆಗೆ ನೀರು ತುಂಬಿಸುವ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಅವುಗಳೂ ಸಹ ಪ್ರಗತಿಯಲ್ಲಿವೆ.
ಬೆಳಗಾವಿ ಜಿಲ್ಲೆಯ ರಾಯಭಾಗ್, ಕುಡಚಿ, ಕಿತ್ತೂರು, ಬೈಲಹೊಂಗಲ, ಚಿಕ್ಕೋಡಿ, ಅಥಣಿ ಮತ್ತು ಹುಕ್ಕೇರಿ ತಾಲ್ಲೂಕುಗಳಲ್ಲಿನ ಒಟ್ಟು 137 ಕೆರೆಗಳಿಗೆ ನೀರು ತುಂಬಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.

ಮಾತೃಪೂರ್ಣ ಯೋಜನೆಯು ಗರ್ಭಿಣಿ ಹಾಗೂ ಬಾಣಂತಿಯರ ಆರೋಗ್ಯದಲ್ಲಿನ ಪೌಷ್ಠಿಕಾಂಶದ ಸುಧಾರಣೆಗಾಗಿ 47640 ಗರ್ಭಿಣಿಯರು ಹಾಗೂ 44858 ಬಾಣಂತಿಯರು ಈ ಯೋಜನೆಯ ಸೌಲಭ್ಯ ಪಡೆಯುತ್ತಿದ್ದಾರೆ.
ಮಾತೃವಂದನಾ ಯೋಜನೆಯಡಿ 1,27,000 ಗರ್ಭಿಣಿ ಹಾಗೂ ಬಾಣಂತಿ ಫಲಾನುಭವಿಗಳಿಗೆ 43 ಕೋಟಿ ರೂಪಾಯಿ ಸಂದಾಯ ಮಾಡಲಾಗಿದೆ. ಭಾಗ್ಯಲಕ್ಷ್ಮೀ ಯೋಜನೆಯಡಿ 259663 ಫಲಾನುಭವಿಗಳಿಗೆ ಮಂಜೂರಿ ನೀಡಿದ್ದು, ಇಲ್ಲಿಯವರೆಗೆ 242594 ಬಾಂಡ್ಗಳನ್ನು ವಿತರಣೆ ಮಾಡಲಾಗಿದೆ.

“ನೇಕಾರರ ಸಮ್ಮಾನ” ಯೋಜನೆಯಡಿ 2021-22 ನೇ ಸಾಲಿನಲ್ಲಿ 5,345 ನೇಕಾರರಿಗೆ ತಲಾ ರೂ. 2000-00 ದಂತೆ ರೂ. 106.90 ಲಕ್ಷ ಸಹಾಯಧನ ಬಿಡಗುಡೆ ಮಾಡಲಾಗಿದೆ. 2020-21ನೇ ಸಾಲಿನಲ್ಲಿ ನೇಕಾರರು ನೇಕಾರಿಕೆ ಉದ್ದೇಶಕ್ಕಾಗಿ ಸಹಕಾರಿ ಸಂಘಗಳು/ಸಹಕಾರಿ ಬ್ಯಾಂಕುಗಳಿಂದ ಪಡೆದ ಗರಿಷ್ಟ ರೂ.1.00 ಲಕ್ಷಗಳ ವರೆಗಿನ ಸಾಲ ಮನ್ನಾ ಯೋಜನೆಯಡಿ ಒಟ್ಟು 1231 ನೇಕಾರರ ರೂ.449.53 ಲಕ್ಷ ಸಾಲ ಮನ್ನಾ ಮಾಡಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಪ್ರಸ್ತುತ 51 ಮೆಟ್ರಿಕ್ ಪೂರ್ವಬಾಲಕರ ಹಾಗೂ 15 ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯಗಳು ಮತ್ತು 19 ಮೆಟ್ರಿಕ್ ನಂತರದ ಬಾಲಕರ ಮತ್ತು 9 ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳು ಕಾರ್ಯನಿರ್ವಹಿಸುತ್ತಿವೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ವಿವಿಧ ಯೋಜನೆಗಡಿ 1276 ಅಲ್ಪಸಂಖ್ಯಾತರ ಫಲಾನುಭವಿಗಳಿಗೆ ರೂ. 10.57 ಕೋಟಿ ರೂಪಾಯಿ ಸಾಲ ಹಾಗೂ ಸಹಾಯಧನ ಹಣವನ್ನು ಮಂಜೂರಾತಿ ನೀಡಿ ಸಾಧನೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯು ಸಹಕಾರ ಜಿಲ್ಲೆಯಾಗಿದು,್ದ ಸುಮಾರು 5,921 ವಿವಿಧ ರೀತಿಯ ಸಹಕಾರ ಸಂಘಗಳು ಹಾಗೂ 1,129 ಸೌಹಾರ್ದ ಸಹಕಾರಿಗಳು ಕೆಲಸ ನಿರ್ವಹಿಸುತ್ತಿವೆ. 2020-21 ನೇ ಸಾಲಿನಲ್ಲಿ 4 ಲಕ್ಷ 33 ಸಾವಿರ ರೈತರಿಗೆ ರೂ.2237.48 ಕೋಟಿ ಬೆಳೆ ಸಾಲ ವಿತರಿಸಲಾಗಿದೆ.
ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಸದಸ್ಯತ್ವ ಹೊಂದಿದ 35 ಸಾವಿರರೈತ ಸದಸ್ಯರಿಂದ 714.36 ಲೀಟರ್ ಹಾಲು ಸಂಗ್ರಹಿಸಿ ಒಟ್ಟು ರೂ. 35.71 ಕೋಟಿ ಪೆÇ್ರೀತ್ಸಾಹದನವನ್ನು ರೈತರಿಗೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಗ್ರಾಮೀಣ ಜನವಸತಿಗಳಿಗೆ 2023 ರೊಳಗಾಗಿ ನಳ ನೀರು ಸಂಪರ್ಕವನ್ನು ಒದಗಿಸಲಾಗುವುದು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ 2021-22ನೇ ಸಾಲಿಗೆ ರೂ. 104.47 ಕೋಟಿ ಅಂದಾಜು ಮೊತ್ತ ನಿಗದಿಪಡಿಸಲಾಗಿದೆ.
ಇಲ್ಲಿಯವರೆಗೆ ರೂ.77.56 ಕೋಟಿ ಅನುದಾನ ಖರ್ಚು ಮಾಡಲಾಗಿದೆ. 08 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಇವುಗಳಲ್ಲಿ 06 ಕಾಮಗಾರಿಗಳು ಮುಕ್ತಾಯವಾಗಿರುತ್ತವೆ. 02 ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ.
ಬೆಳಗಾವಿ ಜಿಲ್ಲೆಗೆ ಸರ್ಕಾರದಿಂದ ಒಟ್ಟು 1349 ಶುದ್ದಿಕರಣ ಘಟಕಗಳು ಮಂಜೂರಾಗಿರುತ್ತವೆ. ಅದರಲ್ಲಿ 1330 ಶುದ್ಧೀಕರಣ ಘಟಕಗಳು ಸ್ಥಾಪಿಸಲಾಗಿದೆ.

ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯನ್ನಾಗಿಸಲು ಉದ್ದೇಶಿಸಿದ್ದು ಈಗಾಗಲೇ 499 ಗ್ರಾಮ ಪಂಚಾಯತಿಗಳಲ್ಲಿ ಘನ ಮತ್ತು ದ್ರವ ತ್ಯಾಜ್ಯ ಘಟಕ ಮಂಜೂರಾತಿಯಾಗಿದ್ದು 108 ಗ್ರಾಮ ಪಂಚಾಯತಿಗಳಲ್ಲಿ ಕಸ ಸಂಗ್ರಹಣೆ ಮತ್ತು ನಿರ್ವಹಣೆ ಮಾಡಲಾಗುತ್ತಿದೆ ಹಾಗೂ ಇನ್ನೂಳಿದ ಗ್ರಾಮ ಪಂಚಾಯತಿಗಳಲ್ಲಿ ಕಸ ಸಂಗ್ರಹಣೆ ಮತ್ತು ನಿರ್ವಹಣೆ ಮಾಡಲು ಕ್ರಮ ವಹಿಸಲಾಗುತ್ತಿದೆ.
ವಿವಿಧ ವಸತಿ ಯೋಜನೆಯಡಿ ಸನ್ 2010-11 ನೇ ಸಾಲಿನಿಂದ ಇಲ್ಲಿಯವರೆಗೆ ಜಿಲ್ಲಾದ್ಯಂತ ಒಟ್ಟು 2,96,548 ಫಲಾನುಭವಿಗಳಿಗೆ ಈಗಾಗಲೇ ಮನೆ ಮಂಜೂರು ಮಾಡಲಾಗಿರುತ್ತದೆ.

2021-22 ನೇ ಸಾಲಿನಲ್ಲಿ ಮಹಾತ್ಮಾ ಗಾಂದಿs ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 7.13 ಲಕ್ಷ ಉದ್ಯೋಗ ಚೀಟಿಗಳನ್ನು ವಿತರಿಸಲಾಗಿರುತ್ತದೆ. ಭೌತಿಕ ಗುರಿ 125.00 ಲಕ್ಷಗಳ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿದ್ದು, ಅದರ ಪೈಕಿ 58.90 ಲಕ್ಷಗಳಷ್ಟು ಮಾನವ ದಿನಗಳನ್ನು ಸೃಜಿಸಿ ಶೇ 47.12 % ರಷ್ಟು ಪ್ರಗತಿ ಸಾಧಿಸಲಾಗಿದೆ.
ಕೆ.ಐ.ಎ.ಡಿ.ಬಿ. ವತಿಯಿಂದ ಹೊಸ ಕೈಗಾರಿಕಾ ಪ್ರದೇಶ ಸ್ಥಾಪನೆಗಾಗಿ ಹುಕ್ಕೇರಿ ತಾಲೂಕಿನ ಕಣಗಲಾದಲ್ಲಿ 822 ಎಕರೆ ಜಮೀನನ್ನು ಕೈಗಾರಿಕಾ ಪ್ರದೇಶ ಸ್ಥಾಪನೆಗಾಗಿ ಸ್ವಾಧೀನ ಪಡಿಸಿಕೊಂಡು, ರೂ. 100 ಕೋಟಿ ವೆಚ್ಚದಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿ ಪಡಿಸಲಾಗಿದೆ. ಕಣಗಲಾ ಕೈಗಾರಿಕಾ ಪ್ರದೇಶದಲ್ಲಿ ನಿವೇಶನದ ಹಂಚಿಕೆಗಾಗಿ ಒಟ್ಟು 290 ಕೈಗಾರಿಕೋದ್ಯಮಿಗಳು ಅರ್ಜಿ ಸಲ್ಲಿಸಿದ್ದು, ನಿವೇಶನ ಹಂಚಿಕೆ ಪ್ರಗತಿಯಲ್ಲಿದೆ.

24 ಅತಿ ಸಣ್ಣ ಮತ್ತು ಸಣ್ಣ ಕೈಗಾರಿಕಾ ಘಟಕಗಳಿಗೆ ರೂ. 2.95 ಕೋಟಿ ಸಹಾಯಧನ ಮಂಜೂರು ಮಾಡಲಾಗಿದೆ. 2 ಅತಿ ಸಣ್ಣ ಕೈಗಾರಿಕಾ ಘಟಕಗಳಿಗೆ ರೂ. 2.44 ಲಕ್ಷ ಬಡ್ಡಿ ಸಹಾಯಧನ ಮಂಜೂರು ಮಾಡಲಾಗಿದೆ.
ಬೆಳಗಾವಿ ಮಹಾನಗರ ಪಾಲಿಕೆಗೆ ಸಂಉಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರವು ನೀರು ಸರಬರಾಜು ವ್ಯವಸ್ಥೆಯಲ್ಲಿ ಸುಧಾರಣೆಯನ್ನು ತರಲು ಉದ್ದೇಶಿಸಿದ್ದು, ವಿಶ್ವ ಬ್ಯಾಂಕಿನ ಧನ ಸಹಾಯದ ನೆರವಿನೊಂದಿಗೆ ಬೆಳಗಾವಿ ನಗರದಲ್ಲಿ 24/7 ನಿರಂತರ ಕುಡಿಯುವ ನೀರಿನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಸದರಿ ಯೋಜನೆಯ ಮೊತ್ತವು ರೂ.804.13 ಕೋಟಿ ಆಗಿದೆ.
ನಗರದ ಒಳಚರಂಡಿ ವ್ಯವಸ್ಥೆಯನ್ನು ಹಾಗೂ ತ್ಯಾಜ್ಯ ನೀರು ಸಂಸ್ಕರಣಾ ಘಟಕವನ್ನು ಅಭಿವೃದ್ಧಿಪಡಿಸುವ 156 ಕೋಟಿಗಳ ಅನುದಾನದ ಕಾಮಗಾರಿ ಪ್ರಗತಿಯಲ್ಲಿರುತ್ತಢದೆ.

ಬೆಳಗಾವಿ ಮಹಾನಗರ ಪಾಲಿಕೆಗೆ 2020-21 ನೇ ಸಾಲಿಗೆ ಮಹಾತ್ಮಾಗಾಂಧಿ ನಗರ ವಿಕಾಸ ಯೋಜನೆಯಡಿ ರೂ 125.00 ಕೋಟಿಗಳ ಅನುದಾನದಡಿಯಲ್ಲಿ ಒಟ್ಟು 90 ಕಾಮಗಾರಿಗಳು ಮಂಜೂರಾಗಿದ್ದು, ಇದರಲ್ಲಿ ಈಗಾಗಲೇ 25 ಕಾಮಗಾರಿಗಳು ಪ್ರಗತಿಯಲ್ಲಿದ್ದು, ಬಾಕಿ ಉಳಿದ 65 ಕಾಮಗಾರಿಗಳು ಟೆಂಡರ ಹಂತದಲ್ಲಿರುತ್ತವೆ,

ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ಸ್ಮಾರಕ ಭವನ, ಚೌಕಿಮಠದ ಗದ್ದುಗೆ ಅಭಿವೃದ್ಧಿ ಮತ್ತು ಕಿತ್ತೂರು ಸಂಸ್ಥಾನದ ಅರಮನೆಯ ಪ್ರತಿರೂಪ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು 10 ಕೋಟಿ ರಊ ಕ್ರಿಯಾ ಯೋಜನೆ ಅನುಮೋದನೆ ನೀಡಲಾಗಿದೆ.
ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಆವರಣ ಹಾಗೂ ಅಗತ್ಯ ಕಟ್ಟಡಗಳ ನಿರ್ಮಾಣಕ್ಕಾಗಿ ಹಿರೇಬಾಗೇವಾಡಿ ಗ್ರಾಮದ ಬಳಿ 126.27 ಎಕರೆ ಜಾಗವನ್ನು ವಿಶ್ವವಿದ್ಯಾಲಯಕ್ಕೆ ಪರಭಾರೆ ಮಾಡಲಾಗಿರುತ್ತದೆ. ವಿಶ್ವವಿದ್ಯಾಲಯದ ಆಡಳಿತ ಕಚೇರಿ, ಪರೀಕ್ಷಾ ಕೇಂದ್ರ, ಅಕಾಡೆಮಿಕ್ ಕಟ್ಟಡ, ಗ್ರಂಥಾಲಯ ಸಏರಿದಂತೆ 10 ಕಟ್ಟಡಗಳ ನಿರ್ಮಾಣಕ್ಕಾಗಿ ವಿಶ್ವವಿದ್ಯಾಲಯ ರೂಪಿಸಿರುವ 110 ಕೋಟಿ ರೂಪಾಯಿ ವೆಚ್ಚದ ಕ್ರಿಯಾ ಯೋಜನೆಗೂ ಅನುಮೋದನೆ ನೀಡಲಾಗಿದೆ.ಘೂಳಪ್ಪ ಹೊಸಮನಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಪೆÇಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಡಿಎಚ್‍ಓ ಡಾ.ಎಸ್.ವಿ.ಮುನ್ಯಾಳ ಮತ್ತಿತರರು ಉಪಸ್ಥಿತರಿದ್ದರು.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');