ಪತ್ನಿ ಮೇಲೆ ಮಾರಣಾಂತಿಕ ಹಲ್ಲೆಗೈದು, ಆಕೆ ಸ್ಥಿತಿ ಕಂಡು ಆತ್ಮಹತ್ಯೆಗೆ ಶರಣಾದ ಪತಿ

0
🌐 Belgaum News :

ಉತ್ತರ ಕನ್ನಡ : ಪತ್ನಿಯ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿದ ವ್ಯಕ್ತಿ, ಆಕೆಯ ಸ್ಥಿತಿ ನೋಡಿ ಗಾಬರಿಗೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮುಂಡಗೋಡ ತಾಲ್ಲೂಕಿನ ಕಾವಲಕೊಪ್ಪ ಗ್ರಾಮದಲ್ಲಿ ನಡೆದಿದೆ.

ಗಂಗಾಧರ ಶಿಡ್ಕೊಳ್ಳಿ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

 

ಗಂಡ-ಹೆಂಡತಿ ನಡುವಿನ ಜಗಳ ವಿಕೋಪಕ್ಕೆ ತಿರುಗಿದ್ದು, ಪತ್ನಿ ರೇಖಾ ಮೇಲೆ ಗಂಗಾಧರ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ತೀವ್ರ ಗಾಯಗೊಂಡ ಪತ್ನಿಯ ಸ್ಥಿತಿ ನೋಡಿ ಹೆದರಿದ ಈತ, ಹೊಲಕ್ಕೆ ತೆರಳಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಚಿಂತಾಜನಕ ಸ್ಥಿತಿಯಲ್ಲಿರುವ ಈತನ ಪತ್ನಿಯನ್ನು ಸ್ಥಳೀಯರು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಸಂಬಂಧ ಮುಂಡಗೊಂಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');