1ರಿಂದ 8 ತರಬೇತಿ ಆರಂಭಿಸುವ ಕುರಿತು ಪ್ರತಿಕ್ರಿಯೆ ನೀಡಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್

0
🌐 Belgaum News :

ಚಿತ್ರದುರ್ಗ : ಕೋವಿಡ್ ಕಾರ್ಯಪಡೆ , ಮಕ್ಕಳ ತಜ್ಞರು ಹಾಗೂ ತಾಂತ್ರಿಕ ಸಮಿತಿ ವರದಿ ಆಧರಿಸಿ 9,10 ಹಾಗೂ ಪಿಯು ತರಗತಿ ಆರಂಭಿಸಲಾಗುತ್ತಿದ್ದು, ಇದರ ಯಶಸ್ಸು ನೋಡಿಕೊಂಡು 1 ರಿಂದ8ನೇ ತರಗತಿ ಆರಂಭ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.

ಸುದ್ದಿಗಾರರೊಂದಿಗೆ ಬುಧವಾರ  ಮಾತನಾಡಿ, ಪೋಷಕರು ಹಾಗು ಮಕ್ಕಳ ಧೈರ್ಯದ ಮೇಲೆ ಶಾಲೆ ತೆರೆಯಲಾಗುತ್ತಿದೆ. ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ. ಪೋಷಕರು ಒಪ್ಪದಿದ್ದರೆ ಆನ್ ಲೈನ್ ತರಗತಿ ಮುಂದುವರಿಸಲಾಗುವುದು. ಯಾವುದೇ ಕಾರಣಕ್ಕೂ ಬಲವಂತ ಮಾಡುವುದಿಲ್ಲ, ಈ ಬಗ್ಗೆ ಆತಂಕ ಬೇಡ’ ಎಂದು ಹೇಳಿದರು.

ತರಗತಿಗೆ ಹಾಜರಾದ ವಿದ್ಯಾರ್ಥಿಗಳಿಗೆ ಒಂದು ವೇಳೆ ಸೋಂಕು ತಗುಲಿದರೆ ಒಂದು ವಾರ ಶಾಲೆ ಬಂದ್ ಮಾಡಲಾಗುವುದು. ಸಂಪೂರ್ಣ ಸ್ಯಾನಿಟೈಸ್ ಮಾಡಿ ಮತ್ತೆ ಶಾಲೆ ತೆರೆಯಲಾಗುವುದು. ಮಕ್ಕಳಿಗೆ ಕಲಿಕಾ ವಾತಾವರಣ ನಿರ್ಮಿಸಲು ಒಂದೂವರೆ ವರ್ಷದಿಂದ ಪ್ರಯತ್ನಿಸಲಾಗುತ್ತಿದೆ. ಅನ್ ಲೈನ್ ಮೂಲಕ ತರಗತಿ ನಡೆಸಲಾಗುತ್ತಿದ್ದು, ಶೇ.30 ರಿಂದ 40 ರಷ್ಟು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂದು ಸಮೀಕ್ಷೆಗಳು ಹೇಳುತ್ತಿವೆ’ ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.‌ಬದರಿನಾಥ್, ಬಿಜೆಪಿ ವಿಭಾಗೀಯ ಪ್ರಭಾರಿ ಜಿ.ಎಂ. ಸುರೇಶ್, ಮಾಜಿ ಜಿಲ್ಲಾಧ್ಯಕ್ಷ ಟಿ.ಜಿ.ನರೇಂದ್ರನಾಥ್ ಇದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');