Belagavi News In Kannada | News Belgaum

ಕೋವಿಡ್ -19 ಕಣ್ಗಾವಲು ನಿಯಂತ್ರಣ ಮತ್ತು ಜಾಗ್ರತೆ ಮಾರ್ಗಸೂಚಿ ವಿಸ್ತರಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ

🌐 Belgaum News :

ಬೆಳಗಾವಿ, ಅ.30 : ಕೋವಿಡ್-19 ಕಣ್ಗಾವಲು ನಿಯಂತ್ರಣ ಮತ್ತು ಜಾಗ್ರತೆ ಮಾರ್ಗಸೂಚಿಗಳನ್ನು ನವೆಂಬರ್ 10 ರ ಬೆಳಿಗ್ಗೆ 6 ಗಂಟೆಯವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ.

ಪ್ರಸ್ತುತ ರಾಜ್ಯದಲ್ಲಿ ದಾಖಲಾಗುತ್ತಿರುವ ದಿನನಿತ್ಯದ ಕೋವಿಡ್-19 ಧನಾತ್ಮಕ ಪ್ರಕರಣಗಳು ಮತ್ತು ಒಟ್ಟಾರೆ ಕೋವಿಡ್-19 ಸೋಂಕಿತರ ಸಂಖ್ಯೆಯು ನಿರಂತರವಾಗಿ ಕಡಿಮೆಯಾಗುತ್ತಿದೆ. ಆದಾಗ್ಯೂ ಕೋವಿಡ್-19 ವೈರಾಣು ಸೋಂಕು ವ್ಯಾಪಕವಾಗಿ ಹರಡುವುದನ್ನು ತಡೆಯಲು ಪರೀಕ್ಷೆ-ಪತ್ತೆ-ಚಿಕಿತ್ಸೆ ಲಸಿಕಾಕರಣ ಮತ್ತು ಕೋವಿಡ್-19 ಸಮುಚಿತ ವರ್ತನೆಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಮೊದಲಾದ ಐದು ತಂತ್ರಗಳ ಮೇಲೆ ನಿರಂತರವಾಗಿ ಗಮನಹರಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

 

ಮಹಾರಾಷ್ಟ್ರ ರಾಜ್ಯಕ್ಕೆ ಹೊಂದಿಕೊಂಡಿರುವ ಗಡಿ ಜಿಲ್ಲೆ ಬೆಳಗಾವಿಯ ಚೆಕ್ ಪೆÇೀಸ್ಟಗಳಲ್ಲಿ ಹೆಚ್ಚಿನ ಕಣ್ಣಾವಲು ಇರಿಸುವುದನ್ನು ಮುಂದುವರೆಸಲು ಆದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಸರ್ಕಾರದ ಆದೇಶದಲ್ಲಿ ವಿವರಿಸಿದ ಮಾರ್ಗಸೂಚಿಗಳನ್ನು ಸಾರ್ವಜನಿಕರು, ವಿವಿಧ ಇಲಾಖೆಗಳ ಮುಖ್ಯಸ್ಥರು ಹಾಗೂ ಖಾಸಗಿ ಸಂಘ-ಸಂಸ್ಥೆಗಳು ಶಿಸ್ತುಬದ್ಧವಾಗಿ ಹಾಗೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು.

ಒಂದು ವೇಳೆ ಓದಲಾದ ಆದೇಶದಡಿ ವಿಧಿಸಿದ ಸೂಚನೆಗಳನ್ನು ಪಾಲಿಸದೇ ಇದ್ದಲ್ಲಿ ಅಥವಾ ಯಾವುದೇ ಕ್ರಮಗಳನ್ನು ಅನುಷ್ಠಾನಗೊಳಿಸದೇ ಇದ್ದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಸೆಕ್ಷನ್ 51 ರಿಂದ 60 ರ ಉಪಬಂಧಗಳು ಅಲ್ಲದೇ, ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರಡಿಯಲ್ಲಿನ ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಹಾಗೂ ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಜಿ.ಹಿರೇಮಠ ಅವರು ಎಚ್ಚರಿಕೆ ನೀಡಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum