ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ : ಬಹಿರಂಗ ಪ್ರಚಾರಕ್ಕೆ ಮಾರ್ಗಸೂಚಿ ಬಿಡುಗಡೆ

0
🌐 Belgaum News :

ಬೆಳಗಾವಿ,: ಜಿಲ್ಲೆಯಲ್ಲಿ 2021 ನೇ ಸಾಲಿನ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ಖಾಲಿ ಇರುವ ನಗರ ಸ್ಥಳೀಯ ಸಂಸ್ಥೆಗಳ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ.
ಕೋವಿಡ್ -19 ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಬಹಿರಂಗ ಚುನಾವಣಾ ಪ್ರಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ನಿರ್ದೇಶನಗಳನ್ನು ನೀಡಿದೆ.
ಅಭ್ಯರ್ಥಿಯೂ ಸೇರಿ ಗರಿಷ್ಟ 5 ಜನ ಬೆಂಬಲಿಗರೊಂದಿಗೆ ಫೇಸ್ ಮಾಸ್ಕ್ (Face Mask) ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ ಮನೆಗೆ ಭೇಟಿ ನೀಡಿ ಪ್ರಚಾರ ನಡೆಸಬಹುದು. ಪ್ರಚಾರಕ್ಕೆ ಯಾವುದೇ ವಾಹನಗಳನ್ನು ಬಳಸುವುದನ್ನು ಹಾಗೂ ಗುಂಪು ಗುಂಪಾಗಿ ಪ್ರಚಾರ ಮಾಡುವುದನ್ನು ನಿಷೇಧಿಸಲಾಗಿದೆ.
ಅಭ್ಯರ್ಥಿಗಳು ಪ್ರಚಾರದ ಸಂದರ್ಭದಲ್ಲಿ ಫೇಸ್ ಮಾಸ್ಕ್(Face Mask) ಅನ್ನು ಕಡ್ಡಾಯವಾಗಿ ಧರಿಸಬೇಕು. ಇಲೆಕ್ಟ್ರಾನಿಕ್ ಮೀಡಿಯಾದಲ್ಲಿ ಪ್ರಚಾರ ಕೈಗೊಳ್ಳಬಹುದು. ಅವುಗಳ ವೆಚ್ಚ ವಿವರಗಳನ್ನು ಸಲ್ಲಿಸಬೇಕು.
ಅಲ್ಲದೇ, ಅಭ್ಯರ್ಥಿಗಳು ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚಬಹುದು. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಫೇಸ್ ಮಾಸ್ಕ್ (Face Mask) ಮತ್ತು ಕೈ ಗವಸು ಧರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');