Belagavi News In Kannada | News Belgaum

ಸಾಹಿತಿ ರಂಗಾರೆಡ್ಡಿ ಕೋಡಿರಾಂಪುರ ನಿಧನ

🌐 Belgaum News :

ಚಿಕ್ಕಬಳ್ಳಾಪುರ : ಸಾಹಿತಿ ರಂಗಾರೆಡ್ಡಿ ಕೋಡಿರಾಂಪುರ ಬೆಂಗಳೂರಿನ ತಮ್ಮ ನಿವಾಸದಲ್ಲಿ ಭಾನುವಾರ ಬೆಳಗ್ಗೆ ನಿಧನರಾಗಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕು ಕೋಡಿರಾಂಪುರ ನಿವಾಸಿಯಾಗಿದ್ದ ರಂಗಾರೆಡ್ಡಿ ಅವರು ಗೌರಿಬಿದನೂರು ನ್ಯಾಷನಲ್ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿದ್ದರು. ನಿವೃತ್ತಿ ನಂತರ ಬೆಂಗಳೂರಿನಲ್ಲಿ ನೆಲೆಸಿದ್ದರು.

ಜನಪದ ಸಂಸ್ಕೃತಿ, ಸಾಲು ಹೊಂಗೆಯ ತಂಪು, ಬಂಡಾಯ ಜನಪದ, ನನ್ನೂರ ಹಾಡು ಸೇರಿದಂತೆ ಹಲವು ಕೃತಿಗಳನ್ನು ರಚಿಸಿದ್ದರು‌. ಚಿಕ್ಕಬಳ್ಳಾಪುರದಲ್ಲಿ 2015ರಲ್ಲಿ ನಡೆದ ಚಿಕ್ಕಬಳ್ಳಾಪುರ ಜಿಲ್ಲಾ ಐದನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಯಕ್ಷಗಾನ ಅಕಾಡಮಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಜಾನಪದ ಅಕಾಡಮಿ ಸದಸ್ಯರಾಗಿಯೂ ಕೆಲಸ ಮಾಡಿದ್ದಾರೆ. ಮೃತರು ಪತ್ನಿ, ಇಬ್ಬರು ಪುತ್ರರ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.//////

📱 Read Top News, Belgaum News Updates, Belagavi News in Kannada, Latest News on News Belgaum