Belagavi News In Kannada | News Belgaum

ಬೆಲೆ ಏರಿಕೆಗೆ ಜನರು ತಕ್ಕ ಉತ್ತರ ನೀಡಬೇಕು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

🌐 Belgaum News :

ಸಿಂದಗಿ: ಅಗತ್ಯ ವಸ್ತುಗಳ ಬೆಲೆಯನ್ನು ನಿರಂತರವಾಗಿ ಏರಿಕೆ ಮಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಜನರು ಉಪಚುನಾಣೆಯಲ್ಲಿ ತಕ್ಕ ಉತ್ತರ ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಸಿಂದಗಿ ವಿಧಾನಸಭಾ ಉಪಚುನಾವಣೆ ಅಂಗವಾಗಿ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಪರ ಯಂಕಂಚಿ ಗ್ರಾಮದಲ್ಲಿ ಇಂದು ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಕೇಂದ್ರ ಸರ್ಕಾರ ಜನರ ಸಮಸ್ಯೆಯನ್ನು ಅರ್ಥ ಮಾಡಿಕೊಳ್ಳದೇ ನಿರಂತರವಾಗಿ ಬೆಲೆಯನ್ನು ಏರಿಕೆ ಮಾಡುತ್ತಲೇ ಇದೆ. ರಾಜ್ಯ ಸರ್ಕಾರ ಕೂಡ ಜನಪರವಾದ ಕಾರ್ಯಕ್ರಮಗಳನ್ನು ಕೈಗೊಳ್ಳುವುದನ್ನು ಬಿಟ್ಟು ಜನವಿರೋಧಿಯಾಗಿ ಆಡಳಿತ ನಡೆಸುತ್ತಿದೆ. ಹೀಗಾಗಿ, ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ತಕ್ಕ ಉತ್ತರ ನೀಡಬೇಕು ಎಂದರು.

ಮತದಾರರು ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಅವರಿಗೆ ಮತ ನೀಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬಬೇಕು. ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರ ನಡೆಸಬೇಕು ಎಂದು ಸತೀಶ ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ದ್ರುವ ನಾರಾಯಣ ಸೇರಿ ಅನೇಕ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದರು.//////

📱 Read Top News, Belgaum News Updates, Belagavi News in Kannada, Latest News on News Belgaum