Belagavi News In Kannada | News Belgaum

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪದವಿ ಹುಡುಗಿಯರಿಗೆ ಎಲೆಕ್ಟ್ರಿಕ್ ಸ್ಕೂಟಿ, 12ನೇ ತರಗತಿ ಪಾಸ್ ಹುಡುಗಿಯರಿಗೆ ಸ್ಮಾರ್ಟ್ ಫೋನ್

🌐 Belgaum News :

ಲಕ್ನೋ :  ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.40ರಷ್ಟು ಟಿಕೆಟ್ ನೀಡುವುದಾಗಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭರವಸೆ ನೀಡಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಸ್ಥಿತ್ವಕ್ಕೆ ಬಂದ್ರೇ, ಎಲ್ಲಾ 12ನೇ ತರಗತಿ ಪಾಸ್ ಹುಡುಗಿಯರಿಗೆ ಸ್ಮಾರ್ಟ್ ಫೋನ್  ನೀಡಲಾಗುವುದು. ಎಲ್ಲಾ ಪದವೀಧರ ಹುಡುಗಿಯರಿಗೆ ಎಲೆಕ್ಟ್ರಾನಿಕ್ ಸ್ಕೂಟಿ ನೀಡಲಾಗುತ್ತದೆ ಎಂದು ಘೋಷಿಸಿದ್ದಾರೆ.

ಈ ಕುರಿತಂತೆ ಟ್ವಿಟ್ ಮಾಡಿರುವಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ನಿನ್ನೆ ನಾನು ಕೆಲವು ವಿದ್ಯಾರ್ಥಿನಿಯರನ್ನು ಭೇಟಿಯಾದೆ. ಅವರು ತಮ್ಮ ಅಧ್ಯಯನಕ್ಕೆ ಸ್ಮಾರ್ಟ್ ಫೋನ್ ಗಳ ಅಗತ್ಯವಿದೆ ಎಂದು ಹೇಳಿದರು.

ಇಂದು ಉತ್ತರ ಪ್ರದೇಶ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಸಮ್ಮತಿಯೊಂದಿಗೆ, ಅಧಿಕಾರಕ್ಕೆ ಬಂದ ನಂತರ ಪದವಿ ಹುಡುಗಿಯರಿಗೆ ಎಲೆಕ್ಟ್ರಿಕ್ ಸ್ಕೂಟಿ, ಇಂಟರ್ ಪಾಸ್ ಹುಡುಗಿಯರಿಗೆ ಸ್ಮಾರ್ಟ್ ಫೋನ್ ಒದಗಿಸಲು ನಿರ್ಧರಿಸಿರುವುದು ನನಗೆ ಸಂತೋಷ ತಂದಿದೆ ಎಂದು ಹೇಳಿದ್ದಾರೆ./////

📱 Read Top News, Belgaum News Updates, Belagavi News in Kannada, Latest News on News Belgaum