ಕೇಂದ್ರ ಸಚಿವರ ಸ್ವಾಗತಕ್ಕೆ ಕೈಯಲ್ಲಿ ಬಂದೂಕು ಹಿಡಿದು ಗುಂಡು ಹಾರಿಸಿದ ಬಿಜೆಪಿ ನಾಯಕರು : 150ಕ್ಕೂ ಹೆಚ್ಚು ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು !

0
🌐 Belgaum News :

ಯಾದಗಿರಿ : ಜನಾಶೀರ್ವಾದ ಕಾರ್ಯಕ್ರಮದ ಹಿನ್ನೆಲೆ ಯರಗೋಳ ಗ್ರಾಮಕ್ಕೆ ಆಗಮಿಸಿದ ಕೇಂದ್ರ ಸಚಿವ ಖೂಬಾ ಅವರನ್ನು ಸ್ವಾಗತಿಸಲು, ನಾಡಬಂದೂಕು ಕೈಯಲ್ಲಿ ಹಿಡಿದು, ಗಾಡಿಯಲ್ಲಿ ಗುಂಡು ಹಾರಿಸಿ ಸ್ವಾಗತಿಸಿದ್ದಾರೆ.

ಜಿಲ್ಲೆಯ ಯರಗೋಳ ಗ್ರಾಮದಲ್ಲಿ ನಾಡಬಂದೂಕು ಕೈಯಲ್ಲಿ ಹಿಡಿದುಕೊಂಡು ಜನ ಸ್ವಾಗತಿಸಿದ್ದಾರೆ. ಅಲ್ಲದೇ ಕೋವಿಡ್ ನಿಯಮವನ್ನೂ ಉಲ್ಲಂಘಿಸಿ ಜನ ಜಾತ್ರೆ ಸೇರಿದ್ದರು.

ಕೇಂದ್ರ ಸಚಿವರು ಬಂದಾಗ, ಅಲ್ಲಿದ್ದ ಜನ ಹೂಗಳನ್ನ ಅರ್ಪಿಸಿ ಭರ್ಜರಿ ಸ್ವಾಗತ ಕೋರಿದ್ರು. ಈ ವೇಳೆ ಸಚಿವರೊಂದಿಗೆ ಕೇಂದ್ರ ಸಚಿವ ಭಗವಂತ ಖೂಬಾ ಸ್ವಾಗತ ಮಾಡಿಕೊಂಡ ಮಾಜಿ ಸಚಿವ ಬಾಬೂರಾವ್ ಚಿಂಚನಸೂರು, ಶಾಸಕರಾದ ರಾಜೂಗೌಡ, ವೆಂಕಟರೆಡ್ಡಿ ಮುದ್ನಾಳ ಕೂಡ ಸಾಥ್​ನೀಡಿದ್ದಾರೆ. ಬಿಜೆಪಿ ರ್ಯಾಲಿಯಲ್ಲಿ ಭಾಗವಹಿಸಿದ್ದ ಕೇಂದ್ರ ಸಚಿವ ಹಾಗೂ ಹಲವು ಮುಖಂಡರ ವಿರುದ್ಧ ಕೇಸ್ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

150 ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಕೇಸ್ : ಆಗಸ್ಟ್​​ 7ನೇ ತಾರೀಕಿನಂದು ಹುಬ್ಬಳ್ಳಿಗೆ ಸಚಿವ ಮುನೇನಕೊಪ್ಪ ಆಗಮಿಸಿದ್ದರು. ಈ ವೇಳೆ ನೂರಾರು ಬಿಜೆಪಿ ಕಾರ್ಯಕರ್ತರು ಮಾಸ್ಕ್​​ ಧರಿಸದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಕೋವಿಡ್​​​-19 ನಿಯಮ ಉಲ್ಲಂಘಿಸಿದ್ದರು. ಹೀಗಾಗಿ ಹುಬ್ಬಳ್ಳಿ ಗೋಕುಲ ರಸ್ತೆಯ  ಪೊಲೀಸರು 150ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ವಿರುದ್ಧ ಸುಮೋಟೋ ಕೇಸ್​​ ದಾಖಲಿಸಿಕೊಂಡಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');