ರಾಜ್ಯದಲ್ಲಿ ಸರ್ಕಾರಿ ಶಾಲೆಗೆ ಮೂಲಸೌಕರ್ಯ ಕಲ್ಪಿಸಿ : ಸಿಎಂಗೆ ತಾಕೀತು ಮಾಡಿ ಗಮನ ಸೆಳೆದ ವಿದ್ಯಾರ್ಥಿನಿ

0
🌐 Belgaum News :

ಹೊಸಪೇಟೆ : ‘ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರಿ ಶಾಲೆಗಳಲ್ಲಿ ಅಗತ್ಯ ಮೂಲಸೌಕರ್ಯ ಕಲ್ಪಿಸಿ ಅಭಿವೃದ್ಧಿ ಪಡಿಸಿ’ ಎಂದು ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಬಿ.ಎಚ್‌. ಶಾರದಾ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ತಾಕೀತು ಮಾಡಿ ಗಮನ ಸೆಳೆದಿದ್ದಾಳೆ.

ಖಾಸಗಿ ಸುದ್ದಿವಾಹಿನಿಯು ಸಿ.ಎಂ. ಜತೆ ಏರ್ಪಡಿಸಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಶಾರದಾ, ‘ದೆಹಲಿಯ ಶಾಲೆಗಳಲ್ಲಿ ಖಾಸಗಿ ಶಾಲೆಗಳಿಗಿಂತ ಉತ್ತಮ ಸೌಕರ್ಯ ಕಲ್ಪಿಸಲಾಗಿದೆ. ಅದೇ ರೀತಿ ನಮ್ಮ ರಾಜ್ಯದ ಎಲ್ಲ ಶಾಲೆಗಳನ್ನು ಅಭಿವೃದ್ಧಿ ಪಡಿಸಬೇಕು. ಎಲ್ಲ ಶಾಲೆಗಳಲ್ಲಿ ಎಫ್‌ಡಿಎ, ಎಸ್‌ಡಿಎ ಹುದ್ದೆಗಳನ್ನು ತುಂಬಬೇಕು. ಹೀಗೆ ಮಾಡಿದರೆ ಶಿಕ್ಷಕರ ಮೇಲಿನ ಹೆಚ್ಚಿನ ಭಾರ ಕಡಿಮೆಯಾಗುತ್ತದೆ. ಅವರು ಪೂರ್ಣ ಪ್ರಮಾಣದಲ್ಲಿ ಪಾಠದ ಕಡೆಗೆ ಲಕ್ಷ್ಯ ಕೊಡಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದಳು.

‘ಪೋಷಕರು ಟಿ.ಸಿ ಕೇಳಿಕೊಂಡು, ಮಕ್ಕಳ ಪ್ರವೇಶಕ್ಕಾಗಿ ಶಾಲೆಗೆ ಬಂದರೆ ಶಿಕ್ಷಕರು ಪಾಠವನ್ನು ಮಧ್ಯದಲ್ಲಿಯೇ ಬಿಟ್ಟು ಹೋಗುತ್ತಾರೆ. ಇದು ಹೋಗಬೇಕು’ ಎಂದು ಮನವಿ ಮಾಡಿದಳು. ಅದಕ್ಕೆ ಸಿ.ಎಂ. ಸಕಾರಾತ್ಮಕವಾಗಿ ಸ್ಪಂದಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.//////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');