Belagavi News In Kannada | News Belgaum

ಅಧಿಕೃತ ಆಹ್ವಾನ ನೀಡಿದರೇ ಕಾಂಗ್ರೆಸ್ ಸೇರ್ಪಡೆಗೆ ಸಿದ್ಧ: ಮುಖಂಡ ಅಶೋಕ ಪೂಜಾರಿ

🌐 Belgaum News :

ಗೋಕಾಕ: ಅಧಿಕೃತ ಆಹ್ವಾನ ನೀಡಿದರೇ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ಸಿದ್ಧ ಎಂದು ರಾಜಕೀಯ ದುರೀಣ ಅಶೋಕ ಪೂಜಾರಿ ತಿಳಿಸಿದ್ದಾರೆ.

ತಾಲೂಕಿನ ಸಾವಳಗಿ ಗ್ರಾಮದಲ್ಲಿ ಇಂದು ತಮ್ಮ ಬೆಂಬಲಿಗರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ನನ್ನನ್ನು ಪಕ್ಷಕ್ಕೆ ಆಹ್ವಾನಿಸಿದ್ದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ನನಗೆ ಖುದ್ದಾಗಿ ಭೇಟಿ ನೀಡಿ ಆಹ್ವಾನ ನೀಡಿದ್ದರು. ಆಗ ನಾನು ಕಾಲಾವಕಾಶ ಕೋರಿದ್ದೆ ಎಂದರು.

ನಂತರದ ದಿನಗಳಲ್ಲಿ ಬೆಂಗಳೂರಿಗೆ ತೆರಳಿ ನಾನು ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ್ದೆ.ಆದರೆ, ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ತೀರ್ಮಾನಿಸಿಲ್ಲ. ಅಧಿಕೃತವಾಗಿ ದಿನಾಂಕ ನಿಗದಿಪಡಿಸಿ ಆಹ್ವಾನ ನೀಡಿದರೇ ಸೇರ್ಪಡೆಗೆ ಸಿದ್ಧನಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

ಈ ಬಗ್ಗೆ ನಾನು ಕ್ಷೇತ್ರದ ಮತದಾರರು ಹಾಗೂ ನನ್ನ ಬೆಂಬಲಿಗರೊಂದಿಗೆ ಚರ್ಚಿಸಿದ್ದೇನೆ. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರೇ ತಪ್ಪಿಲ್ಲ ಎಂದು ಬೆಂಬಲಿಗರು ತಿಳಿಸಿದ್ದಾರೆ. ಹೀಗಾಗಿ, ಸೇರ್ಪಡೆ ಬಗ್ಗೆ ಚಿಂತಿಸುತ್ತಿದ್ದೇನೆ ಎಂದು ಹೇಳಿದರು.

ಪ್ರತಿ ಗ್ರಾಮಕ್ಕೂ ಭೇಟಿ:

ಮತದಾರರೊಂದಿಗೆ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಅಕ್ಟೋಬರ್ 1 ರಿಂದ ನವೆಂಬರ್ 30 ರವರೆಗೆ “ಸೌಹಾರ್ದ ಭೇಟಿ ಮತ್ತು ಜನಸಂಪರ್ಕ ಅಭಿಯಾನ” ಹಮ್ಮಿಕೊಂಡಿದ್ದೇನೆ. ಮತಕ್ಷೇತ್ರದ ಪ್ರತಿ ಗ್ರಾಮಕ್ಕೂ ತೆರಳಿ ಬೆಂಬಲಿಗರು ಹಾಗೂ ಮತದಾರರನ್ನು ಭೇಟಿ ಮಾಡುತ್ತಿದ್ದೇನೆ ಎಂದು ತಿಳಿಸಿದರು. /////

📱 Read Top News, Belgaum News Updates, Belagavi News in Kannada, Latest News on News Belgaum