Belagavi News In Kannada | News Belgaum

ಹಾನಗಲ್, ಸಿಂದಗಿಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ

🌐 Belgaum News :

ಹಾನಗಲ್, ಸಿಂದಗಿಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ

ಗೋಕಾಕ: ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಎರಡು ದಿನಗಳಿಂದ ಸಿಂದಗಿಯಲ್ಲಿ ಚುನಾವಣಾ ಪ್ರಚಾರ ಕೈಗೊಂಡು, ಹೆಲಿಕ್ಯಾಪ್ಟರ್ ಮೂಲಕ ಇಂದು ನಗರಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಹಾನಗಲ್ ಹಾಗೂ ಸಿಂದಗಿ ವಿಧಾನಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲ್ಲುವ ಎಲ್ಲ ಅವಕಾಶ ಇದೆ. ಆದರೆ, ಹೆಚ್ಚು ಪ್ರಯತ್ನ ಮಾಡಬೇಕಿದೆ ಎಂದರು.

ಪಕ್ಷದ ಗೆಲುವಿಗಾಗಿ ನಾನು ಎರಡು ಕಡೆಯೂ ಈಗಾಗಲೇ ಪ್ರಚಾರಕ್ಕೆ ಹೋಗಿ ಬಂದಿದ್ದೇನೆ. ಮತ್ತೆ ಕೆಲವು ದಿನ ಹಾನಗಲ್ ಗೆ ಪ್ರಚಾರಕ್ಕೆ ತೆರಳುತ್ತೇನೆ. ನಂತರ ಸಿಂದಗಿಯಲ್ಲೂ ಪ್ರಚಾರ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಪಕ್ಷದ ಗೆಲುವಿನಲ್ಲಿ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರ ಪಾತ್ರ ಪ್ರಮುಖವಾಗಿದೆ.ಅವರು ಹೆಚ್ಚು ಜವಾಬ್ದಾರಿ ತೆಗೆದುಕೊಂಡು ಕೆಲಸ ಮಾಡಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

📱 Read Top News, Belgaum News Updates, Belagavi News in Kannada, Latest News on News Belgaum