Belagavi News In Kannada | News Belgaum

ಕರ್ನಾಟಕ ವಾಯವ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿ ಹೆಸರು ನೋಂದಣಿಗೆ ನವೆಂಬರ್ 6 ರವರೆಗೆ ಅವಕಾಶ

🌐 Belgaum News :

ಬೆಳಗಾವಿ, ಅ.15 : ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ವಾಯವ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಕೊಳ್ಳಲು ಅರ್ಹರಿರುವ ವ್ಯಕ್ತಿಗಳು ತಮ್ಮ ಹೆಸರನ್ನು ಇದುವರೆಗೂ ಸೇರಿಸದೇ ಇದ್ದಲ್ಲಿ

ನಿಗದಿತ ನಮೂನೆ 18 ರಲ್ಲಿ ನವೆಂಬರ್ 6 ರ ಒಳಗಾಗಿ ಅಥವಾ ಅದಕ್ಕೂ ಮುಂಚೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಕರ್ನಾಟಕ ವಾಯವ್ಯ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ತಿಳಿಸಿದ್ದಾರೆ.

 

ಮತದಾರರ ನೋಂದಣಿ ನಿಯಮಗಳು 1960 ರ 31(4) ನೇ ನಿಯಮದ ಅನುಸಾರ ಕರ್ನಾಟಕ ವಾಯವ್ಯ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಿಗಾಗಿ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು, ಮತದಾರರ ನೋಂದಣಿ ನಿಯಮಗಳು 1960 ಕ್ಕೆ ಲಗತ್ತಿಸಿರುವ ಮತ್ತು ಎರಡನೇ ಅನುಸೂಚಿಯಲ್ಲಿ ಪುನರುದ್ಧರಿಸಿರುವ ನಮೂನೆ 18ರಲ್ಲಿ ಅರ್ಜಿಯನ್ನು ನವೆಂಬರ್ 6 ರ ಒಳಗಾಗಿ ಅಥವಾ ಅದಕ್ಕೂ ಮೊದಲು ಮತದಾರರ ನೋಂದಣಾಧಿಕಾರಿಗಳ/ಸಂಬಂಧಪಟ್ಟ ಸಹಾಯಕ ಮತದಾರರ ನೋಂದಣಾಧಿಕಾರಿಗಳ/ನಿಯೋಜಿತ ಅಧಿಕಾರಿಗಳ ಕಚೇರಿಗೆ ಕಳುಹಿಸಬಹುದು ಅಥವಾ ತಲುಪಿಸಬಹುದು.

 

ಮೇಲ್ಕಂಡ ವಿವರಗಳು ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಇವರ ವೆಬ್ ಸೈಟ್ ವಿಳಾಸ ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ರಲ್ಲಿ ಸಹ ಲಭ್ಯವಿದೆ ಎಂದು ಕರ್ನಾಟಕ ವಾಯವ್ಯ ಪದವೀಧರರ ಮತಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum