ಡಿಕೆಶಿವಕುಮಾರ್ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್ : ಕಾಂಗ್ರೆಸ್ ಪಕ್ಷ ಸಂಘಟನೆಗೆ ಬಿಜೆಪಿ ನಾಯಕರಲ್ಲಿ ನಡುಕ

0
🌐 Belgaum News :

ದಾವಣಗೆರೆ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದು, ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

ದಾವಣಗೆರೆಯಲ್ಲಿ ನಡೆದ ಬಿಜೆಪಿ ಕಾರ್ಯಕಾರಣಿ ಭಾಗಿಯಾಗಿದ್ದ ಯಡಿಯೂರಪ್ಪ, ನಮ್ಮ ಪಕ್ಷದ ಶಾಸಕರನ್ನು ಡಿ.ಕೆ. ಶಿವಕುಮಾರ್ ಸಂಪರ್ಕ ಮಾಡಿದ್ದಾರೆ.

ಒಂದಿಬ್ಬರು ಶಾಸಕರನ್ನು ಸಂಪರ್ಕಿಸುವ ಪ್ರಯತ್ನ ಮಾಡಿದ್ದಾರೆ. ಆದರೆ, ಯಾರೂ ಕೂಡ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದ ಶಾಸಕರು ಬಿಜೆಪಿ ಕಡೆ ಬರಲಿದ್ದಾರೆ ಎಂದು ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ.

ಕಾಂಗ್ರೆಸ್ ಸಂಘಟನೆಯಿಂದ ಬಿಜೆಪಿಗೆ ನಡುಕ  : ರಾಜ್ಯದಲ್ಲಿ ಕಾಂಗ್ರೆಸ್ ಎದ್ದು ಕೂತಿದೆ. ನಾವು ಎಚ್ಚೆತ್ತುಕೊಳ್ಳಬೇಕಿದೆ ಮೋದಿ ಹೆಸರಲ್ಲಿ ಲೋಕಸಭೆ ಚುನಾವಣೆ ಗೆಲ್ಲುವುದು ಸುಲಭ. ಈಗ ರಾಜ್ಯದ ಕೆಲಸಗಳ ಆಧಾರದ ಮೇಲೆ ಚುನಾವಣೆ ನಡೆಸಬೇಕಿದೆ. ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಉಪ ಚುನಾವಣೆ ಗೆಲುವು ನಮಗೆ ಮುಖ್ಯವಾಗಿದೆ. ಗೆಲ್ಲಲು ನಮ್ಮ ಪಕ್ಷದ ಸಂಘಟನೆಯ ಶ್ರಮ ಮತ್ತು ಪ್ರಾಮಾಣಿಕ ಪ್ರಯತ್ನ ಅಗತ್ಯವಾಗಿದೆ ಎಂದು ಹೇಳಿದ್ದಾರೆ.

ವಿಧಾನಸಭೆ ಚುನಾವಣೆ ಗೆಲುವು ಸುಲಭವಲ್ಲ. ನಾವು ಯಾವುದು ಭ್ರಮೆಯಲ್ಲಿರುವುದು ಬೇಡ ಎಂದು ಕಾರ್ಯಕರ್ತರು ಮತ್ತು ಮುಖಂಡರಿಗೆ ಎಚ್ಚರಿಕೆ ಸಂದೇಶ ನೀಡಿದ್ದಾರೆ.  ಲೋಕಸಭೆ ಚುನಾವಣೆಯಲ್ಲಿ ಗೆಲುವು ಸುಲಭ, ವಿಧಾನಸಭೆ ಚುನಾವಣೆ, ಜಿಪಂ, ತಾಪಂ ಚುನಾವಣೆಯಲ್ಲಿ ನಾವು ಗೆಲ್ಲುವತ್ತ ಗಮನಹರಿಸಬೇಕು. ಇದಕ್ಕಾಗಿ ಹೆಚ್ಚಿನ ಶ್ರಮ, ಪ್ರಯತ್ನ ಅಗತ್ಯವಾಗಿದೆ ಎಂದು ಎಚ್ಚರಿಕೆ ನೀಡಿದ್ದಾರೆ.////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');