ಮಚ್ಚೆ ಗ್ರಾಮದಲ್ಲಿ ಕೋಟ್ಪಾ ಕಾಯ್ದೆಯಡಿ ದಾಳಿ: 48 ಪ್ರಕರಣ ದಾಖಲು

0
🌐 Belgaum News :

ಬೆಳಗಾವಿ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಸೋಮವಾರ (ಸೆ.20) ಬೆಳಗಾವಿ ನಗರದ ಮಚ್ಚೆ ಗ್ರಾಮದಲ್ಲಿ  ಕೋಟ್ಪಾ-2003 ಕಾಯ್ದೆಯಡಿಯಲ್ಲಿ  ದಾಳಿ ನಡೆಸಿ, 48 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ.

ಜಿಲ್ಲಾ ತಂಬಾಕು ನಿಯಂತ್ರಣಾಧಿಕಾಗಳ ಮಾರ್ಗದರ್ಶನದಡಿಯಲ್ಲಿ ದಾಳಿಯಲ್ಲಿ ಸಾರ್ವಜನಿಕರಿಗೆ ಕೋಟ್ಪಾ-2003 ಕಾಯ್ದೆ ವಿರುದ್ದವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಮತ್ತು ನೇರ ಪರೋಕ್ಷವಾಗಿ ತಂಬಾಕು ಜಾಹಿರಾತು ಪ್ರದರ್ಶನ, ಶೈಕ್ಷಣಿಕ ಆವರಣದ 100 ಮೀಟರ್ ಅಂತರದೊಳಗೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿ ಮಾಲಿಕರಿಗೆ ಜಾಗೃತಿ ಮೂಡಿಸಲಾಯಿತು ಹಾಗೂ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳನ್ನು ತಿಳಿಸಲಾಯಿತು.

ಕೋಟ್ಪಾ-2003 ಕಾಯ್ದೆ ಅಡಿಯಲ್ಲಿ ಒಟ್ಟು 48 ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಯಿತು. ಸೆಕ್ಷನ್-4 ನಾಮಫಲಕವನ್ನು ವಿತರಿಸಲಾಯಿತು. ಸಾರ್ವಜನಿಕರಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮದ ಕುರಿತು ಅರಿವು ಮೂಡಿಸಲಾಯಿತು.

ಈ ದಾಳಿಯಲ್ಲಿ  ಜಿಲ್ಲಾ ತಂಬಾಕು ನಿಯಂತ್ರಣ ಕೋಶದಿಂದ ಜಿಲ್ಲಾ ಸರ್ವೇಕ್ಷಾಣಾಧಿಕಾರಿ ಡಾ. ಬಿ.ಎನ್ ತುಕ್ಕಾರ, ಜಿಲ್ಲಾ ಸಲಹೆಗಾರ ಡಾ.ಶ್ವೇತಾ ಪಾಟೀಲ ಹಾಗೂ ಜಿಲ್ಲಾ ಸಮಾಜ ಕಾರ್ಯಕರ್ತೆ ಕವಿತಾ ರಾಜನ್ನವರ,  ಎಮ್. ಎಮ್. ನಾಯಕ ಹಾಗೂ ಎಮ್.ಎಸ್. ಸಿದಂಗಿ ಹಾಗೂ ಪೊಲೀಸ ಸಿಬಂದಿ ದಾಳಿಯಲ್ಲಿ ಹಾಜರಿದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');