ಡೆಂಗ್ಯೂ ಜ್ವರಕ್ಕೆ 6 ವರ್ಷದ ಬಾಲಕಿ ಸಾವು : ಜಿಲ್ಲೆಯಲ್ಲಿ ಕೊನೆಯುಸಿರೆಳೆದ 5 ಮಕ್ಕಳು

0
🌐 Belgaum News :

ರಾಯಚೂರು : ಜಿಲ್ಲೆಯಲ್ಲಿ ಡೆಂಘೀ ರೌದ್ರ ನರ್ತನ ಮುಂದುವರೆದಿದ್ದು, ಜ್ವರಕ್ಕೆ 6 ವರ್ಷದ ಬಾಲಕಿ ಸೋನು ಮೃತಪಟ್ಟಿರುವ ಘಟನೆ ನಡೆದಿದೆ.

ನಗರದ ಮಹಬೂಬಿಯಾ ಕಾಲೋನಿಯ ಸೋನು ಸಿಂಧನೂರು  ಮೃತಪಟ್ಟ ಬಾಲಕಿ. ಅಂಗನವಾಡಿ ಕಾರ್ಯಕರ್ತೆ ಅನಿತಾ ಎಂಬುವವರ ಮಗಳು.

ಸೋನುಗೆ ಒಂದು ವಾರದಿಂದ ಸಿಂಧನೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್​ಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಮೃತಪಟ್ಟಿದ್ದಾಳೆ.

ಕಳೆದ ವಾರವಷ್ಟೇ ಮಾನ್ವಿಯಲ್ಲಿ 5 ವರ್ಷದ ಬಾಲಕ ಡೆಂಘೀ ಗೆ ಬಲಿಯಾಗಿದ್ದ. ಜ್ವರಕ್ಕೆ ಜಿಲ್ಲೆಯಲ್ಲಿ ಈವರೆಗೆ 5 ಮಕ್ಕಳು ಸಾವನ್ನಪ್ಪಿದ್ದಾರೆ. ಇಡೀ ಜಿಲ್ಲೆಯಲ್ಲಿ ವೈರಲ್ ಫೀವರ್ ಹೆಚ್ಚಾಗಿದ್ದು, ಡೆಂಘೀ ಪ್ರಕರಣಗಳೂ ವಿಪರೀತವಾಗಿವೆ.

ರಿಮ್ಸ್ ಆಸ್ಪತ್ರೆಯೊಂದರಲ್ಲೇ ಈವರೆಗೂ 30ಕ್ಕೂ ಅಧಿಕ ಮಕ್ಕಳಲ್ಲಿ ಡೆಂಘೀ ಪತ್ತೆಯಾಗಿದೆ. ಜಿಲ್ಲೆಯಾದ್ಯಂತ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ 1500ಕ್ಕೂ ಅಧಿಕ ಮಕ್ಕಳು ದಾಖಲಾಗಿದ್ದಾರೆ. ವೈರಲ್ ಫೀವರ್ ಹಾಗೂ ಡೆಂಘೀ ಪ್ರಕರಣಗಳಿಂದ ಪೋಷಕರಲ್ಲಿ ಆತಂಕ ಹೆಚ್ಚಿದೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');