ಎಲ್ಲಾ ಶಿಕ್ಷಕರಿಗೆ ಲಸಿಕೆ ಕಡ್ಡಾಯ: ಸಚಿವ ನಾಗೇಶ್‌

0
🌐 Belgaum News :

ಬೆಂಗಳೂರು : ರಾಜ್ಯದಲ್ಲಿ ಅಗಸ್ಟ್‌ 23ರಿಂದ 9 ರಿಂದ 12ನೇ ತರಗತಿಗಳು ಆರಂಭವಾಗಲಿದ್ದು, ಎಲ್ಲಾ ಶಿಕ್ಷಕರಿಗೆ ಕಡ್ಡಾಯವಾಗಿ ಕೊರೊನಾ ಲಸಿಕೆಯನ್ನು ಹಾಕಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಹೇಳಿದ್ದಾರೆ.
ರಾಜ್ಯದಾದ್ಯಂತ ಪೋಷಕರು, ಶಾಲೆಗಳ ಆಡಳಿತ ಮಂಡಳಿ ಹಾಗೂ ಕೋವಿಡ್‌ ತಾಂತ್ರಿಕ ಸಮಿತಿಯ ಅಭಿಪ್ರಾಯದ ಮೇರೆಗೆ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಕೊರೊನಾ ವೈರಸ್‌ ಸೋಂಕಿನಿಂದ ಮಕ್ಕಳು ದೂರ ಉಳಿಯುವ ಸ್ಥಿತಿ ನಿರ್ಮಾಣವಾಗಿದ್ದು, ತಜ್ಞರ ಸಲಹೆಯ ಮೇರೆಗೆ 9,10,11ಮತ್ತು 12ನೇ ತರಗತಿಗಳನ್ನು ಆರಂಭಿಸಲಾಗುತ್ತಿದೆ.
ಈಗಾಗಲೇ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಕೊರೊನಾ ಲಸಿಕೆ ಹಾಕಿಸುವ ಕಾರ್ಯವನ್ನು ಮಾಡಲಾಗಿದೆ. ಉಳಿದ ಶಿಕ್ಷಕರಿಗೆ ಕೊರೊನಾ ಲಸಿಕೆಯನ್ನು ಅಗಸ್ಟ್‌ 23ರ ಒಳಗಾಗಿ ಕೊಡಿಸಲಾಗುವುದು. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕೊರೊನಾ ಲಸಿಕೆ ನೀಡುವ ವ್ಯವಸ್ಥೆಯನ್ನು ಮಾಡಲಾಗುವುದು ಎಂದಿದ್ದಾರೆ.
ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಗಸ್ಟ್‌ 23ರಿಂದ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ಆದರೆ ಕೊರೊನಾ ಸೋಂಕು ಹೆಚ್ಚಿರುವ ರಾಜ್ಯದ ಗಡಿಭಾಗದ ಜಿಲ್ಲೆಗಳಲ್ಲಿ ಮಾತ್ರ ಶಾಲೆಗಳು ಆರಂಭಗೊಳ್ಳುತ್ತಿಲ್ಲ. ಉಳಿದಂತೆ ಎಲ್ಲಾ ಜಿಲ್ಲೆಗಳಲ್ಲಿಯೂ ಶಾಲೆಯ ಬಾಗಿಲು ತೆರೆಯುತ್ತಿದೆ. ಶಾಲಾರಂಭದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಸಕಲ ಸಿದ್ದತೆಗಳನ್ನು ಮಾಡಿಕೊಂಡಿದೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');