Belagavi News In Kannada | News Belgaum

ಡ್ರಗ್ಸ್ ಪ್ರಕರಣ: ನಟ ಶಾರುಖ್ ಖಾನ್ ಪುತ್ರ ಆರ್ಯನ್​ ಖಾನ್ ಗೆ ಬಿಡುಗಡೆ

🌐 Belgaum News :

ಮುಂಬೈ: ಡ್ರಗ್ಸ್ ಪ್ರಕರಣದಲ್ಲಿ  ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್​ ಖಾನ್​ ಅವರನ್ನು  ಜಾಮೀನಿನ ಮೇಲೆ ಶನಿವಾರ ಬಿಡುಗಡೆ ಮಾಡಲಾಗಿದೆ.  ಮಗನನ್ನು  ಕರೆದೊಯ್ಯಲು  ತಂದೆ  ಶಾರುಖ್ ಖಾನ್  ಜೈಲಿಗೆ ಆಗಮಿಸಿದ್ದಾರೆ.

ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್​ ಖಾನ್​ ಅವರಿಗೆ ಗುರುವಾರ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದರೂ ಶುಕ್ರವಾರ ಬಿಡುಗಡೆ ಭಾಗ್ಯ ಸಿಕ್ಕಿರಲಿಲ್ಲ. ಹೀಗಾಗಿ ಆರ್ಯನ್ ಖಾನ್ ಮತ್ತೊಂದು ರಾತ್ರಿ ಜೈಲಿನಲ್ಲಿಯೇ ಕಳೆಯಬೇಕಾಗಿಯಿತು.

ಆರ್ಥರ್ ರೋಡ್ ಜೈಲಿನ ಅಧಿಕಾರಿಗಳ ಪ್ರಕಾರ, ಆರ್ಯನ್ ಖಾನ್ ಅವರನ್ನು ಶನಿವಾರ ಬೆಳಗ್ಗೆ ಜೈಲಿನಿಂದ ಬಿಡುಗಡೆ ಮಾಡಲಾಗುತ್ತದೆ.//////

📱 Read Top News, Belgaum News Updates, Belagavi News in Kannada, Latest News on News Belgaum