ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್​ನಿಂದ ವಾರಾಣಸಿಯಲ್ಲಿ ನಾಳೆ ಕಿಸಾನ್ ನ್ಯಾಯ್ ರ್‍ಯಾಲಿ

0
🌐 Belgaum News :

ಹೊಸದಿಲ್ಲಿ: ವಾರಣಾಸಿಯಲ್ಲಿ ನಾಳೆ (ಅ.10) ನಡೆಯಲಿರುವ ಕಾಂಗ್ರೆಸ್ ಪಕ್ಷದ ಕಿಸಾನ್ ನ್ಯಾಯ ರ್‍ಯಾಲಿಗೆ ಸಿದ್ಧತೆಗಳು ಭರದಿಂದ ಸಾಗಿವೆ.

ನಗರದ ರೋಹಾನಿಯಾ ಪ್ರದೇಶದ ಮೈದಾನದಲ್ಲಿ ದೊಡ್ಡ ಟೆಂಟ್ ಹಾಕಲಾಗುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೃಹತ್ ಕಟೌಟ್​ಗಳನ್ನು ಹಾಕಲಾಗಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ರಾಜೇಶ್ ತಿವಾರಿ, ಮಾಜಿ ಸಂಸದ ರಾಜೇಶ್ ಮಿಶ್ರಾ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರು ರ್ಯಾಲಿ ನಡೆಯುವ ಸ್ಥಳದಲ್ಲಿ ಸಿದ್ಧತೆಗಳನ್ನು ಪರಿಶೀಲಿಸಲಿದ್ದಾರೆ.

ಭಾನುವಾರ ನಡೆಯುವ ರ್ಯಾಲಿಯಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಒತ್ತಾಯಿಸುವುದು ಕಾಂಗ್ರೆಸ್​ನ ಮುಖ್ಯವಾದ ಬೇಡಿಕೆಯಾಗಿದೆ. ಹಾಗೇ, ಲಖಿಂಪುರ್ ಖೇರಿ ದುರಂತಕ್ಕೆ ಕಾರಣರಾದ ಆರೋಪಿಗಳನ್ನು ಬಂಧಿಸುವುದು ಮತ್ತು ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದು ಕಾಂಗ್ರೆಸ್‌ನ ಪ್ರಮುಖ ಬೇಡಿಕೆಯಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ನಾಯಕರ ಪ್ರಕಾರ, ಪ್ರಿಯಾಂಕಾ ಗಾಂಧಿ ವಾದ್ರಾ ಮೊದಲು ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ಮತ್ತು ದುರ್ಗಾಕುಂಡ ದೇವಸ್ಥಾನದಲ್ಲಿ ದುರ್ಗಾದೇವಿಗೆ ಪೂಜೆ ಸಲ್ಲಿಸುತ್ತಾರೆ. ನಂತರ ಚುನಾವಣಾ ಪ್ರಚಾರವನ್ನು ಪ್ರಾರಂಭಿಸುತ್ತಾರೆ. ಈಗಾಗಲೇ ಕಾಂಗ್ರೆಸ್ ನಾಯಕರು ಉತ್ತರ ಪ್ರದೇಶದ ಪೂರ್ವ ಜಿಲ್ಲೆಗಳಲ್ಲಿ ಜನರೊಂದಿಗೆ ಹಲವಾರು ಸಭೆಗಳನ್ನು ನಡೆಸಿದ್ದಾರೆ. ಮನೆ ಮನೆಗೆ ತೆರಳಿ ಕಿಸಾನ್ ನ್ಯಾಯ್ ಜಾಥಾವನ್ನು ಮೆಗಾ ಶೋ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.//////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');