Belagavi News In Kannada | News Belgaum

ರೈತರು ಸೆ.27ರಂದು ಕರೆ ನೀಡಿರುವ ಭಾರತ್ ಬಂದಗೆ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಬೆಂಬಲ

🌐 Belgaum News :

ಹೈದ್ರಾಬಾದ್ : ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಯ ವಿರುದ್ಧ ರೈತರು ಸೆಪ್ಟೆಂಬರ್​. 27 ರಂದು ಭಾರತ್ ಬಂದ್​ಗೆ ಕರೆ ನೀಡಿದೆ.  ತಾವು ರೈತ ಹೋರಾಟವನ್ನು ಬೆಂಬಲಿಸುವುದಾಗಿ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ತಿಳಿಸಿದ್ದಾರೆ.​

ಕೇಂದ್ರ ಸರ್ಕಾರದ ವಿವಾದಿತ ಮೂರು ಕೃಷಿ ಕಾಯ್ದೆಯ ವಿರುದ್ಧ ರೈತರು ಸತತ ಒಂದು ವರ್ಷದಿಂದ ಹೋರಾಟ ನಡೆಸುತ್ತಿದ್ದಾರೆ. ಆದರೆ, ರೈತರ ಹೋರಾಟದ ಬಗ್ಗೆ ಕೇಂದ್ರ ಸರ್ಕಾರ  ಈವರೆಗೆ ಯಾವುದೇ ಕ್ರಮ ಜರುಗಿಸಿಲ್ಲ. ಅಲ್ಲದೆ, ರೈತರ ಬೇಡಿಕೆಗೂ ಮಣಿಯವ ಯಾವುದೇ ಲಕ್ಷಣ ಕಾಣಿಸುತ್ತಿಲ್ಲ.  ಇದರ ಪರಿಣಾಮ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ ಸೆಪ್ಟೆಂಬರ್​. 27 ರಂದು ಭಾರತ್ ಬಂದ್​ಗೆ ಕರೆ ನೀಡಿದೆ.

ಈ ಬಂದ್​ಗೆ ಬಿಜೆಪಿ ಏತರ ಸರ್ಕಾರವಿರುವ ಅನೇಕ ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ಇತ್ತೀಚಿನ ಬೆಳವಣಿಗೆಯಲ್ಲಿ ಬಿಜೆಪಿ ಮಿತ್ರವಾಗಿ ತನ್ನನ್ನು ಗುರುತಿಸಿಕೊಂ ಡಿರುವ ಆಂಧ್ರಪ್ರದೇಶದ ವೈಎಸ್​ಆರ್ ಕಾಂಗ್ರೆಸ್ ಸಹ ಈ ಬಂದ್ ಅನ್ನು ಸಂಪೂರ್ಣವಾಗಿ ಬೆಂಬಲಿಸಿದೆ.

ವಿಶಾಖಪಟ್ಟಣಂ ಉಕ್ಕಿನ ಕಾರ್ಖಾನೆಯ ಕಾರ್ಮಿಕರಿಗೆ ಮತ್ತು ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಬೆಂಬಲ ನೀಡುತ್ತದೆ ಎಂದು ಆಂಧ್ರಪ್ರದೇಶ ಸರ್ಕಾರ ಘೋಷಿಸಿದೆ. ಅಲ್ಲದೆ, ಸೆಪ್ಟೆಂಬರ್ 26 ಮಧ್ಯರಾತ್ರಿಯಿಂದ ಸೆಪ್ಟೆಂಬರ್ 27 ಮಧ್ಯಾಹ್ನದವರೆಗೆ ರಾಜ್ಯಾದ್ಯಂತ ಎಪಿಎಸ್‌ಆರ್‌ಟಿಸಿ ಬಸ್‌ಗಳನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಪೆರ್ನಿ ವೆಂಕಟರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum