Belagavi News In Kannada | News Belgaum

ನಟ ಪುನೀತ್ ಗೆ ಬೆಳಗಾವಿ ಕನ್ನಡ ಸಂಘಟನೆಗಳಿಂದ ಶ್ರದ್ಧಾಂಜಲಿ :ಸರಳ ರಾಜ್ಯೋತ್ಸವಕ್ಕೆ ನಿರ್ಧಾರ

🌐 Belgaum News :

ಬೆಳಗಾವಿ : ಅಕಾಲಿಕ ನಿಧನ ಹೊಂದಿದ ಪವರ ಸ್ಟಾರ್ , ನಟ ಪುನೀತ ರಾಜಕುಮಾರ ಅವರಿಗೆ ಬೆಳಗಾವಿಯ ವಿವಿಧ ಕನ್ನಡ ಪರ ಸಂಘಟನೆಗಳು ಶುಕ್ರವಾರ ಸಂಜೆ ಕಿತ್ತೂರು ಚನ್ನಮ್ಮ ವೃತ್ತದಲ್ಲಿ ಶ್ರದ್ಧಾಂಜಲಿ  ಸಲ್ಲಿಸಿದರು.

ಇದಕ್ಕೂ ಮೊದಲು ಕನ್ನಡ ಸಾಹಿತ್ಯ ಭವನದಲ್ಲಿ ಕನ್ನಡ ಸಂಘಟನೆಗಳ ಮುಖಂಡರು ಸಭೆ ನಡೆಸಿ, ಈ ಬಾರಿಯ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸುವ ನಿರ್ಧಾರವನ್ನು ಕೈಬಿಡಲು ತೀರ್ಮಾನಿಸಲಾಯಿತು.

ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲು ಸಂಘಟನೆಗಳು ಶ್ರದ್ಧಾಂಜಲಿ ಸಭೆಯಲ್ಲಿ ನಿರ್ಧರಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ, ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ, ಹಿರಿಯ ಪತ್ರಕರ್ತ ಮೆಹಬೂಬ್ ಮಕಾಂದಾರ, ಕಸ್ತೂರಿ ಬಾವಿ ಸೇರಿದಂತೆ ಕಾರ್ಯಕರ್ತರು ಇದ್ದರು.//////

📱 Read Top News, Belgaum News Updates, Belagavi News in Kannada, Latest News on News Belgaum