Belagavi News In Kannada | News Belgaum

ಉತ್ತರ ಪ್ರದೇಶ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.40ರಷ್ಟು ಟಿಕೆಟ್

🌐 Belgaum News :

ಲಕ್ನೋ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ 2022ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶೇ.40ರಷ್ಟು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಭರವಸೆ ನೀಡಿದ್ದಾರೆ.

ಉತ್ತರ ಪ್ರದೇಶದ ಲಕ್ನೋದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ದೇಶದ ರಾಜಕೀಯದಲ್ಲಿ ಮಹಿಳೆಯರು ಪೂರ್ಣ ಪ್ರಮಾಣದ ಪಾಲುದಾರರಾಗಬೇಕೆಂದು ನಾವು ಬಯಸುತ್ತೇವೆ” ಎಂದು ಹೇಳಿದರು.

“ನಾನು ಇಂದು ನಮ್ಮ ಮೊದಲ ಭರವಸೆಯ ಬಗ್ಗೆ ಮಾತನಾಡಲಿದ್ದೇನೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮಹಿಳೆಯರಿಗೆ ಶೇಕಡಾ 40 ರಷ್ಟು ಟಿಕೆಟ್ ನೀಡಲಿದೆ ಎಂದು ನಾವು ನಿರ್ಧರಿಸಿದ್ದೇವೆ” ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum