ಸ್ವಾತಂತ್ರ್ಯ ಹೋರಾಟಗಾರರ ಪುಸ್ತಕವನ್ನು ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಇರಿಸಿ: ಬನವಣೆ

0
🌐 Belgaum News :

ಚಿಕ್ಕೋಡಿ : ಸ್ಥಳೀಯ ಸ್ವಾತಂತ್ರ್ಯ ಹೋರಾಟಗಾರರ ಹೋರಾಟ ಹಾಗೂ ಅವರ ದೇಶ ಸೇವೆಯ ಸ್ಮರಣೆ ಕುರಿತು ವಿದ್ಯಾರ್ಥಿಗಳ ಅಧ್ಯಯನಕ್ಕಾಗಿ ಇತಿಹಾಸದ ಪುಸ್ತಕಗಳನ್ನು ರಚಿಸಿ ಅವುಗಳನ್ನು ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಇರಿಸುವಂತಾಗಬೇಕು ಎಂದು ಕಾರ್ಖಾನೆ ಅಧ್ಯಕ್ಷ ಭರತೇಶ ಬನವಣೆ ಹೇಳಿದರು.

ಇಲ್ಲಿನ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾನುವಾರ ಆಯೋಜಿಸಿದ್ದ 75ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹಾತ್ಮರ ತ್ಯಾಗ ಬಲಿದಾನಗಳ ಬಗ್ಗೆ ನೆನಪಿಸಿದರು. ಎಲ್ಲರು ತಮ್ಮ ತಮ್ಮ ಕಾರ್ಯ ಮತ್ತು ಕರ್ತವ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸುವ ಮೂಲಕ ದೇಶದ ಪ್ರಗತಿಯಲ್ಲಿ ನಮ್ಮ ಕೊಡುಗೆ ನೀಡೋಣ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾರ್ಖಾನೆಯ ಅಂಗ ಸಂಸ್ಥೆಯಾದ ಗಂಗಾ ಶುಗರ ಪ್ರೌಢಶಾಲೆಗೆ ಈ ವರ್ಷ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿರುವ 5ಜನ ವಿದ್ಯಾರ್ಥಿಗಳನ್ನು ಸತ್ಕರಿಸಲಾಯಿತು.
ಕಾರ್ಖಾನೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಕೋರೆ, ನಿರ್ದೇಶಕರಾದ ರಾಮಚಂದ್ರ ನಿಶಾನದಾರ, ವ್ಯವಸ್ಥಾಪಕ ನಿರ್ದೇಶಕ ಆರ್. ಟಿ. ದೇಸಾಯಿ, ಕಾರ್ಖಾನೆಯ ವಿಭಾಗಾಧಿಕಾರಿಗಳು,ಕಾರ್ಮಿಕವರ್ಗ ಮತ್ತು ಕಾರ್ಖಾನೆಯ ಗಂಗಾ ಶುಗರ ಶಾಲಾ ಶಿಕ್ಷಕ ವರ್ಗ, ವಿದ್ಯಾರ್ಥಿಗಳು ಹಾಗೂ ರೈತಭಾಂದವರು ಉಪಸ್ಥಿತರಿದ್ದರು.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');