ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತೆ ಸಚಿವ ಸ್ಥಾನಕ್ಕೆ ಲಾಭಿ; ಉತ್ತರ ಭಾರತದೆಡೆ ಟೆಂಪಲ್ ರನ್

0
🌐 Belgaum News :

ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಮತ್ತೆ ಸಚಿವ ಸ್ಥಾನಕ್ಕೆ ಲಾಭಿ ಆರಂಭಿಸಿದ್ದು, ಉತ್ತರ ಭಾರತದೆಡೆ ಟೆಂಪಲ್ ರನ್ ಆರಂಭಿಸಿದ್ದಾರೆ.

ಮತ್ತೆ ಸಚಿವ ಸಂಪುಟ ಸೇರಲು ರಮೇಶ ಜಾರಕಿಹೊಳಿ ಶತಾಯಗತಾಯ ಕಸರತ್ತು ಆರಂಭಿಸಿದ್ದಾರೆ. ಸಚಿವ ಸ್ಥಾನಕ್ಕಾಗಿ ದೆಹಲಿ ಯಾತ್ರೆ ಕೈಗೊಂಡಿರುವ ಅವರು, ವರಿಷ್ಠರ ಭೇಟಿಗೆ ಮುಂದಾಗಿದ್ದಾರೆ. ಈ ನಡುವೆ ಹಲವು ದೇವಾಲಯಗಳಿಗೂ ಭೇಟಿ ನೀಡುತ್ತಿದ್ದಾರೆ.

ಈ ಸಂದರ್ಭದಲ್ಲಿ ಅವರು ಉತ್ತರಾಖಂಡಕ್ಕೆ ಭೇಟಿ ಕೊಟ್ಟಿದ್ದು ಐತಿಹಾಸಿಕ ಕೇದಾರನಾಥ, ಬದ್ರಿನಾಥ ಕ್ಷೇತ್ರಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ರಮೇಶ ಜಾರಕಿಹೊಳಿ‌ ಕೇದಾರನಾಥ, ಬದ್ರಿನಾಥನ ದರ್ಶನ ಪಡೆದಿದ್ದಾರೆ.

ರಮೇಶ ಜಾರಕಿಹೊಳಿಗೆ ಪುತ್ರ ಅಮರನಾಥ ಜಾರಕಿಹೊಳಿ, ಅಳಿಯ ಅಂಬಿರಾವ್ ಪಾಟೀಲ್ ಸಾಥ್ ನೀಡಿದ್ದು, ಹೆಲಿಕಾಪ್ಟರ್ ಮೂಲಕ ತೆರಳಿ ದೇವರ ದರ್ಶನ ಪಡೆದಿದ್ದಾರೆ. ಜೊತೆಗೆ ಇಂದು ಸಂಜೆ ಅಥವಾ ನಾಳೆ ಬೆಳಗಾವಿಗೆ ಮರಳುವ ಸಾಧ್ಯತೆ ಇದೆ.

ವರಿಷ್ಠರಿಗೆ ರಮೇಶ ಜಾರಕಿಹೊಳಿ ಮನವಿ:

ಮುಂಬರುವ ಚುನಾವಣೆ ಗಮನದಲ್ಲಿಟ್ಟುಕೊಂಡು ಸಚಿವ ಸ್ಥಾನ ನೀಡುವಂತೆ ವರಿಷ್ಠರಲ್ಲಿ ಜಾರಕಿಹೊಳಿ ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ. ಜಿಪಂ, ತಾಪಂ‌ ಹಾಗೂ ವಿಧಾನ ಪರಿಷತ್ ಚುನಾವಣೆ ಹತ್ತಿರವಾಗುತ್ತಿದೆ. ಕ್ಷೇತ್ರದ ಜನರಿಗೆ ಮರಳಿ ಸಚಿವ ಸ್ಥಾನ ಸಿಗುತ್ತೆ ಎಂಬ ಮಾತು ಕೊಟ್ಟಿದ್ದೆ. ಹೀಗಾಗಿ ಸಚಿವ ಸ್ಥಾನ ನೀಡಿದರೇ ಅನುಕೂಲವಾಗಲಿದೆ ಎಂದು ವರಿಷ್ಠರ ಬಳಿ ಕೇಳಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಪ್ರಭಾವ ಹೊಂದಿ, ತಮ್ಮದೇ ಛಾಪು ಮೂಡಿಸಿರುವ ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರು ಜಿಲ್ಲೆಯಲ್ಲಿ ತಮ್ಮ ಅಸ್ತಿತ್ವವನ್ನು ಹಿಡಿತದಲ್ಲಿ ಇಟ್ಟುಕೊಳ್ಳಲು ಮುಂಬರುವ ವಿಧಾನ ಪರಿಷತ್ ಚುನಾವಣೆ, ಜಿಪಂ ಹಾಗೂ ತಾಪಂ ಚುನಾವಣೆಗಳಲ್ಲಿ ಪಕ್ಷದ ವರ್ಚಸ್ಸನ್ನು ಹೆಚ್ಚಿಸುವ ಹಿನ್ನೆಲೆಯಲ್ಲಿ ವರಿಷ್ಠರ ಮೇಲೆ ಪ್ರಭಾವ ಬೀರಿ, ಸಚಿವ ಸ್ಥಾನ ನೀಡಿದರೇ ಈ ಚುನಾವಣೆಗಳಲ್ಲಿ ಯಶಸ್ಸಿಗೆ ಸಹಕಾರಿಯಾಗಲಿದೆ ಎಂದು ವರಿಷ್ಠರ ಬಳಿ ಮನವಿ ಮಾಡಿಕೊಂಡಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.//////

📱 Read Top News, Belgaum News Updates, Belagavi News in Kannada, Latest News on News Belgaum
window.dataLayer = window.dataLayer || []; function gtag(){dataLayer.push(arguments);} gtag('js', new Date()); gtag('config', 'UA-177346011-1');