Belagavi News In Kannada | News Belgaum

ಮಲೆ ಮಹದೇಶ್ವರ ಬೆಟ್ಟದಲ್ಲಿ ಭೂ ಕುಸಿತ; ಸಂಚಾರ ಅಸ್ತವ್ಯಸ್ತ

🌐 Belgaum News :

ಚಾಮರಾಜನಗರ: ಮೈಸೂರಿನ ಚಾಮುಂಡಿ ಬೆಟ್ಟದ ಬಳಿಕ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿ ಕೆಲ ಗಂಟೆಗಳ ಕಾಲ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಕಳೆದ ಒಂದು ವಾರದಿಂದ ಭರ್ಜರಿ ಮಳೆಯಾಗುತ್ತಿದ್ದು, ಮಲೆಮಹದೇಶ್ವರ ಬೆಟ್ಟದಿಂದ ತಮಿಳುನಾಡಿಗೆ ಹೋಗುವ ಪಾಲಾರ್ ಮಾರ್ಗದಲ್ಲಿ ಭೂಕುಸಿತ ಉಂಟಾಗಿ ಭತ್ತ ಕಟಾವು ಯಂತ್ರ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜೆಸಿಬಿ ಸಹಾಯದಿಂದ ಕುಸಿತ ಉಂಟಾದ ಸ್ಥಳದಲ್ಲಿ ಕಲ್ಲು, ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

2019ರಲ್ಲೂ ಜೋರು ಮಳೆಯಿಂದಾಗಿ ಸುಮಾರು 10 ಕಡೆ ಭೂ ಕುಸಿತ ಉಂಟಾಗಿ ಆತಂಕ ಸೃಷ್ಟಿಯಾಗಿತ್ತು. ಸದ್ಯ ಮಳೆಯಿಂದಾಗಿ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಕೆಲ ಕಾಮಗಾರಿಗೂ ಅಡಚಣೆ ಉಂಟಾಗಿದೆ.//////

📱 Read Top News, Belgaum News Updates, Belagavi News in Kannada, Latest News on News Belgaum