Belagavi News In Kannada | News Belgaum

ಕೋವಿಡ್ ಲಸಿಕೆ : ಜಿಲ್ಲೆಯಲ್ಲಿಯೇ ಹುಕ್ಕೇರಿಗೆ ಪ್ರಥಮ ಸ್ಥಾನ

🌐 Belgaum News :

ಹುಕ್ಕೇರಿ : ತಾಲೂಕಿನಾದ್ಯಂತ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಭರದಿಂದ ಸಾಗಿದ್ದು ಬೆಳಗಾವಿ ಜಿಲ್ಲೆಯಲ್ಲಿಯೇ ಹುಕ್ಕೇರಿ ತಾಲೂಕು ಪ್ರಥಮ ಸ್ಥಾನದಲ್ಲಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ.ಉದಯ ಕುಡಚಿ ಹೇಳಿದರು.

ಪಟ್ಟಣದಲ್ಲಿ ಗುರುವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲ್ಲಿಯವರೆಗೆ 2,18,428 ಜನರಿಗೆ ಮೊದಲನೇ ಡೋಸ್ ಲಸಿಕೆ ನೀಡಲಾಗಿದ್ದು ಶೇ. 75.07 ರಷ್ಟು ಗುರಿ ಸಾಧಿಸಲಾಗಿದೆ. ಇನ್ನು 45388 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಿದ್ದು ಶೇ.78 ರಷ್ಟು ಗುರಿ ಸಾಧಿಸಲಾಗಿದೆ. ತಾಲೂಕಿನಲ್ಲಿ ಕೋವಿಡ್ ಲಸಿಕೆಗಳು ಸಾಕಷ್ಟು ಬರುತ್ತಿದ್ದು ಜನರು ಮೊದಲ ಮತ್ತು ಎರಡನೇ ಡೋಸ್ ಪಡೆಯಲು ಸ್ಥಳೀಯ ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರನ್ನು ಸಂಪರ್ಕಿಸಿ ಸಮೀಪದ ಲಸಿಕಾ ಕೇಂದ್ರಗಳಲ್ಲಿ ಆದಷ್ಟು ಬೇಗ ಲಸಿಕೆ ಪಡೆಯಬೇಕು ಎಂದು ತಿಳಿಸಿದರು.

ವ್ಯಾಕ್ಸಿನ್ ಪಡೆದುಕೊಂಡವರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿರುವುದು ಈಗಾಗಲೇ ದೃಢಪಟ್ಟಿದೆ. ಆರೋಗ್ಯ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಈ ಬಾರಿ ಲಸಿಕಾ ಅಭಿಯಾನದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಕೈಗಳ ಶುಚಿತ್ವ ನಮ್ಮ ಜೀವನ ಶೈಲಿಯ ಅಂಗವಾಗಬೇಕು. ಜನದಟ್ಟಣೆಯಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರುವುದು ಮತ್ತು ಅಂತಹ ಕಾರ್ಯಕ್ರಮಗಳನ್ನು ಸಂಘಟಿಸದೆ ಸರಳ ಆಚರಣೆಗೆ ಆದ್ಯತೆ ನೀಡುವುದು. ಅಪಾಯದಿಂದ ಪಾರಾಗುವ ಪ್ರಮುಖ ದಾರಿ ಎಂದು ಟಿಎಚ್‍ಒ ಕುಡಚಿ ಹೇಳಿದರು.

ಹುಕ್ಕೇರಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಮಹಾಂತೇಶ ನರಸನ್ನವರ, ಸಂಕೇಶ್ವರ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ದತ್ತಾತ್ರೇಯ ದೊಡಮನಿ, ಅಮ್ಮಣಗಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸೌಮ್ಯಾ ಸಜ್ಜನ ಮತ್ತಿತರರು ಉಪಸ್ಥಿತರಿದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum