Belagavi News In Kannada | News Belgaum

ಸತೀಶ್ ಜಾರಕಿಹೊಳಿ ಪೌಂಡೇಶನ್ ದಿಂದ ಸ್ವಚ್ಛತಾ ಅಭಿಯಾನ

🌐 Belgaum News :

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರ ಪೌಂಡೇಶನ್ ದಿಂದ ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವನ್ನು ಯುವ ನಾಯಕ ರಾಹುಲ್ ಜಾರಕಿಹೊಳಿ ಅವರ ಮಾರ್ಗದರ್ಶನದಂತೆ ಭಾನುವಾರ ನಡೆಸಲಾಯಿತು.

ಪ್ರತಿ ಭಾನುವಾರ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುವುದು, ಎರಡನೇ ವಾರ ಬಸ್ ನಿಲ್ದಾಣವನ್ನು ಆಯ್ಕೆ ಮಾಡಿ ಸ್ವಚ್ಛತೆಗೊಳ್ಳಿಸಲಾಗಿದೆ. ಪ್ರತಿದಿನ ಸಾವಿರಾರು ಪ್ರಯಾಣಿಕರು ಬೇರೆ ಬೇರೆ ಸ್ಥಳಗಳಿಗೆ ತೆರಳುವ ಬಸ್ ನಿಲ್ದಾಣ ಸ್ವಚ್ಛತೆ ಸಮಸ್ಯೆಯಿಂದ ಕೂಡಿತ್ತು. ಹಾಗಾಗಿ ಇಂದು ಬಸ್ ನಿಲ್ದಾಣದ ಸ್ವಚ್ಚತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮುಂದಿನ ವಾರವೂ ಶಾಲೆಗಳು ಹಾಗೂ ನಗರದಲ್ಲಿನ ಸಮಸ್ಯೆಗಳನ್ನು ಗುರುತಿಸಿ ಸ್ವಚ್ಛತೆ ಮಾಡಲಾಗುವುದು ಎಂದು ಸದಸ್ಯರು ತಿಳಿಸಿದರು.

ಬಸ್ ನಿಲ್ದಾಣದ ಮೇಲ್ವಿಚಾರಕರಿಗೆ ಸ್ವಚ್ಛತೆ ಕಾಪಾಡಿಕೊಳ್ಳಿ. ತಕ್ಷಣವೇ ನಿಲ್ದಾಣದ ಆವರಣದಲ್ಲಿ ಸಿ.ಸಿ.ಕ್ಯಾಮರಾ ಅಳವಡಿಸಿ, ಕಿಡಿಗೇಡಿಗಳ ಉಪಟಳ ತಪ್ಪಿಸಬೇಕು. ಗುಟಕಾ ತಿಂದು ಉಗುಳಿದವರ ವಿರುದ್ದ ದಂಡ ಪಾವತಿಸಿ, ಸೂಕ್ತ ಕ್ರಮಕೊಳ್ಳಬೇಕು.  ಶೌಚಾಲಯಗಳಲ್ಲಿ ಅಸ್ವಚ್ಛತೆ ತಾಂಡವವಾಡುತ್ತಿದೆ. ಇವುಗಳ ಸ್ವಚ್ಛತೆಗಾಗಿ ಸಿಬ್ಬಂದಿ ನೇಮಕ ಮಾಡಿ, ಸಾರ್ವಜನಿಕರಿಗೆ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದರು. ನೂರಾರು ಯುವಕರ ಸ್ವಚ್ಛತಾ ಕಾರ್ಯಕ್ಕೆ ನಗರದ ಜನರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.//////

📱 Read Top News, Belgaum News Updates, Belagavi News in Kannada, Latest News on News Belgaum