Belagavi News In Kannada | News Belgaum

“ಕನ್ನಡಕ್ಕಾಗಿ ನಾವು ಅಭಿಯಾನ” ದ ಯಶಸ್ಸಿಗೆ ಮನವಿ

🌐 Belgaum News :

ಮೂಡಲಗಿ: ಸರ್ಕಾರದ ಆದೇಶದ ಅನ್ವಯ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅ.28ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಏಕಕಾಲಕ್ಕೆ “ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ, ಹುಟ್ಟಿದರೇ ಕನ್ನಡ ನಾಡಿನಲ್ಲೇ ಹುಟ್ಟಬೇಕು” ಈ ಗೀತೆಗಳನ್ನು ಏಕ ಕಾಲಕ್ಕೆ ಹಾಡಲು ಪಟ್ಟಣದ ಎಸ್.ಎಸ್. ಆರ್ ಕಾಲೇಜು ಆವರಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಹಾಗೂ ತಾಲೂಕಿನ ಪತ್ರಿಯೊಂದು ಗ್ರಾಮದಲ್ಲಿ ಈ ಕಾರ್ಯಾಕ್ರಮವನ್ನು ನೇರವೇರಿಸಲು ಗ್ರಾಪಂ ಪಿಡಿಓ ಹಾಗೂ ಗ್ರಾಮಲೆಕ್ಕಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಹಶೀಲ್ದಾರ ಡಿ.ಜಿ. ಮಹಾತ್ ತಿಳಿಸಿದ್ದಾರೆ.

ಪಟ್ಟಣದ ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು, ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳು ಸರಿಯಾಗಿ 10: 30ಕ್ಕೆ ಕಾಲೇಜು ಆವರಣದಲ್ಲಿ ಸೇರಬೇಕೆಂದು ಹಾಗೂ ಗೀತೆಗಳನ್ನು ಪ್ರಸ್ತುತಪಡಿಸಿದ ನಂತರ ಸರ್ಕಾರ ಆದೇಶದಂತೆ ಅನ್ಯಭಾಷೆಯನ್ನು ಬಳಸದೇ ಕನ್ನಡದಲ್ಲಿ ನಾಲ್ಕು ನಿಮಿಷ ಮಾತನಾಡುವ ಸ್ವರ್ಧೆಯನ್ನು ಹಮ್ಮಿಕೊಳ್ಳಲಾಗಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡ ಸ್ಪರ್ಧಾಳುಗಳಿಗೆ ಗೌರವಧನ ಹಾಗೂ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಸ್ಪರ್ಧೆಯಲ್ಲಿ ತಾಲೂಕಿನ ಸಾರ್ವಜನಿಕರು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಸ್ಪರ್ಧೆಗೆ ಹೆಸರು ನೋಂದಾಯಿಸಲು ಬಿಇಓ ಕಾರ್ಯಾಲಯದಲ್ಲಿ ನೋಂದಾಯಿಸಿ, ಇಲ್ಲವಾದರೇ ಕಾರ್ಯಕ್ರಮದ ಸ್ಥಳದಲ್ಲಿ ನೋಂದಾಯಿಸಲು ಅವಕಾಶ ಮಾಡಿಕೊಡಲಾಗುವುದು ಎಂದು ತಹಶೀಲ್ದಾರ ಡಿ.ಜಿ. ಮಹಾತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.//////

📱 Read Top News, Belgaum News Updates, Belagavi News in Kannada, Latest News on News Belgaum