ಬೆಳಗಾವಿ: ಅವಧಿ ಮುಗಿದ ಆಹಾರ ಕಿಟ್ ಗಳನ್ನು ಅಕ್ರಮವಾಗಿ ವಿತರಿಸುತ್ತಿರುವ ಬಿಜೆಪಿ ಕಾರ್ಯಕರ್ತರು: ಕ್ರಮಕ್ಕೆ ಆಗ್ರಹಿಸಿದ ಕಾಂಗ್ರೆಸ್

0
🌐 Belgaum News :

ಬೆಳಗಾವಿ: ಅವಧಿ ಮುಗಿದ ಆಹಾರ ಕಿಟ್ ಗಳನ್ನು ಬಿಜೆಪಿ ಕಾರ್ಯಕರ್ತರು ಅಕ್ರಮವಾಗಿ ಸಾರ್ವಜನಿಕರಿಗೆ  ವಿತರಣೆ ಮಾಡುತ್ತಿದ್ದಾರೆ. ಈ ಬಗ್ಗೆ ಕೂಡಲೇ ಕ್ರಮಕೈಗೊಳ್ಳಬೇಕು ಎಂದು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರದೀಪ ಎಂ.ಜೆ. ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಲಾಕ್ ಡೌನ್ ಅವಧಿಯಲ್ಲಿ ಕಟ್ಟಡ ಕಾರ್ಮಿಕರಿಗೆ ವಿತರಣೆ ಮಾಡಲು ಪ್ರತಿಯೊಂದು ವಿಧಾನಸಭಾ ಕ್ಷೇತ್ರಕ್ಕೆ 2,500 ರೇಷನ್ ಕಿಟ್ ಗಳನ್ನು ಕಾರ್ಮಿಕ ಕಲ್ಯಾಣ ಮಂಡಳಿಯವರು ಕಳುಹಿಸಿಕೊಟ್ಟಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಅಥವಾ ಶಾಸಕರು ವಿತರಿಸಬೇಕಾದ ಆಹಾರ ಕಿಟ್ ಗಳನ್ನು ನಗರದಲ್ಲಿನ ಬಿಜೆಪಿ ಕಾರ್ಯಕರ್ತರು ವಿತರಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಸರ್ಕಾರದಿಂದ ಬಂದಿರುವ ಆಹಾರ ಕಿಟ್ ಗಳನ್ನು ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕರು ಹಂಚಿಕೆ ಮಾಡದೇ ತಮ್ಮ ಗೋದಾಮಿನಲ್ಲಿ ಸಂಗ್ರಹಿಸಿ ಇಟ್ಟಿದ್ದರು. ಅವುಗಳನ್ನು ಕಾರ್ಯಕರ್ತರ ಮೂಲಕ ತಮ್ಮ ಬೆಂಬಲಿಗರಿಗೆ ಮಾತ್ರ ಈಗ ಹಂಚಿಕೆ ಮಾಡುತ್ತಿದ್ದಾರೆ. ದಕ್ಷಿಣ ಮತಕ್ಷೇತ್ರದಲ್ಲಿ ಈ ಬಗ್ಗೆ ಸಮಾಜಸೇವಕರು ಪ್ರಶ್ನಿಸಿದಾಗ ಅವರಿಗೆ ಬೆದರಿಕೆ ಹಾಕಿ, ಹಲ್ಲೆಗೆ ಮುಂದಾಗಿದ್ದಾರೆ. ಸುಳ್ಳು ಪ್ರಕರಣವನ್ನು ದಾಖಲಿಸುವ ಎಚ್ಚರಿಕೆಯನ್ನು ನೀಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರದಿಂದ ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಕಟ್ಟಡ ಕಾರ್ಮಿಕರಿಗೆ ಆಹಾರ ಕಿಟ್ ಗಳನ್ನು ವಿತರಿಸಲು ಪೂರೈಸಿದಂತ ಆಹಾರ ಕಿಟ್ ಗಳ ಅವಧಿಯು ದಿನಾಂಕ:16/09/2021 ಕೊನೆಗೊಂಡಿದೆ. ಆದರೆ, ಕಿಟ್ ಗಳನ್ನು ದಿನಾಂಕ: 19/09/2021 ರಂದು ಜನರಿಗೆ ವಿತರಿಸುತ್ತಿರುವುದು ಕಂಡುಬಂದಿದ್ದು, ಈ ಆಹಾರ ಧಾನ್ಯಗಳನ್ನು ಸೇವಿಸಿ, ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾದರೇ ಅದಕ್ಕೆ ಜನಪ್ರತಿನಿಧಿಗಳೇ ಹೊಣೆ.

ಅಕ್ರಮವಾಗಿ ಹಾಗೂ ಅವಧಿ ಮುಗಿದ ಆಹಾರ ಕಿಟ್ ಗಳನ್ನು ಹಂಚಿಕೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಪ್ರಕರಣ ದಾಖಲು:

ದಕ್ಷಿಣ ಮತಕ್ಷೇತ್ರದ ವಡಗಾವಿಯಲ್ಲಿ ಅವಧಿ ಮುಗಿದ ಆಹಾರ ಕಿಟ್ ಗಳನ್ನು ಅಕ್ರಮವಾಗಿ ವಿತರಣೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತೆ ಸರಳಾ ಸಾತಪುಟೆ ಎಂಬುವರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿದ್ದಾರೆ. ಈ ಬಗ್ಗೆ ಸರಳಾ ಅವರು ಶಹಾಪುರ ಠಾಣೆಯಲ್ಲಿ ಐವರು ಅರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರಾದ ನಾರಾಯಣ ಕಾಮಕರ್, ಪ್ರಮೋದ ಕಾಮಕಾರ್, ಶಂಕರ್ ಹುಲಮನಿ ಹಾಗೂ ಇನ್ನಿತರ ಇಬ್ಬರು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಲಾಗಿದೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');