ಹಾನಗಲ್ ಕ್ಷೇತ್ರದಲ್ಲಿ ನಾಳೆಯಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಪ್ರಚಾರ; ಪಕ್ಷದ ಅಭ್ಯರ್ಥಿಯ ಗೆಲುವಿಗೆ ರಣತಂತ್ರ

0
🌐 Belgaum News :

ಹಾನಗಲ್: ಕ್ಷೇತ್ರದ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವ ನಿಟ್ಟಿನಲ್ಲಿಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನಾಳೆಯಿಂದ ಚುನಾವಣಾ ಪ್ರಚಾರದ ಅಖಾಡಕ್ಕೆ ದುಮುಕುತ್ತಿದ್ದಾರೆ.

ಸತೀಶ ಜಾರಕಿಹೊಳಿ ಅವರು ನಾಳೆಯಿಂದ ಎರಡು ದಿನಗಳ ಕಾಲ ಹಾನಗಲ್ ವಿಧಾನಸಭಾ ಮತಕ್ಷೇತ್ರದಾದ್ಯಂತ ಸಂಚರಿಸಿ, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಪ್ರಚಾರ ನಡೆಸಲಿದ್ದಾರೆ.

ಹಾನಗಲ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸತೀಶ ತಮ್ಮದೇಯಾದ ಕಾರ್ಯಪಡೆಯನ್ನು ಹೊಂದಿದ್ದಾರೆ. ಈ ಹಿಂದೆ ಹಲವಾರು ಚುನಾವಣೆಗಳಲ್ಲಿ ಕೂಡ ಅವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡಿದ್ದಾರೆ. ಕ್ಷೇತ್ರದಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದಾರೆ.

 

ಹೈಕಮಾಂಡ್ ಕೂಡ ಇವರ ಪ್ರಭಾವ ಮತ್ತು ವರ್ಚಸ್ಸನ್ನು ಮನಗಂಡು ಹಾನಗಲ್ ಉಪಚುನಾವಣೆಯ ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ. ಸತೀಶ ಜಾರಕಿಹೊಳಿ ಅವರು ಕೂಡ ಚುನಾವಣೆಯನ್ನು ಪ್ರತಿಷ್ಠೆಯಾಗಿ ಸ್ವೀಕಾರ ಮಾಡಿದ್ದಾರೆ.

ಸಿಂದಗಿ ಉಪಚುನಾವಣಾ ಪ್ರಚಾರದಲ್ಲೂ ಭಾಗಿ:

ಸತೀಶ ಜಾರಕಿಹೊಳಿ ಅವರು ಸಿಂದಗಿ ಉಪಚುನಾವಣೆಯಲ್ಲಿಯೂ ಕೂಡ ಮುಂದಿನ ವಾರ ಪಕ್ಷದ ಅಭ್ಯರ್ಥಿ ಪರವಾಗಿ ಬಹಿರಂಗ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಯೂ ಕೂಡ ಅವರದ್ದೆಯಾದ ಕಾರ್ಯಪಡೆಯಿದ್ದು, ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಅವರ ಗೆಲುವಿಗಾಗಿ ಶತಾಯಗತಾಯ ಪ್ರಯತ್ನ ಮಾಡಲಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');