Belagavi News In Kannada | News Belgaum

ರಾಜ್ಯದಲ್ಲಿ ಸಮಾಜವನ್ನು ಕಟ್ಟಿ ಬೆಳೆಸಿದವರು ನಾವು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

🌐 Belgaum News :

ಹಾನಗಲ್: ರಾಜ್ಯದಲ್ಲಿ ನಮ್ಮ ಸಮಾಜವನ್ನು ಕಟ್ಟಿ ಬೆಳೆಸಿದವರು ನಾವು. ಅವರು (ರಮೇಶ ಜಾರಕಿಹೊಳಿ) ಅವರ ಕ್ಷೇತ್ರಕ್ಕೆ ಸೀಮಿತವಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಮತಕ್ಷೇತ್ರದ ವಿವಿಧೆಡೆ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಅವರು ಮಲಗುಂದ ಗ್ರಾಮದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು.

“ಮಾಜಿ ಸಚಿವ ರಮೇಶ ಜಾರಕಿಹೊಳಿ ಹಾಗೂ ತಾವು ಇಬ್ಬರು ಕೂಡ ಕ್ಷೇತ್ರದಲ್ಲಿ ಪ್ರಚಾರ ನಡೆಸುತ್ತಿದ್ದೀರಿ. ಸಮಾಜದ ಜನರು ಯಾರ ಪರವಾಗಿದ್ದಾರೆ?” ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿ, ಪಕ್ಷದ ಆಧಾರದ ಮೇಲೆ ಸಮಾಜದ ಮುಖಂಡರು ಇಬ್ಬರೊಂದಿಗೂ ಇರುತ್ತಾರೆ. ಆದರೆ, ರಾಜ್ಯದಲ್ಲಿ ಸಮಾಜವನ್ನು ಕಟ್ಟಿಬೆಳೆಸಿದ್ದು ನಾವು ಎಂದರು.

ಸಿಂದಗಿಯಲ್ಲೂ ಕೂಡ ಪ್ರಚಾರ ಮಾಡಿ ಬಂದಿದ್ದೇನೆ. ಆದರೆ, ಹಾನಗಲ್ ಕ್ಷೇತ್ರದಲ್ಲಿ ನಮ್ಮ ಅವಶ್ಯಕತೆ ಹೆಚ್ಚು ಇರುವುದನ್ನು ಮುಖಂಡರು ತಿಳಿಸಿದ್ದರಿಂದ ಇಲ್ಲಿ 7 ರಿಂದ 8 ರಿಂದ ದಿನಗಳ ಕಾಲ ಪ್ರಚಾರ ಕೈಗೊಂಡಿದ್ದೇನೆ. ಪಕ್ಷದ ವರಿಷ್ಠರು ವಹಿಸಿರುವ ಜವಾಬ್ದಾರಿಯನ್ನು ಸಾಮಾನ್ಯ ಕಾರ್ಯಕರ್ತನಾಗಿ ನಾನು ಮಾಡುತ್ತಿದ್ದೇನೆ. ಬಿಜೆಪಿಯವರು ಅವರ ಡ್ಯೂಟಿ ಅವರು ಮಾಡುತ್ತಿದ್ದಾರೆ. ನಾವು ನಮ್ಮ ಡ್ಯೂಟಿ ಮಾಡುತ್ತಿದ್ದೇವೆ ಎಂದು ಪ್ರತಿಕ್ರಿಯೆ ನೀಡಿದರು.

ಶ್ರೀನಿವಾಸ್ ಮಾನೆಯವರ ಜನಸೇವೆಯೇ ಅವರ ಗೆಲುವಿಗೆ ಶ್ರೀರಕ್ಷೆಯಾಗಲಿದೆ. ಮಾನೆಯವರು ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಮತದಾರರು ಅವರ ಕೈಹಿಡಿಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.//////

📱 Read Top News, Belgaum News Updates, Belagavi News in Kannada, Latest News on News Belgaum