ಹಬ್ಬದ ವೇಳೆ ಗ್ರಾಹಕರಿಗೆ ಬಿಗ್ ಶಾಕ್ : ಸತತ ಆರು ದಿನಗಳಿಂದ ತೈಲ ಬೆಲೆ ಏರಿಕೆ: ಪೆಟ್ರೋಲ್, ಡೀಸೆಲ್ ದರ ಕೇಳಿ ಗ್ರಾಹಕರು ಕಕ್ಕಾ ಬಿಕ್ಕಿ

0
🌐 Belgaum News :

ದೆಹಲಿ : ಸತತ ಆರು ದಿನಗಳಿಂದ ತೈಲ ಬೆಲೆ ಏರಿಕೆಯಾಗಿದ್ದು, ಪೆಟ್ರೋಲ್, ಡೀಸೆಲ್ ಬೆಲೆ ಕೇಳಿ ಗ್ರಾಹಕರು ಕಕ್ಕಾಬಿಕ್ಕಿಯಾಗಿದ್ದಾರೆ.

ಪ್ರಮುಖ ಎಲ್ಲಾ ಮಹಾ ನಗರಗಳಲ್ಲಿಯೂ ಸಹ ಇಂದು ಇಂಧನ ದರ ಏರಿಕೆಯಾಗಿದೆ. ಇಂದು ನಿಮ್ಮ ನಗರದಲ್ಲಿ ಲೀಟರ್ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಎಷ್ಟು ಏರಿಕೆಯಾಗಿದೆ? ಎಂಬೆಲ್ಲಾ ಮಾಹಿತಿಗಳು ಈ ಕೆಳಗಿನಂತಿದೆ ಪರಿಶೀಲಿಸಿ. ಹಬ್ಬದ ಸಂದರ್ಭದಲ್ಲಿ ಬೆಲೆ ಏರಿಕೆಯಾದರಿಂದ ಜನಾಕ್ರೋಶ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107.77 ರೂ.:-

ಲೀಟರ್ ಪೆಟ್ರೋಲ್ ದರದಲ್ಲಿ 30 ಪೈಸೆ ಹಾಗೂ ಲೀಟರ್ ಡೀಸೆಲ್ ದರದಲ್ಲಿ 47 ಪೈಸೆ ಏರಿಕೆಯಾಗಿದೆ. ಆ ಬಳಿಕ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ 104.14 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 92.82 ರೂಪಾಯಿಗೆ ಏರಿಕೆ ಆಗಿದೆ. ಕೋಲ್ಕತ್ತಾದಲ್ಲಿ ಲೀಟರ್ ಪೆಟ್ರೋಲ್ ದರ 104.80 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 95.93 ರೂಪಾಯಿಗೆ ಏರಿಕೆ ಆಗಿದೆ. ಮುಂಬೈನಲ್ಲಿ ಲೀಟರ್ ಪೆಟ್ರೋಲ್ ದರ 110.12 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 100.66 ರೂಪಾಯಿಗೆ ಏರಿಕೆಯಾಗಿದೆ. ಅದೇ ರೀತಿ ಚೆನ್ನೈನಲ್ಲಿ ಲೀಟರ್ ಪೆಟ್ರೋಲ್ ದರ 101.53 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 97.26 ರೂಪಾಯಿಗೆ ಏರಿಕೆಯಾಗಿದೆ.

ಇನ್ನು, ಹೈದರಾಬಾದ್​ನಲ್ಲಿ ಲೀಟರ್ ಪೆಟ್ರೋಲ್ ದರ 108.33 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.27 ರೂಪಾಯಿಗೆ ಏರಿಕೆ ಆಗಿದೆ. ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ ದರ 107.77 ರೂಪಾಯಿ ಹಾಗೂ 98.52 ರೂಪಾಯಿ ನಿಗದಿಯಾಗಿದೆ. ಇನ್ನು, ಪಾಟ್ನಾದಲ್ಲಿ ಲೀಟರ್ ಪೆಟ್ರೋಲ್ ದರ 107.29 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 99.36 ರೂಪಾಯಿ ನಿಗದಿಯಾಗಿದೆ.
ಲಕ್ನೋದಲ್ಲಿ ಲೀಟರ್ ಪೆಟ್ರೋಲ್ ದರ 101.18 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 93.26 ರೂಪಾಯಿ ಇದೆ. ಭೋಪಾಲ್​ನಲ್ಲಿ ಲೀಟರ್ ಪೆಟ್ರೋಲ್ ದರ 112.69 ರೂಪಾಯಿ ಹಾಗೂ ಲೀಟರ್ ಡೀಸೆಲ್ ದರ 101.91 ರೂಪಾಯಿ ಇದೆ. ಅದೇ ರೀತಿ ಚಂಡೀಗಢದಲ್ಲಿ ಲೀಟರ್ ಪೆಟ್ರೋಲ್ ದರ 100.24 ರೂಪಾಯಿ ಇದ್ದರೆ, ಲೀಟರ್ ಡೀಸೆಲ್ ದರ 92.55 ರೂಪಾಯಿ ನಿಗದಿಯಾಗಿದೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');