Belagavi News In Kannada | News Belgaum

ಚುನಾವಣಾ ಪ್ರಚಾರದ ಮಧ್ಯೆ ಹುಬ್ಬಳ್ಳಿ ಜಿಮ್​ನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವರ್ಕೌಟ್

🌐 Belgaum News :

ಹುಬ್ಬಳ್ಳಿ: ಉಪಚುನಾವಣೆ ಪ್ರಚಾರದ ಮಧ್ಯೆ ವಿಪಕ್ಷ ನಾಯಕ ಸಿದ್ದರಾಮಯ್ಯ ವರ್ಕೌಟ್ ಮಾಡಿದ್ದಾರೆ. ಹುಬ್ಬಳ್ಳಿಯ ಖಾಸಗಿ ಹೋಟೆಲ್​ವೊಂದರ ಜಿಮ್​ನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವರ್ಕೌಟ್ ಮಾಡಿದ್ದಾರೆ.

ಹುಬ್ಬಳ್ಳಿಯ ಏರ್ಪೋರ್ಟ್ ಮುಂಭಾಗದಲ್ಲಿರುವ ಹೋಟೆಲ್​ನಲ್ಲಿ ಸದ್ಯ ವಾಸ್ತವ್ಯ ಹೂಡಿರುವ ಸಿದ್ದರಾಮಯ್ಯ, ಹೋಟೆಲ್ ಆವರಣದಲ್ಲಿ ಬೆಳಿಗ್ಗೆ ವಾಕಿಂಗ್ ಮಾಡಿದ್ದಾರೆ. ನಂತರ ಜಿಮ್​ನಲ್ಲಿ ದೇಹ ದಂಡಿಸಿದ್ದಾರೆ. ಸಿದ್ದರಾಮಯ್ಯಗೆ ಸ್ಥಳೀಯ ನಾಯಕರು ಕೂಡಾ ಸಾಥ್ ನೀಡಿದ್ದಾರೆ.

ಇಂದು ಸಿಂದಗಿ ಉಪಚುನಾವಣೆ ಪ್ರಚಾರದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ನಡೆಸಲಿದ್ದಾರೆ.

ಮೂರು ಜಿಲ್ಲಾ ಪಂಚಾಯತಿ ಕ್ಷೇತ್ರಗಳಲ್ಲಿ ಸರಣಿ ಸಭೆಗಳನ್ನು ನಡೆಸಿ ಕಾಂಗ್ರೆಸ್ ಕ್ಯಾಂಪೇನ್ ಮಾಡಲಿದೆ. ಸ್ಥಳೀಯ ಶಾಸಕರು, ಮುಖಂಡರು ಸಾಥ್ ನೀಡಲಿದ್ದಾರೆ. ಪಕ್ಷದ ಸಾಂಪ್ರದಾಯಿಕ ಮತಗಳನ್ನು ಬಿಜೆಪಿ ಹಾಗೂ ಜೆಡಿಎಸ್​ಗೆ ಹೋಗದಂತೆ ನೋಡಿಕೊಳ್ಳಲು ಸಿದ್ದರಾಮಯ್ಯ ಸೂಚಿಸಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum