Belagavi News In Kannada | News Belgaum

ವರುಣಾರ್ಭಟ ಮಹಾರಾಷ್ಟ್ರ ತತ್ತರ: ಚುರುಕುಗೊಂಡ ರಕ್ಷಣಾ ಕಾರ್ಯಚರಣೆ

🌐 Belgaum News :

ಮುಂಬೈ: 15 ದಿನಗಳಿಂದ ಮಹಾರಾಷ್ಟ್ರದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮರಾಠವಾಡ, ಉತ್ತರ ಮಹಾರಾಷ್ಟ್ರ ಹಾಗೂ ವಿದರ್ಭ ಭಾಗಗಳಲ್ಲಿ ವೀಪರಿತ ಮಳೆಯಾಗುತ್ತಿದೆ. ಮಳೆ ಅವಾಂತರಕ್ಕೆ ಮುಂಬೈ ಮತ್ತೆ ನಲುವ ಸಾಧ್ಯತೆ ಇದೆ.

ಈ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ಅವರು ಸಭೆ ನಡೆಸಿದ್ದು, ಜನರ ರಕ್ಷಣೆ ಹಾಗೂ ಪರಿಹಾರ ಕಾರ್ಯ ಚುರುಕುಗೊಳಿಸುವಂತೆ ಸೂಚಿಸಿದ್ದಾರೆ.

ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ. ಮಳೆ ಹಾಗೂ ಪ್ರವಾಹ ಕಾರಣದಿಂದ ಆಗಿರುವ ಅವಘಡಗಳಲ್ಲಿ ಕನಿಷ್ಠ 13 ಜನರು ಮೃತಪಟ್ಟಿದ್ದರೆ, ರಾಜ್ಯದ ವಿವಿಧ ಭಾಗಗಳಲ್ಲಿ ತೊಂದರೆಗೆ ಸಿಲುಕಿದ್ದ 100ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ ಎಂದು ಮೂಲಗಳು ಹೇಳಿವೆ.//////

📱 Read Top News, Belgaum News Updates, Belagavi News in Kannada, Latest News on News Belgaum