Belagavi News In Kannada | News Belgaum

ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ ರಾಹುಲ್ ದ್ರಾವಿಡ್

🌐 Belgaum News :

 ಮುಂಬೈ : ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ಆಗಿ ಕನ್ನಡಿಗ ರಾಹುಲ್ ದ್ರಾವಿಡ್ ಆಯ್ಕೆ ಬಹುತೇಕ ಖಚಿತಗೊಂಡಿದೆ. ಹೆಡ್ ಕೋಚ್ ಸ್ಥಾನಕ್ಕಾಗಿ ರಾಹುಲ್ ದ್ರಾವಿಡ್ ಬಿಸಿಸಿಐಗೆ ಅರ್ಜಿ ಸಲ್ಲಿಸಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಮುಖ್ಯಸ್ಥರಾಗಿರುವ ರಾಹುಲ್ ದ್ರಾವಿಡ್, ಭಾರತ ಕ್ರಿಕೆಟ್ ತಂಡದ ಹೆಡ್ ಕೋಚ್ ಸ್ಥಾನಕ್ಕೆ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಮತ್ತು ಕಾರ್ಯದರ್ಶಿ ಜಯ್ ಶಾ ಅವರ ಏಕೈಕ ಆಯ್ಕೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅರ್ಜಿ ಸಲ್ಲಿಸಲು ಕೊನೆಯ ದಿನವಾದ ಇಂದು ರಾಹುಲ್ ಔಪಚಾರಿಕವಾಗಿ ಹೆಡ್ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಎನ್‌ಸಿಎಯ ಬೌಲಿಂಗ್ ಕೋಚ್ ಪಾರಸ್ ಮತ್ತು ಫೀಲ್ಡಿಂಗ್ ಕೋಚ್ ಅಭಯ್ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಅವರ ಅರ್ಜಿ ಕೇವಲ ಔಪಚಾರಿಕವಾಗಿದೆ’ಎಂದು ಬಿಸಿಸಿಐನ ಹಿರಿಯ ಅಧಿಕಾರಿ ಮಂಗಳವಾರ ಪಿಟಿಐಗೆ ತಿಳಿಸಿದರು.

ರಾಹುಲ್ ದ್ರಾವಿಡ್ ಅವರು ಭಾರತ ತಂಡದ ಹೆಡ್ ಕೋಚ್ ಆದ ಬಳಿಕ ವಿವಿಎಸ್ ಲಕ್ಷ್ಮಣ್ ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಚುಕ್ಕಾಣಿ ಹಿಡಿಯುವ ಸಾಧ್ಯತೆ ಇದೆ.////

📱 Read Top News, Belgaum News Updates, Belagavi News in Kannada, Latest News on News Belgaum