Belagavi News In Kannada | News Belgaum

ಬಳ್ಳಿಗಾವೆಯ ಐತಿಹಾಸಿಕ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

🌐 Belgaum News :

ಶಿಕಾರಿಪುರ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಯವರು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಐತಿಹಾಸಿಕ ಸ್ಥಳವಾದ ಬಳ್ಳಿಗಾವೆ ಗ್ರಾಮದ ಕೇದಾರನಾಥ ದೇವಾಲಯಕ್ಕೆ ಇಂದು ಭೇಟಿ ನೀಡಿದರು.

ಚಾಲುಕ್ಯರ ಹಾಗೂ ಹೊಯ್ಸಳರ ಕಾಲದ ಕೇದಾರನಾಥ ದೇವಾಲಯ ಮತ್ತು ಆವರಣದಲ್ಲಿರುವ ಪ್ರಾಚ್ಯವಸ್ತು ಇಲಾಖೆಯ ವಸ್ತು ಸಂಗ್ರಹಾಲಯಕ್ಕೆ ಅವರು ಭೇಟಿ ನೀಡಿ, ಕಲಾಕೃತಿಗಳು ಹಾಗೂ ಶಿಲ್ಪಗಳನ್ನು ವೀಕ್ಷಣೆ ಮಾಡಿದರು.

ಕಳೆದ ಕೆಲ ದಿನಗಳಿಂದ ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆ ಪ್ರಚಾರದಲ್ಲಿ ತೊಡಗಿರುವ ಅವರು ಇಂದು ಬಿಡುವು ಮಾಡಿಕೊಂಡು, ಬಳ್ಳಿಗಾವೆಯ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

ಐತಿಹಾಸಿಕ ಸ್ಥಳ:

ಬಳ್ಳಿಗಾವೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನಲ್ಲಿರುವ ಒಂದು ಐತಿಹಾಸಿಕ ಸ್ಥಳ. ಇದನ್ನು ದಕ್ಷಿಣದ ಕೇದಾರನಾಥವೆಂದು ಕರೆಯಲಾಗುತ್ತದೆ. ಶಿಕಾರಿಪುರ ಪಟ್ಟಣದಿಂದ ಸುಮಾರು 21 ಕಿ.ಮೀ ದೂರವಿರುವ ಈ ಪುಟ್ಟ ಹಳ್ಳಿ ಆಲ್ಲಮಪ್ರಭುಗಳ ಜನ್ಮಸ್ಥಳವೂ ಹೌದು. ಹೊಯ್ಸಳರ ವಿಷ್ಣುವರ್ಧನನ ರಾಣಿ ಶಾಂತಲಾದೇವಿಯ ತವರುಮನೆಯೂ ಆಗಿದೆ. ಹೊಯ್ಸಳ ಶೈಲಿಯ ಕೇದಾರೆಶ್ವರ ದೇವಾಲಯದ ನಿರ್ಮಾಣ ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಪ್ರಾರಂಭವಾಗಿ ಹೊಯ್ಸಳರ ಕಾಲದಲ್ಲಿ ಪೂರ್ಣಗೊಂಡಿತು.

ಬಳ್ಳಿಗಾವೆ ಕಲ್ಯಾಣಿ ಚಾಲುಕ್ಯರ ದಕ್ಷಿಣ ಭಾಗದ ನಾಡಿನ ರಾಜಧಾನಿಯಾಗಿತ್ತು. ಶಿರಾಳಕೊಪ್ಪದಿಂದ 3 ಕಿಮಿ ದೂರ ಇರುವ ಈ ಪುಟ್ಟ ಊರು ಚಾಲುಕ್ಯ ಮತ್ತು ಹೊಯ್ಸಳ ಕಾಲದ ಹಲವು ದೇವಾಲಯಗಳನ್ನು ಹೊಂದಿದೆ. ಕಲ್ಯಾಣಿ ಚಾಲುಕ್ಯರ ಕಾಲದಲ್ಲಿ ಪ್ರಮುಖ ಸಾಂಸ್ಕೃತಿಕ ಕೇಂದ್ರವಾಗಿತ್ತು.//////

📱 Read Top News, Belgaum News Updates, Belagavi News in Kannada, Latest News on News Belgaum