ಲಖೀಂಪುರ್ ದುರಂತ: ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾ ಮೂರು ದಿನ ಪೊಲೀಸ್ ಕಸ್ಟಡಿಗೆ

0
🌐 Belgaum News :

ಲಖನೌ: ಲಖೀಂಪುರ್ ಖೇರಿ ದುರಂತಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಟ್ಟಿದ್ದ ಕೇಂದ್ರ ಸಚಿವರ ಪುತ್ರ ಆಶಿಶ್ ಮಿಶ್ರಾನನ್ನ ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ನಿನ್ನೆ ನಡೆದ ಸುದೀರ್ಘ ವಿಚಾರಣೆಯ ನಂತರ ಆಶಿಶ್ ಮಿಶ್ರಾನನ್ನ ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಈ ವೇಳೆ ಕೋರ್ಟ್ ಆಶಿಶ್ ಮಿಶ್ರಾಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು.

ಇಂದು ಉತ್ತರಪ್ರದೇಶ ಪೊಲೀಸರು ಲಖೀಂಪುರ್ ಖೇರಿ ಕೋರ್ಟ್​ಗೆ ಅರ್ಜಿ ಸಲ್ಲಿಸಿ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಪ್ರತಿಭಟನಾ ನಿತರ ರೈತರ ಮೇಲೆ ಕಾರ್ ಹರಿಸಿ ಕೊಲೆಗೈದ ಆರೋಪ ಆಶಿಶ್ ಮಿಶ್ರಾ ಮೇಲಿದೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');