ಹುಕ್ಕೇರಿ ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ಪಣ

0
🌐 Belgaum News :

ಹುಕ್ಕೇರಿ : ಕ್ಷೇತ್ರದ ಸರ್ವಾಂಗೀಣ ಪ್ರಗತಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಅನೇಕ ಯೋಜನೆಗಳನ್ನು ಅನುಷ್ಠಾನಗೊಸುವ ಮೂಲಕ ಇಡೀ ರಾಜ್ಯದಲ್ಲಿಯೇ ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ಪಣ ತೊಡಲಾಗಿದೆ ಎಂದು ಮಾಜಿ ಸಂಸದರೂ ಆದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ ಕತ್ತಿ ಹೇಳಿದರು.

ತಾಲೂಕಿನ ಹುಲ್ಲೋಳಿಯಲ್ಲಿ ಬುಧವಾರ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ, ಅವರು ಮಾತನಾಡಿ, ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹಗಲಿರುಳು ಶ್ರಮಿಸಲಾಗುತ್ತಿದೆ ಎಂದರು.
ಗ್ರಾಮದಲ್ಲಿ ಸುವರ್ಣ ಗ್ರಾಮ ಯೋಜನೆಯ 3 ನೇ ಹಂತದ ಹೆಚ್ಚುವರಿ 67 ಲಕ್ಷ ರೂ ಅನುದಾನದಲ್ಲಿ ಕೆಆರ್‍ಐಡಿಎಲ್ (ಭೂಸೇನಾ ನಿಗಮ)ದಿಂದ ಕಾಂಕ್ರಿಟ್ ರಸ್ತೆ ಮತ್ತು ಫೇವರ್ಸ್ ಕಾಮಗಾರಿ ನಿರ್ಮಾಣದಿಂದ ಜನರ ಸಂಚಾರಕ್ಕೆ ಅನುಕೂಲವಾಗಿದೆ.

ಹುಲ್ಲೋಳಿ, ಹುಲ್ಲೋಳಿಹಟ್ಟಿ ಮತ್ತು ಯಾದಗೂಡ ಗ್ರಾಮದಲ್ಲಿಯೂ ಇನ್ನುಳಿದ ಮೂಲಭೂತ ಸೌಲಭ್ಯಗಳ ನಿರ್ಮಾಣ ಕಾಮಗಾರಿಯನ್ನು ಭೂಸೇನಾ ನಿಗಮಕ್ಕೆ ನೀಡಲಾಗುವುದು. ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಅವರು ಹೇಳಿದರು.

ಕೊರೋನಾ ಸಂದರ್ಭದಲ್ಲಿ ವೈದ್ಯಕೀಯ ಸಿಬ್ಬಂದಿ, ಆಶಾ-ಅಂಗನವಾಡಿ ಕಾರ್ಯಕರ್ತೆಯರು, ಪುರಸಭೆ ಸಿಬ್ಬಂದಿ, ಪೊಲೀಸ್ ಇಲಾಖೆ, ಆರ್‍ಡಿಪಿಆರ್ ಮತ್ತು ಕಂದಾಯ ಇಲಾಖೆ ಸೇರಿದಂತೆ ಇಲಾಖೆಗಳ ನೌಕರರು ತಮ್ಮ ಪ್ರಾಣದ ಹಂಗು ತೊರೆದು ಜನರ ಜೀವ ಕಾಪಾಡಿದ್ದಾರೆ. ಗಿಡಮರಗಳ ಸಂಖ್ಯೆ ಕಡಿಮೆಯಿಂದ ಆಕ್ಸಿಜನ್ ಕೊರತೆಯಾಗುತ್ತಿದ್ದು ಪ್ರತಿಯೊಬ್ಬರೂ ಸಸಿ ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಬೇಕು ಎಂದು ಅವರು ಹೇಳಿದರು.

ಕೆಆರ್ ಐಡಿಎಲ್ ಗೋಕಾಕ ಎಇಇ ಆರ್.ಪಿ.ನಾರಾಯಣಕರ, ಕಿರಿಯ ಅಭಿಯಂತರ ಅಮರ ಬಿರ್ಡೆ, ಬಿಇಒ ಮೋಹನ ದಂಡಿನ್, ಬಿಸಿಯೂಟ ಯೋಜನೆ ಸಹಾಯಕ ನಿರ್ದೇಶಕ ಎಸ್.ಎಸ್.ಹಿರೇಮಠ, ಗ್ರಾಪಂ ಅಧ್ಯಕ್ಷೆ ಶಿವಲೀಲಾ ಮಾಯಪ್ಪಗೋಳ, ಉಪಾಧ್ಯಕ್ಷ ಕಲ್ಮೇಶ ಅಮ್ಮಣಗಿ, ಪಿಡಿಒ ಎಂ.ಎಂ.ಹಿರೇಮಠ, ಪಿಕೆಪಿಎಸ್ ಅಧ್ಯಕ್ಷ ಕಲಗೌಡ ಪಾಟೀಲ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಂತೋಷ ನಿರ್ವಾಣಿ ಮತ್ತಿತರರು ಉಪಸ್ಥಿತರಿದ್ದರು.

ಎನ್‍ಡಿಆರ್ ಎಪ್‍ನಿಂದ ಕೈಗೆತ್ತಿಕೊಂಡ ಪ್ರಾಥಮಿಕ ಶಾಲಾ ಕೊಠಡಿಗಳ ಉದ್ಘಾಟನೆ, ಸಸಿ ನೆಡುವ ಕಾರ್ಯಕ್ರಮ, ಕೊರೋನಾ ವಾರಿಯರ್ಸ್‍ಗಳನ್ನು ಸನ್ಮಾನಿಸಿದ ರಮೇಶ ಕತ್ತಿ ಬಳಿಕ ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');