ಮಾಜಿ ಸಚಿವ ರಾಜೀಂದರ್‌ ಪಾಲ್ ಸಿಂಗ್ ಭಾಟಿಯಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

0
🌐 Belgaum News :

ಛತ್ತೀಸಗಡ : ಛತ್ತೀಸ್‌ಘಡ ಸರ್ಕಾರದ ಮಾಜಿ ಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ರಾಜೀಂದರ್‌ ಪಾಲ್ ಸಿಂಗ್ ಭಾಟಿಯಾ ರಾಜ್‌ನಂದಗಾಂವ್‌ ಜಿಲ್ಲೆಯಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.

ಛುರಿಯಾ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಭಾಟಿಯಾ, ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ಕೋವಿಡ್‌ಗೆ ಒಳಗಾಗಿದ್ದ ಭಾಟಿಯಾ, ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಸಂಪೂರ್ಣವಾಗಿ ಆರೋಗ್ಯವಾಗಿರಲಿಲ್ಲ.

ರಾಜ್ಯದ ಖುಜ್ಜಿ ವಿಧಾನ ಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಭಾಟಿಯಾ ಛತ್ತೀಸ್‌ಘಡದಲ್ಲಿ ರಮಣ್ ಸಿಂಗ್ ನೇತೃತ್ವದಲ್ಲಿ ಬಿಜೆಪಿ ಸರ್ಕಾರವಿದ್ದಾಗ ವಾಣಿಜ್ಯ ಹಾಗೂ ಕೈಗಾರಿಕಾ ಸಚಿವರಾಗಿದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');