Belagavi News In Kannada | News Belgaum

ಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಧ್ವನಿ ಎತ್ತಿದ ನಟ, ನಿರ್ದೇಶಕ ರಿಷಬ್​ ಶೆಟ್ಟಿ

🌐 Belgaum News :

ಬೆಳಗಾವಿ: ಬೆಳಗಾವಿಯಲ್ಲಿ ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ಅವಕಾಶ ನೀಡುವಂತೆ ನಟ ಹಾಗೂ ನಿರ್ದೇಶಕ ರಿಷಬ್​ ಶೆಟ್ಟಿ ಧ್ವನಿ ಎತ್ತಿದ್ದಾರೆ.

ಕೋವಿಡ್ ನಿಯಮದ ಕಾರಣ ನೀಡಿ ಅದ್ಧೂರಿ ರಾಜ್ಯೋತ್ಸವ ಆಚರಣೆಗೆ ರಾಜ್ಯ ಸರ್ಕಾರ ಇದುವರೆಗೂ ಗ್ರೀನ್ ಸಿಗ್ನಲ್ ನೀಡಿಲ್ಲ. ಆದರೆ, ಸಿಂದಗಿ, ಹಾನಗಲ್ ಉಪಚುನಾವಣಾ ಪ್ರಚಾರದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಬೃಹತ್ ಸಮಾವೇಶಗಳನ್ನು ನಡೆಸುತ್ತಿವೆ. ಸರ್ಕಾರದ ಈ ದ್ವಂದ್ವ ನಿಲುವಿಗೆ ಕನ್ನಡಪರ ಸಂಘಟನೆಗಳು ಹಾಗೂ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.  ಈಗ ರಿಷಬ್ ಶೆಟ್ಟಿ ಕೂಡ ಸರ್ಕಾರದ ನಿಲುವನ್ನು ಖಂಡಿಸಿದ್ದಾರೆ.

ಟ್ವಿಟ್ ಮೂಲಕ ಮನವಿ ಮಾಡಿದ ರಿಷಬ್:

ಈ ಬಗ್ಗೆ ಟ್ವಿಟ್ ಮಾಡಿರುವ ರಿಷಬ್ ಶೆಟ್ಟಿ, “ರಾಜಕೀಯ ಸಮಾವೇಶಕ್ಕಿರುವ ನಿಯಮ ಸಡಿಲಿಕೆ ರಾಜ್ಯೋತ್ಸವಕ್ಕೇಕಿಲ್ಲ? ಆಚರಣೆ, ಇತಿಹಾಸಗಳು ಭಿನ್ನವಾದರೂ ನಾಡಿಗೆ ದಸರಾ ಜತೆಗಿನ ಭಾವನಾತ್ಮಕ ಸಂಬಂಧವೇ ರಾಜ್ಯೋತ್ಸವದೊಂದಿಗೂ ಇದೆ. ಮೈಸೂರಿನ ಸಂಭ್ರಮವೇ ಬೆಳಗಾವಿಯಲ್ಲೂ ಮುಂದುವರೆಯಲು ಮಾನ್ಯ ಮುಖ್ಯಮಂತ್ರಿಗಳು  ಅವಕಾಶ ನೀಡಬೇಕಾಗಿ ವಿನಂತಿ” ಎಂದು ಮನವಿ ಮಾಡಿದ್ದಾರೆ. ಇದನ್ನು ನೂರಾರು ಜನರು ರೀಟ್ವಿಟ್​ ಮಾಡಿ ತಮ್ಮ ಬೆಂಬಲ ಸೂಚಿಸಿದ್ದಾರೆ.

ನವೆಂಬರ್​ 1ರಂದು ಕನ್ನಡ ರಾಜ್ಯೋತ್ಸವ. ರಾಜ್ಯದ ಬಹುತೇಕ ಕಡೆಗಳಲ್ಲಿ ಇದನ್ನು ಹಬ್ಬದ ರೀತಿಯಲ್ಲಿ ಆಚರಣೆ ಮಾಡಲಾಗುತ್ತದೆ. ಆದರೆ, ಕೊವಿಡ್​ ಇನ್ನೂ ಪೂರ್ತಿಯಾಗಿ ತೊಲಗದ ಕಾರಣ ಕೆಲ ನಿಯಮಗಳು ಜಾರಿಯಲ್ಲಿವೆ. ಮೈಸೂರು ದಸರಾ ಆಚರಣೆಗೆ ಆರಂಭದಲ್ಲಿ ಕೆಲ ನಿರ್ಬಂಧಗಳನ್ನು ಹೇರಲು ಸರ್ಕಾರ ಮುಂದಾಗಿತ್ತು. ಆದರೆ, ವಿರೋಧದ ನಂತರ ಇದನ್ನು ಸಡಿಲ ಮಾಡಲಾಗಿತ್ತು. ಆದರೆ, ರಾಜಕೀಯ ಸಮಾವೇಶ ಬಂದಾಗ ಈ ಯಾವ ನಿಯಮಗಳೂ ಅನ್ವಯ ಆಗುವುದಿಲ್ಲ. ಉಪ ಚುನಾವಣೆ ಸಂದರ್ಭದಲ್ಲಿ ರಾಜಕಾರಣಿಗಳು ರ್ಯಾಲಿ ನಡೆಸಲು ಯಾವುದೇ ನಿರ್ಬಂಧ ಇರುವುದಿಲ್ಲ. ಈ ವಿಚಾರ ಇಟ್ಟುಕೊಂಡು ರಿಷಬ್​ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.//////

📱 Read Top News, Belgaum News Updates, Belagavi News in Kannada, Latest News on News Belgaum