ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ರಾಜೀನಾಮೆ

0
🌐 Belgaum News :

ಚಂಡೀಗಡ : ರಾಜ್ಯ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವಾಗಲೇ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಶನಿವಾರ ಸಂಜೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿಯನ್ನು ಕೆಳಗಿಸಬೇಕೆಂದು ಕೋರಿ ಪಕ್ಷದ 50ಕ್ಕೂ ಹೆಚ್ಚು ಶಾಸಕರು ಹೈಕಮಾಂಡ್‌ಗೆ ಪತ್ರ ಬರೆದಿದ್ದ ಹಿನ್ನೆಲೆಯಲ್ಲಿ ಇಂದು ಸಂಜೆ ಶಾಸಕಾಂಗ ಪಕ್ಷದ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಸಭೆಗೂ ಮುನ್ನವೇ ಸಿಂಗ್‌ ರಾಜೀನಾಮೆ ನೀಡಿದ್ದಾರೆ.

117 ಸದಸ್ಯ ಬಲದ ಪಂಜಾಬ್ ವಿಧಾನಸಭೆಯಲ್ಲಿ, ಕಾಂಗ್ರೆಸ್ 2017ರ ಚುನಾವಣೆಯಲ್ಲಿ ಅಮರೀಂದರ್ ಸಿಂಗ್ ನೇತೃತ್ವದಲ್ಲಿ 77 ಸ್ಥಾನಗಳನ್ನು ಗೆದ್ದಿತ್ತು. ಇನ್ನು 4 ತಿಂಗಳಲ್ಲಿ ಪಂಜಾಬ್ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');