Belagavi News In Kannada | News Belgaum

ಡಿಸೆಂಬರ್ ಅಂತ್ಯದ ಒಳಗಾಗಿ ನವೋದಯ ಶಾಲೆಯ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ

🌐 Belgaum News :

ಕೋಲಾರ:ಡಿಸೆಂಬರ್ ಅಂತ್ಯದ ಒಳಗಾಗಿ ನವೋದಯ ಶಾಲೆಯ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಸಂಬಂಧಪಟ್ಟ ಅಧಿಕಾರಗಳಿಗೆ ಸೂಚಿಸಿದರು.

ತಾಲೂಕಿನ ವಕ್ಕಲೇರಿ ಹೋಬಳಿಯ ತಿರುಮಲಕೊಪ್ಪ ಸಮೀಪ ನಿರ್ಮಾಣಗೊಳ್ಳುತ್ತಿರುವ ನವೋದಯ ವಸತಿ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಅವರು ಕಳೆದ ಒಂದೂವರೆ ವರ್ಷದಿಂದಲೂ ಕೊರೊನಾದಿಂದಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ
ಹಿನ್ನಡೆಯಾಗಿತ್ತು. ಇದೀಗ ಎಲ್ಲವೂ ಚೇತರಿಸಿಕೊಂಡಿವೆ. ಶಾಲಾ-ಕಾಲೇಜುಗಳೂ ಆರಂಭಗೊಂಡಿವೆ. ಹೀಗಾಗಿ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಕಾಮಗಾರಿಯನ್ನು ಡಿಸೆಂಬರ್ ಒಳಗಾಗಿ ಪೂರ್ಣಗೊಳಿಸಬೇಕೆಂದು ಹೇಳಿದರು.

ಶಾಲೆಗೆ ಸಂಪರ್ಕ ಕಲ್ಪಿಸುವ ರಸ್ತೆ ಹಳ್ಳಗಳಿಂದ ಕೂಡಿದ್ದು ಸಂಚಾರಕ್ಕೆ
ತೊಂದರೆಯಾಗುತ್ತಿದೆ. ಗ್ರಾಮ ಪಂಚಾಯಿತಿ ಸಹಕಾರದಿಂದ ನರೇಗಾ
ಯೋಜನೆಯಡಿ ಕೂಡಲೇ ರಸ್ತೆ ನಿರ್ಮಿಸಿಕೊಡಿ ಎಂದು ಪಂಚಾಯಿತಿ ಅಧ್ಯಕ್ಷರಿಗೆ ತಿಳಿಸಲಾಯಿತು.ಎ.ಎಸ್‌.ಕೆ ಕಂಪನಿಯು ಸಿ.ಎಸ್‌.ಆರ್ ಅನುದಾನ ಬಳಸಿಕೊಂಡು ಕುಡಿಯುವ ನೀರಿನ ಘಟಕ ನಿರ್ಮಿಸಿ ಕೊಡಲಾಗುತ್ತದೆ ಎಂದರು

ಒಟ್ಟಾರೆಯಾಗಿ ನವೋದಯ ಶಾಲೆಗೆ ಸಂಬಂಧಿಸಿದಂತೆ ಬಾಕಿ ಇರುವ
ಕಾಮಗಾರಿಗಳನ್ನು ಡಿಸೆಂಬರ್ ತಿಂಗಳ ಒಳಗಾಗಿ ಪೂರ್ಣಗೊಳಿಸಲು ಹೆಚ್ಚುವರಿ ಕಾರ್ಮಿಕರನ್ನು ಕರೆಸಿಕೊಂಡು ಕೆಲಸ ಮಾಡಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ ಕಲ್ಪಿಸಬೇಕೆಂದು ಸೂಚಿಸಿದರು.

ವಕ್ಕಲೇರಿ ಗ್ರಾಮ ಪಂಚಾಯತಿ ಅಧ್ಯಕ್ಷ ಮೈಲಾಂಡಹಳ್ಳಿ ಮುರಳಿ ಸರ್ವೇ ನಂಬರ್ 259ರಲ್ಲಿರುವ ಜಮೀನಿನಲ್ಲಿ 6 ಎಕರೆ ಬಳಸಿಕೊಂಡು ಉತ್ತಮ ಕ್ರೀಡಾಂಗಣವನ್ನು ನಿರ್ಮಿಸಿ ಕೊಟ್ಟು ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಮಾಡಬೇಕಾಗಿದೆ ಎಂದು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಉಕೇಶ್‌ಕುಮಾರ್, ವಕ್ಕಲೇರಿ ಗ್ರಾಪಂ ಪಿಡಿಒ ಮಂಜುನಾಥ್ ಪ್ರಸಾದ್ ಅಧಿಕಾರಿಗಳು ಇದ್ದರು./////

📱 Read Top News, Belgaum News Updates, Belagavi News in Kannada, Latest News on News Belgaum