ಬಿಜೆಪಿ ಬೆನ್ನು ಮೂಳೆ ಇಲ್ಲದ ಪಕ್ಷ: ಧರ್ಮೇಂದ್ರ ಗುಡುಗು

0
🌐 Belgaum News :

ಮಂಗಳೂರು: ಹಿಂದೂ  ದೇವಾಲಯಗಳ ಮೇಲೆ ನಡೆದಿರುವ ದಾಳಿಯನ್ನು ಖಂಡಿಸಿ,  ಕಾಂಗ್ರೆಸ್ ವತಿಯಿಂದ   ಅಖಿಲ ಭಾರತ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರು ನೇತೃತ್ವದಲ್ಲಿ  ಬೃಹತ್ ಪ್ರತಿಭಟನೆ ನಡೆಸಿಲಾಗಿದೆ.

ನಂಜನಗೂಡು ದೇಗುಲ ಧ್ವಂಸ ವಿರೋಧಿಸಿ ಮಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿನಿಯ,  ಯಾವ ತುಘಲಕ್ ಸರ್ಕಾರ ನಡೆಸ್ತಾ ಇದೀರಾ ನೀವು, ತಾಲಿಬಾನ್ ಸರ್ಕಾರ ಇದ್ಯಾ ಕರ್ನಾಟಕದಲ್ಲಿ? ತಾಲಿಬಾನ್ ಆದ್ರೂ ಪರ್ವಾಗಿಲ್ಲ, ಇದಕ್ಕಿಂತ ಕೀಳು ಮಟ್ಟದ ಸರ್ಕಾರ ನಡೆಸ್ತಾ ಇದೀರ ನೀವು. ನಾಚಿಕೆ ಇಲ್ಲದ ಮುಖ್ಯಮಂತ್ರಿ, ನೈತಿಕತೆ ಇಲ್ಲದ ಮಂತ್ರಿ ಮಂಡಲ. ಭಾರತೀಯ ಜನತಾ ಪಕ್ಷವೇ ಬೆನ್ನು ಮೂಳೆ ಇಲ್ಲದ ಪಕ್ಷ ಎಂದು ಅವರು ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು.

ಇದೇ ವೇಳೆ ನೂರಾರು ವರ್ಷಗಳ ಇತಿಹಾಸ ಹೊಂದಿರುವ ದೇವಾಲಯವನ್ನು ಅನಧಿಕೃತ ಎನ್ನುವ ಅಧಿಕಾರ ನ್ಯಾಯಾಲಯಕ್ಕೆ ಇದೆಯೇ ಎಂದು ಪ್ರಶ್ನಿಸಬೇಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು ದೇಗುಲ ಧ್ವಂಸ ಘಟನೆ ವಿರೋಧಿಸಿ ಸರ್ಕಾರದ ವಿರುದ್ಧ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದ್ದಾರೆ..//////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');