Belagavi News In Kannada | News Belgaum

೬೬ ನೇ ಕರ್ನಾಟಕ ರಾಜ್ಯೋತ್ಸವ: ಕನ್ನಡ ಹೋರಾಟಗಾರರು, ಪತ್ರಕರ್ತರಿಗೆ ಸನ್ಮಾನ

🌐 Belgaum News :

 

ಬೆಳಗಾವಿ, ನ.೧ಕೋವಿಡ್ ಹಿನ್ನೆಲೆಯಲ್ಲಿ ೬೬ ನೇ ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ವತಿಯಿಂದ ನಗರದ ಸಿಪಿಎಡ್ ಮೈದಾನದಲ್ಲಿ ಸೋಮವಾರ (ನ.೧) ರಾಜ್ಯೋತ್ಸವ ಸಮಾರಂಭ ಆಯೋಜಿಸಲಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವರೂ ಅಗಿರುವ ಜಲಸಂಪನ್ಮೂಲ (ಬೃಹತ್ ಮತ್ತು ಮಧ್ಯಮ) ಇಲಾಖೆಯ ಸಚಿವರಾದ ಗೋವಿಂದ ಕಾರಜೋಳ ಅವರು‌ ರಾಷ್ಟ್ರಧ್ವಜಾರೊಃಣ ನೆರವೇರಿಸಿದರು.

ತಾಯಿ ಭುವನೇಶ್ವರಿದೇವಿಗೆ ಪೂಜೆ ಸಲ್ಲಿಸಿ ಕವಾಯತು ತಂಡಗಳಿಂದ ಗೌರವ ವಂದನೆ ಸ್ವೀಕರಿಸಿದ ಬಳಿಕ ಸಂದೇಶವನ್ನು ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು, ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಕೋವಿಡ್ ನಂತರ ಎದುರಾಗಿರುವ ಆರ್ಥಿಕ ಹಾಗೂ ಸಾಮಾಜಿಕ ಸವಾಲುಗಳ ಮಧ್ಯೆಯೂ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸುವುದರ ಜತೆಗೆ ಪ್ರವಾಹ ಸಂತ್ರಸ್ತರು, ರೈತರು, ಕೂಲಿಕಾರ್ಮಿಕರು ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಜನರಿಗೆ ಸುಂದರ ಬದುಕು ಕಟ್ಟಿಕೊಡುವ ದೃಢಸಂಕಲ್ಪ ಮಾಡಿದೆ ಎಂದು ಹೇಳಿದರು.

ಕನ್ನಡ ಹೋರಾಟಗಾರರು-ಪತ್ರಕರ್ತರಿಗೆ ಸನ್ಮಾನ:

ಕನ್ನಡ ನಾಡು-ನುಡಿಗಾಗಿ ಶ್ರಮಿಸುತ್ತಿರುವ ಕನ್ನಡ ಹೋರಾಟಗಾರರು-ಪತ್ರಕರ್ತರನ್ನು ರಾಜ್ಯೋತ್ಸವ ಸಂದರ್ಭದಲ್ಲಿ ಜಿಲ್ಲಾಡಳಿತ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.

ಕನ್ನಡ ಹೋರಾಟಗಾರರಾದ ರಮೇಶ ಸೊಂಟಕ್ಕಿ, ಪದ್ಮರಾಜ ವೈಜನ್ನವರ, ತಿಪ್ಪೇಸ್ವಾಮಿ, ಗಣೇಶ ರೋಖಡೆ, ಬಾಳು ಉದಗಟ್ಟಿ ಹಾಗೂ ಶಿವನಗೌಡ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಪತ್ರಕರ್ತರಾದ ಕನ್ನಡಪ್ರಭ ಹಿರಿಯ ವರದಿಗಾರ ಶ್ರೀಶೈಲ ಮಠದ, ನ್ಯೂಸ್ ಫರ್ಸ್ಟ್ ವರದಿಗಾರ ಶ್ರೀಕಾಂತ ಕುಬಕಡ್ಡಿ, ಹಳ್ಳಿಯ ಸಂದೇಶ ಪತ್ರಿಕೆ ಸಂಪಾದಕ ಕುಂತಿನಾಥ ಕಲಮನಿ, ಇನ್-ಬೆಳಗಾವಿ ನ್ಯೂಸ್ ಸಂಪಾದಕ ರಾಜಶೇಖರ ಪಾಟೀಲ, ಸಂಯುಕ್ತ ಕರ್ನಾಟಕ ಹಿರಿಯ ವರದಿಗಾರ ವಿಲಾಸ್ ಜೋಶಿ, ಕೆ.ಎಲ್.ಇ. ವೇಣುಧ್ವನಿಯ ಸುನೀತಾ ದೇಸಾಯಿ ಹಾಗೂ ಮಹಾಂತೇಶ ಗದ್ದಿಹಳ್ಳಿಶೆಟ್ಟಿ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಸನ್ಮಾನಿಸಿ, ಗೌರವಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಯಾದವೇಂದ್ರ ಪೂಜಾರಿ(ಸಂಗೀತ), ಹೊಳೆಪ್ಪ ನೇಸರಗಿ(ಶೌರ್ಯ), ಬ್ರಹ್ಮಾನಂದ ಬಸರಗಿ(ಚಿತ್ರಕಲೆ), ಫಿರೋಜ್ ಗುಲಾಬ್ ಚಾಹುಸ್(ಪರಿಸರ), ಮಲಪ್ರಭಾ ಜಾಧವ್ (ಕ್ರೀಡೆ), ಚೆನ್ನಬಸಯ್ಯ ಕಠಾಪುರಿಮಠ(ಸಮಾಜ ಸೇವೆ), ಡಾ.ರಾಮಕೃಷ್ಣ ಮರಾಠೆ(ಸಾಹಿತ್ಯ), ಶಿವಲಿಂಗ ಕರವಿನಕೊಪ್ಪ(ಬಯಲಾಟ), ಆಶಾ ಕಡಪಟ್ಟಿ(ಸಾಹಿತಿ), ಸುನೀಲ್ ನೇಗಿನಹಾಳ(ಸಮಾಜ ಸೇವೆ), ಕಿರಣ ಮಾಳನ್ನವರ(ಸಾಮಾಜಿಕ ಜಾಲತಾಣ) ಹಾಗೂ ನಾಗರಾಜ ಮುರಗೋಡ(ಸಾಹಿತ್ಯ) ಅವರನ್ನು ಸನ್ಮಾನಿಸಲಾಯಿತು.

ಸಂಸದರಾದ ಮಂಗಲ ಅಂಗಡಿ, ಶಾಸಕರಾದ‌ ಅನಿಲ್ ಬೆನಕೆ, ಅಭಯ್ ಪಾಟೀಲ, ಬುಡಾ‌ ಅಧ್ಯಕ್ಷ ಸಂಜಯ ಬೆಳಗಾಂವಕರ, ಪ್ರಾದೇಶಿಕ ಆಯುಕ್ತರಾದ ಆಮ್ಲಾನ್ ಆದಿತ್ಯ ಬಿಸ್ವಾಸ್, ಉತ್ತರ ವಕಯ ಐಜಿಪಿ ಎನ್.ಸತೀಶಕುಮಾರ್, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಸಿಇಒ ದರ್ಶನ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಮತ್ತಿತರರು ಉಪಸ್ಥಿತರಿದ್ದರು.
ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಸಚಿವ ಗೋವಿಂದ ಕಾರಜೋಳ ಅವರ ರಾಜ್ಯೋತ್ಸವ ಸಂದೇಶ:

ಬೆಳಗಾವಿ ಜಿಲ್ಲೆಯ ಮಹಾಜನಗಳೇ,
ಎಲ್ಲರಿಗೂ 66ನೇ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ರಾಜ್ಯೋತ್ಸವದ ಇಂದಿನ ಸಂಭ್ರಮದಲ್ಲಿ ಭಾಗಿಯಾಗಿರುವ ನಾಡಿನ ಹಿರಿಯ ಜೀವಿಗಳಿಗೆ, ಏಕೀಕರಣಕ್ಕೆ ದುಡಿದ ಮಹನೀಯರಿಗೆ, ವಿದ್ವಾಂಸರು, ಕವಿ-ಸಾಹಿತಿಗಳಿಗೆ, ಚಿಂತಕರು, ಜಿಲ್ಲೆಯ ಶಾಸಕ ಮಿತ್ರರು, ಸಂಸದರು, ಹಾಗೂ ಎಲ್ಲ ಜನಪ್ರತಿನಿಧಿಗಳು, ನಾಗರಿಕ ಬಂಧುಗಳು, ಸಹೋದರ-ಸಹೋದರಿಯರು ಮತ್ತು ಮಾಧ್ಯಮದ ಸ್ನೇಹಿತರಿಗೆ ಕರ್ನಾಟಕ ರಾಜ್ಯೋತ್ಸವದ ಹಾರ್ಧಿಕ ಶುಭಾಶಯಗಳು.

ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕತರಾದ ಬೆಳಗಾವಿ ಜಿಲ್ಲೆ ಅಥಣಿಯ ಸಮಾಜಸೇವಕ ಶ್ರೀ ಬಿ.ಎಲ್.ಪಾಟೀಲ ಅವರು ಸೇರಿದಂತೆ ಎಲ್ಲರಿಗೂ ಜಿಲ್ಲೆಯ ಸಮಸ್ತ ನಾಗರಿಕರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

ಇತಿಹಾಸದಲ್ಲಿ “ವೇಣುಗ್ರಾಮ”ವೆಂದು ಹೆಸರುವಾಸಿಯಾಗಿದ್ದ ನಮ್ಮ ಬೆಳಗಾವಿಯು ತನ್ನ ವಿಶಿಷ್ಟ ಪರಿಸರದಿಂದಾಗಿ ಎಲ್ಲರಿಗೂ ಪ್ರಿಯವಾಗಿದೆ. ಐತಿಹಾಸಿಕವಾಗಿ ಜಿಲ್ಲೆಯ ಹಲಸಿ ಗ್ರಾಮವು ಕದಂಬ ಅರಸರ ರಾಜಧಾನಿಯಾಗಿದ್ದ ಸಂಗತಿ ಸ್ಥಳೀಯವಾಗಿ ಲಭ್ಯವಿರುವ ಶಾಸನಗಳು ಮತ್ತು ತಾಮ್ರ ಪತ್ರಗಳ ಆಧಾರದಿಂದ ತಿಳಿದುಬರುತ್ತದೆ.
6ನೇ ಶತಮಾನದಿಂದ ಕ್ರಿ.ಶ 760ರ ವರೆಗೂ ಬೆಳಗಾವಿಯು ಚಾಲುಕ್ಯ ಸಾಮ್ರಾಜ್ಯದ ಭಾಗವಾಗಿತ್ತು. ಕ್ರಿ,ಶ 875ರ ಅವಧಿಯಲ್ಲಿ ರಾಷ್ಟ್ರಕೂಟರ ಆಳ್ವಿಕೆಯಲ್ಲಿ ಸಾಂಸ್ಕøತಿಕವಾಗಿ ಬೆಳೆದುಬಂದ ಬೆಳಗಾವಿ, ನಂತರ ರಟ್ಟ ವಂಶದ ಅರಸರ ರಾಜಧಾನಿಯಾಗಿತ್ತು.
ದೆಹಲಿಯ ಸುಲ್ತಾನರ ಹಾಗೂ ವಿಜಯನಗರ ಸಾಮ್ರಾಜ್ಯದ ಆಳ್ವಿಕೆಗೆ ಒಳಪಟ್ಟಿದ್ದ ಬೆಳಗಾವಿ, ಕ್ರಿ.ಶ 1347ರಲ್ಲಿ ಬಹುಮನಿ ಸುಲ್ತಾನರ ಆಳ್ವಿಕೆಯ ಭಾಗವಾಗಿದ್ದ ಕುರಿತಂತೆ ಜಿಲ್ಲೆಯಾದ್ಯಂತ ಅನೇಕ ಸ್ಮಾರಕಗಳನ್ನು ನಾವು ಇಂದಿಗೂ ಕಾಣಬಹುದಾಗಿದೆ.
ಚಾರಿತ್ರಿಕವಾಗಿ ಪಾರತಂತ್ರ್ಯವನ್ನು ವಿರೋಧಿಸಿ ಬ್ರಿಟೀಷರೊಡನೆ ಸ್ವಾತಂತ್ರ್ಯ ಹೋರಾಟಕ್ಕೆ ನಾಂದಿ ಹಾಡಿದ ಕಿತ್ತೂರಿನ ರಾಣಿ ಚೆನ್ನಮ್ಮ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಪ್ರಪ್ರಥಮ ಮಹಿಳಾ ಸೈನ್ಯವನ್ನು ಕಟ್ಟಿದ ಬೆಳವಡಿ ಮಲ್ಲಮ್ಮ ನಮ್ಮ ನಾಡಿನ ಧೀಮಂತ ಶಕ್ತಿ ಎಂಬುದು ಸರ್ವವಿದಿತ.
ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರು ಅಧ್ಯಕ್ಷತೆ ವಹಿಸಿದ್ದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧಿವೇಶನವು 1924ರಲ್ಲಿ ನಮ್ಮ ಬೆಳಗಾವಿಯ ಪುಣ್ಯಭೂಮಿಯಲ್ಲಿಯೇ ನಡೆದಿತ್ತು ಎಂಬುದು ಬೆಳಗಾವಿಯ ಹಿರಿಮೆ.
ಅದೇ ರೀತಿ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಚಿಕ್ಕೋಡಿ ನ್ಯಾಯಾಲಯದ ಪ್ರಕರಣವೊಂದರಲ್ಲಿ ವಕಾಲತ್ತು ವಹಿಸಿದ್ದು, ಈ ನೆಲದ ಇನ್ನೊಂದು ವಿಶೇಷ. ಅಲ್ಲದೇ ಸಮಾನತೆಯನ್ನು ಸಾರಲು ಜಾತಿ ಭೇದವನ್ನು ತೊಡೆದು ಹಾಕಲು ವಿಶೇಷವಾಗಿ ಅಸ್ಪೃಶ್ಯತೆಯ ನಿವಾರಣೆಗಾಗಿ ಬಹಿಷ್ಕೃತ ಹಿತಕರಣಿ ಸಭಾ ಮೂಲಕ ಜಿಲ್ಲೆಯ ನಿಪ್ಪಾಣಿಯಲ್ಲಿ ಚಳುವಳಿಯನ್ನು ರೂಪಿಸಿದ್ದು ನಮಗೆಲ್ಲ ಹೆಮ್ಮೆಯ ವಿಷಯ.
ಸ್ವಾತಂತ್ರ್ಯ ಪೂರ್ವದಲ್ಲಿಯೇ ಕನ್ನಡ ಕುಲಪುರೋಹಿತರೆಂದು ಖ್ಯಾತಿವೆತ್ತ ಆಲೂರು ವೆಂಕಟರಾಯರು ಕರ್ನಾಟಕ ಏಕೀಕರಣ ಚಳುವಳಿಯ ಕಿಚ್ಚು ಹೊತ್ತಿಸಿದರು. 1950ರ ಸುಮಾರಿಗೆ ಭಾರತವು ಗಣರಾಜ್ಯವೆಂದು ಘೋಷಿಸಲ್ಪಟ್ಟ ನಂತರ, ಡೆಪ್ಯೂಟಿ ಚೆನ್ನಬಸಪ್ಪ, ಅ.ನ.ಕೃಷ್ಣರಾಯರು, ಬಿ.ಎಂ.ಶ್ರೀಕಂಠಯ್ಯನವರು, ಫ.ಗು.ಹಳಕಟ್ಟಿಯವರು, ಹುಯಿಲಗೋಳ ನಾರಾಯಣರಾಯರು, ಅಂದಾನೆಪ್ಪ ದೊಡ್ಡಮೇಟಿ ಮುಂತಾದ ಮಹನೀಯರ ಅವಿರತ ಹೋರಾಟದ ಫಲವಾಗಿ 1956ರ ನವೆಂಬರ್ 1 ರಂದು ನಮ್ಮ ಹೆಮ್ಮೆಯ ಕರುನಾಡು, ಚಂದನದ ತವರೂರು ಕರ್ನಾಟಕ ರಾಜ್ಯವು ಉದಯವಾಗಿದೆ.
ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಬೆಳಗಾವಿ ಜಿಲ್ಲೆಯಿಂದ ಹಲವಾರು ಮಹನೀಯರು ಕ್ರಿಯಾಶೀಲರಾಗಿ ಹೋರಾಡಿದ್ದು, ಬೈಲಹೊಂಗಲದ ಗಂಗಾಧರ ತುರಮುರಿ, ಹುದಲಿಯ ಸ್ವಾತಂತ್ರ್ಯಯೋಧರಾದ ಗಂಗಾಧರರಾವ್ ದೇಶಪಾಂಡೆ, ಚಿಂಚಲಿಯ ರಾಷ್ಟ್ರೀಯವಾದಿ ಆರ್.ಎಸ್.ಹುಕ್ಕೇರಿ, ತ್ರಿವಿಧ ದಾಸೋಹಿ ನಾಗನೂರ ಶಿವಬಸವ ಮಹಾಸ್ವಾಮಿಗಳು, ಗೋಕಾವಿ ನಾಡಿನ ಬೆಟಗೇರಿ ಕೃಷ್ಣಶರ್ಮ, ಸವದತ್ತಿಯ ಶಂ.ಬಾ.ಜೋಶಿ, ಅಂಕಲಿಯ ಬಸವಪ್ರಭು ಕೋರೆ, ಅಥಣಿಯ ಬಿ.ಎನ್.ದಾತಾರ, ಕುಂದರನಾಡಿನ ಅಣ್ಣೂ ಗುರೂಜಿ, ದತ್ತೋಪಂತ ಬೆಳವಿ, ಸಂಪಗಾವಿಯ ಚನ್ನಪ್ಪ ವಾಲಿ ಮೊದಲಾದವರ ಕೊಡುಗೆ ಅವಿಸ್ಮರಣೀಯವಾಗಿದೆ.
ಚಂಪಾಬಾಯಿ ಭೋಗಲೆ, ಅಕ್ಕನ ಬಳಗದ ಬಸಲಿಂಗಮ್ಮ ಬಾಳೆಕುಂದ್ರಿ, ಕೃಷ್ಣಾಬಾಯಿ ಪಣಜೀಕರ ಮೊದಲಾದ ಮಹಿಳೆಯರೂ ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿರುವುದು ನಾಡು-ನುಡಿ ಹೋರಾಟದಲ್ಲಿ ಬೆಳಗಾವಿ ಜಿಲ್ಲೆಯ ಮಹಿಳೆಯರ ಕೊಡುಗೆ ಅಪಾರ ಎಂಬುದಕ್ಕೆ ಸಾಕ್ಷಿಯಾಗಿದೆ.
ಕನ್ನಡ ಭಾಷಿಕ ಪ್ರದೇಶಗಳು ಒಂದಾಗಿ ಅಖಂಡ ಕರ್ನಾಟಕ ರಚನೆಯಾಗಬೇಕೆಂಬ ಕನಸು ನನಸಾಗಿ ಇಂದಿಗೆ 65 ವರ್ಷಗಳು ಪೂರ್ಣಗೊಂಡಿದ್ದು, ನಾವೆಲ್ಲರೂ 66ನೇ ರಾಜ್ಯೋತ್ಸವವನ್ನು ಸಡಗರ-ಸಂಭ್ರಮದಿಂದ ಆಚರಿಸುತ್ತಿರುವುದು ಕರ್ನಾಟಕದ ಇತಿಹಾಸದಲ್ಲಿ ಇದೊಂದು ಐತಿಹಾಸಿಕ ದಿನವಾಗಿ*
ಮಾನ್ಯರೇ,
ಮಾನ್ಯ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರವು ಕೋವಿಡ್ ನಂತರ ಎದುರಾಗಿರುವ ಆರ್ಥಿಕ ಹಾಗೂ ಸಾಮಾಜಿಕ ಸವಾಲುಗಳ ಮಧ್ಯೆಯೂ ಅನೇಕ ಜನಪರ ಕಾರ್ಯಕ್ರಮಗಳನ್ನು ರೂಪಿಸುವುದರ ಜತೆಗೆ ಪ್ರವಾಹ ಸಂತ್ರಸ್ತರು, ರೈತರು, ಕೂಲಿಕಾರ್ಮಿಕರು ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಜನರಿಗೆ ಸುಂದರ ಬದುಕು ಕಟ್ಟಿಕೊಡುವ ದೃಢಸಂಕಲ್ಪ ಮಾಡಿದೆ.
ಈ ಸಂದರ್ಭದಲ್ಲಿ ನಮ್ಮ ಬೆಳಗಾವಿ ಜಿಲ್ಲೆಯಲ್ಲಿ ಕೈಗೊಂಡ ಕೆಲವು ಅಭಿವೃದ್ಧಿ ಕೆಲಸಗಳನ್ನು ತಮ್ಮ ಗಮನಕ್ಕೆ ತರಬಯಸುತ್ತೇನೆ.
ಅತ್ಯಂತ ದೊಡ್ಡ ಹಾಗೂ ಗಡಿ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿರುತ್ತದೆ. ಇತ್ತೀಚೆಗೆ ಜರುಗಿದ ಕಿತ್ತೂರ ಉತ್ಸವದ ಬೆಳ್ಳಿಹಬ್ಬ ಸಮಾರಂಭದಲ್ಲಿ ಭಾಗವಹಿಸಿದ್ದ ಮಾನ್ಯ ಮುಖ್ಯಮಂತ್ರಿಗಳು ಈ ಭಾಗದ ಜನರ ಬಹುದಿನಗಳ ಬೇಡಿಕೆಯಂತೆ ಮುಂಬೈ-ಕರ್ನಾಟಕ ಭಾಗವನ್ನು “ಕಿತ್ತೂರು-ಕರ್ನಾಟಕ” ಎಂದು ನಾಮಕರಣ ಮಾಡುವುದಾಗಿ ಭರವಸೆ ನೀಡಿದ್ದಾರೆ.
ಅದೇ ರೀತಿ ಕಿತ್ತೂರು ಉತ್ಸವವನ್ನು ರಾಜ್ಯಮಟ್ಟದ ಉತ್ಸವವಾಗಿ ಘೋಷಣೆ; ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅನುದಾನ ಬಿಡುಗಡೆ; ರಾಜ್ಯದಾದ್ಯಂತ ವೀರಜ್ಯೋತಿ ಯಾತ್ರೆಯನ್ನು ಆರಂಭಿಸುವುದಾಗಿ ಕೂಡ ಭರವಸೆ ನೀಡಿರುವುದು ಜಿಲ್ಲೆಯ ಜನರಲ್ಲಿ ಅತೀವ ಸಂತಸ ಮೂಡಿಸಿದೆ.
ಜಿಲ್ಲೆಯಾದ್ಯಂತ 2021 ಮುಂಗಾರು ಹಂಗಾಮಿನಲ್ಲಿ ಉತ್ತಮ ಮಳೆಯಾಗಿರುವುದರಿಂದ ಈ ಮುಂಗಾರಿನಲ್ಲಿ ಒಟ್ಟು 7.17 ಲಕ್ಷ ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದೆ. ಇಲ್ಲಿಯವರೆಗೆ ಎಲ್ಲಾ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್-19 ಸೊಂಕಿನಿಂದ ಒಟ್ಟು 888 ವ್ಯಕ್ತಿಗಳು ಮೃತಪಟ್ಟಿದ್ದು, ಸದರಿ ವ್ಯಕ್ತಿಗಳ ಕುಟುಂಬ ಸದಸ್ಯರಿಗೆ ಪರಿಹಾರ ಒದಗಿಸಲು ಸರ್ಕಾರದ ನಿರ್ದೇಶನದಂತೆ ಕ್ರಮಕೈಗೊಳ್ಳಲಾಗುತ್ತಿದೆ. ಈಗಾಗಲೇ ಬೈಲಹೊಂಗಲ ತಾಲೂಕಿನ 3 ಫಲಾನುಭವಿಗಳಿಗೆ ತಲಾ 1 ಲಕ್ಷ ರೂಪಾಯಿಯಂತೆ ಮಾನ್ಯ ಮುಖ್ಯಂತ್ರಿಗಳು ವಿತರಣೆ ಮಾಡಿರುತ್ತಾರೆ.
ಜುಲೈ-2021 ರಿಂದ ಇಲ್ಲಿಯವರೆಗೆ ಒಟ್ಟು 905 (ಕೆಟಗರಿ-ಎ) ಮನೆಗಳು ಪೂರ್ಣ ಪ್ರಮಾಣದಲ್ಲಿ ಹಾನಿಗೊಂಡಿದ್ದು, 8152 (ಕೆಟಗರಿ-ಬಿ) ಮನೆಗಳು ಭಾಗಶಃ ಹಾಗೂ 5205 (ಕೆಟಗರಿ-ಸಿ) ಮನೆಗಳು ಅಲ್ಪಸ್ವಲ್ಪ ಹಾನಿಗೊಳಗಾಗಿವೆ. ಹೀಗೆ ಒಟ್ಟು 14,262 ಮನೆಗಳು ಹಾನಿಯಾಗಿರುತ್ತವೆ.
ಹಾನಿಯಾದ ಮನೆಗಳ ಪ್ರಕರಣಗಳನ್ನು ಆರ್.ಜಿ.ಆರ್.ಎಚ್.ಸಿ.ಎಲ್ ತಂತ್ರಾಂಶದಲ್ಲಿ ಅಳವಡಿಸುವ ಕಾರ್ಯ ಪ್ರಗತಿಯಲ್ಲಿದ್ದು, ಇಲ್ಲಿಯವರೆಗೆ 14,262 ಪ್ರಕರಣಗಳನ್ನು ಅಳವಡಿಸಲಾಗಿರುತ್ತದೆ.
ಜಿಲ್ಲೆಯಲ್ಲಿ 86,832 ರೈತರ 1,15,661 ಹೆಕ್ಟೇರ್ ಕೃಷಿ ಭೂಮಿಯ ಬೆಳೆ ಹಾನಿಯಾಗಿದೆ ಹಾಗೂ 7,424 ರೈತರ 4,232.6 ಹೆಕ್ಟೇರ್ ಭೂಮಿಯ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹೀಗೆ ಒಟ್ಟು 9,4256 ರೈತರ ಒಟ್ಟು ಅಂದಾಜು 1,19,422 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿರುತ್ತದೆ.
ಪರಿಹಾರ ತಂತ್ರಾದಲ್ಲಿ 1,33,664 ಸರ್ವೆಗಳನ್ನು ದಾಖಲಿಸಲಾಗಿದ್ದು, ಇವುಗಳ ಪೈಕಿ ಅರ್ಹ 54239 ರೈತರುಗಳಿಗೆ ರೂ 49.11 ಕೋಟಿಗಳ ಬಿಡುಗಡೆಗೆ ತಂತ್ರಾಂಶದಲ್ಲಿ ಅನುಮೋದನೆ ನೀಡಲಾಗಿದೆ.
ಬೆಳೆ ಸಮೀಕ್ಷೆ ಯೋಜನೆಯಡಿ ರೈತರಿಗೆ ತಮ್ಮ ಜಮೀನಿಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಅಪ್ಲೋಡ್ ಮಾಡುವ ಯೋಜನೆಯಡಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಸುಮಾರು 14,88,195 ಕ್ಷೇತ್ರಗಳಲ್ಲಿ ಬೆಳೆದ ಮುಂಗಾರು ಹಂಗಾಮಿನ ವಿವಿಧ ಬೆಳೆಗಳ ಮಾಹಿತಿಯನ್ನು “ಬೆಳೆ ಸಮೀಕ್ಷೆ” ಮೊಬೈಲ್ ಆ್ಯಪ್‍ನಿಂದ ಅಪ್ಲೋಡ್ ಮಾಡಲಾಗಿದೆ.
ಜಿಲ್ಲೆಯಲ್ಲಿ 35.66 ಲಕ್ಷ ಜನರಿಗೆ ಲಸಿಕೆ ಮೊದಲ ಡೋಸ್ ಗುರಿಯನ್ನು ಹೊಂದಿದ್ದು, ಅಕ್ಟೋಬರ್ 30 ರವರೆಗೆÀ 31,63,220 ಜನರಿಗೆ ಲಸಿಕೆ ನೀಡಲಾಗಿ ಶೇಕಡಾ 88.70% ರಷ್ಟು ಪ್ರಗತಿ ಸಾಧಿಸಲಾಗಿದೆ. 35.66 ಲಕ್ಷ ಜನರ ಪೈಕಿ 2ನೇ ಡೋಸ್‍ಗೆ ಅರ್ಹತಾ ಅವಧಿ ಪೂರೈಸಿದ 15,73,299 ಜನರಲ್ಲಿ 13,81,719 ಜನರಿಗೆ ಲಸಿಕೆ ನೀಡಿ ಶೇ.87.82 ರಷ್ಟು ಪ್ರಗತಿ ಸಾಧಿಸಲಾಗಿದೆ.
ಬೆಳಗಾವಿಯ ಜಿಲ್ಲೆಯಲ್ಲಿ ಅನೇಕ ನೀರಾವರಿ ಯೋಜನೆಗಳನ್ನು ಕರ್ನಾಟಕ ನೀರಾವರಿ ನಿಗಮ ನಿಯಮಿತ(ಉತ್ತರ) ವಲಯದ ವತಿಯಿಂದ ಅನುಷ್ಠಾನಗೊಳಿಸಲಾಗುತ್ತಿದೆ.
ಜಿಲ್ಲಾ ಪಂಚಾಯತ ವತಿಯಿಂದ ಕೇಂದ್ರ ಸರ್ಕಾರದ ಜಲ ಜೀವನ್ ಮಿಷನ್ ಯೋಜನೆಯಡಿ ಎಲ್ಲಾ ಗ್ರಾಮೀಣ ಜನವಸತಿಗಳಿಗೆ ಸನ್ 2023 ರೊಳಗಾಗಿ ನಳ ನೀರು ಸಂಪರ್ಕವನ್ನು ಒದಗಿಸಬೇಕಾಗಿರುತ್ತದೆ.
ಬೆಳಗಾವಿ ವಿಭಾಗಕ್ಕೆ ಸಂಬಂಧಿಸಿದಂತೆ, ಸನ್ 2020-21ನ ಸಾಲಿಗೆ 343 ಜನವಸತಿಗಳಲ್ಲಿ 1,15,407 ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸುವ ಗುರಿಯನ್ನು ಹೊಂದಿದ್ದು ಈಗಾಗಲೇ 68,230 ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸಲಾಗಿದೆ. ಇನ್ನುಳಿದ ಕಾಮಗಾರಿಗಳು ಪ್ರಗತಿಯ ವಿವಿಧ ಹಂತದಲ್ಲಿವೆ.
2021-22 ಸಾಲಿಗೆ 503 ಗ್ರಾಮಗಳ ವ್ಯಾಪ್ತಿಯ 575 ಜನವಸತಿಗಳಲ್ಲಿ 1,14,037 ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸುವ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಲಾಗಿದ್ದು, 61 ಕಾಮಗಾರಿಗಳ ಅಂದಾಜು ಪತ್ರಿಕೆಗಳಿಗೆ ಟೆಂಡರ ಪ್ರಕ್ರಿಯೆ ಪ್ರಾರಂಭಿಸಲಾಗಿದೆ.
ಇನ್ನುಳಿದ ಕಾಮಗಾರಿಗಳ ಅಂದಾಜು ಪತ್ರಿಕೆಗಳನ್ನು ತ್ವರಿತಗತಿಯಲ್ಲಿ ಮಾಡಲಾಗುತ್ತಿದ್ದು ವರ್ಷಾಂತ್ಯಕ್ಕೆ 918 ಜನವಸತಿಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸುವ ಗುರಿ ಹೊಂದಲಾಗಿದೆ.
ಚಿಕ್ಕೋಡಿ ವಿಭಾಗಕ್ಕೆ ಸಂಬಂಧಿಸಿದಂತೆ, 2020-21ನ ಸಾಲಿಗೆ 666 ಜನವಸತಿಗಳಲ್ಲಿ 99360 ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸುವ ಗುರಿಯನ್ನು ಹೊಂದಿದ್ದು ಈಗಾಗಲೇ 31206 ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸಲಾಗಿದೆ.
ಇನ್ನುಳಿದ ಕಾಮಗಾರಿಗಳು ಪ್ರಗತಿಯ ವಿವಿಧ ಹಂತದಲ್ಲಿವೆ. 2021-22 ಸಾಲಿಗೆ 349 ಗ್ರಾಮಗಳ ವ್ಯಾಪ್ತಿಯ 637 ಜನವಸತಿಗಳಲ್ಲಿ 189182 ಮನೆಗಳಿಗೆ ಕ್ರಿಯಾತ್ಮಕ ನಳ ಸಂಪರ್ಕ ಒದಗಿಸುವ ಕ್ರಿಯಾ ಯೋಜನೆಗೆ ಅನುಮೋದನೆ ಪಡೆಯಲಾಗಿದ್ದು, 58 ಕಾಮಗಾರಿಗಳ ಅಂದಾಜು ಪತ್ರಿಕೆಗಳನ್ನು ತಯಾರಿಸಲಾಗಿದ್ದು, ಅನುಮೋದನೆ ಪಡೆದು ಟೆಂಡರ ಪ್ರಕ್ರಿಯೆ ಪ್ರಾರಂಭಿಸಲಾಗುವುದು.
ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಲ್ಲಿ ಸನ್ 2021-22ನೇ ಸಾಲಿಗೆ ಹೊಸದಾಗಿ ಒಟ್ಟು 12 ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಬೆಳಗಾವಿ ವಿಭಾಗ ವ್ಯಾಪ್ತಿಯಲ್ಲಿ 04 ಹಾಗೂ ಚಿಕ್ಕೋಡಿ ವಿಭಾಗ ವ್ಯಾಪ್ತಿಯಲ್ಲಿ 08 ಕಾಮಗಾರಿಗಳಿಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಗಳು ತಯಾರಿಕೆ ಹಂತದಲ್ಲಿವೆ.
ಬೆಳಗಾವಿ ಜಿಲ್ಲೆಗೆ ಸರ್ಕಾರದಿಂದ ಒಟ್ಟು 1349 ಶುದ್ದಿಕರಣ ಘಟಕಗಳು ಮಂಜೂರಾಗಿರುತ್ತವೆ. ಅದರಲ್ಲಿ 1330 ಶುದ್ಧೀಕರಣ ಘಟಕಗಳು ಸ್ಥಾಪಿಸಲಾಗಿದೆ. 1272 ಶುದ್ಧೀಕರಣ ಘಟಕಗಳು ಕಾರ್ಯನಿರ್ವಹಿಸುತ್ತಿವೆÉ.
ವಸತಿ ಯೋಜನೆಯು ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಜಿಲ್ಲಾದ್ಯಂತ 204978 ವಸತಿರಹಿತರನ್ನು ಹಾಗೂ 19887 ನಿವೇಶನರಹಿತರನ್ನು ಅಂದರೆ ಒಟ್ಟು 224865 ಅರ್ಹ ವಸತಿ/ನಿವೇಶನರಹಿತರನ್ನು ಈಗಾಗಲೇ ಗುರುತಿಸಲಾಗಿರುತ್ತದೆ. ಆಯ್ಕೆ ಮಾಡುವ ಪ್ರಕ್ರೀಯೆ ಜಾರಿಯಲ್ಲಿರುತ್ತದೆ.
ವಿವಿಧ ವಸತಿ ಯೋಜನೆಯಡಿ ಸನ್ 2010-11 ನೇ ಸಾಲಿನಿಂದ ಇಲ್ಲಿಯವರೆಗೆ ಜಿಲ್ಲಾದ್ಯಂತ ಒಟ್ಟು 297236 ಫಲಾನುಭವಿಗಳಿಗೆ ಈಗಾಗಲೇ ಮನೆ ಮಂಜೂರು ಮಾಡಲಾಗಿರುತ್ತದೆ.
ಸ್ವತಂತ್ರ್ಯ ಭಾರತದ 75ನೇ ಮಹೋತ್ಸವದ ಪ್ರಯುಕ್ತ ಸರ್ವರಿಗೂ ವಸತಿ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯಲ್ಲಿ 499 ಗ್ರಾಮ ಪಂಚಾಯತಿಗಳ ಪೈಕಿ ಒಟ್ಟು 66 ಗ್ರಾಮ ಪಂಚಾಯತಿಗಳನ್ನು ಅಮೃತ ಗ್ರಾಮೀಣ ವಸತಿ ಯೋಜನೆಯಡಿ ಆಯ್ಕೆ ಮಾಡಲಾಗಿದ್ದು, ಈಗಾಗಲೇ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಾಗಿರುತ್ತದೆ.
2021-22 ನೇ ಸಾಲಿನಲ್ಲಿ ಮಹಾತ್ಮಾ ಗಾಂದಿs ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಇಲ್ಲಿಯವರಗೆ 7.24 ಲಕ್ಷ ಕುಟುಂಬಗಳು ನೋಂದಣಿಯಾಗಿರುತ್ತವೆ 7.22 ಲಕ್ಷ ಉದ್ಯೋಗ ಚೀಟಿಗಳನ್ನು ವಿತರಿಸಲಾಗಿರುತ್ತದೆ. ಭೌತಿಕ ಗುರಿ 125.00 ಲಕ್ಷಗಳ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿದ್ದು, ಅದರ ಪೈಕಿ 85.85 ಲಕ್ಷಗಳಷ್ಟು ಮಾನವ ದಿನಗಳನ್ನು ಸೃಜಿಸಿ ಶೇ 68.69% ರಷ್ಟು ಪ್ರಗತಿ ಸಾಧಿಸಲಾಗಿದೆ.
3572 ಕೋಟಿ ರೂಪಾಯಿ ವೆಚ್ಚದ ತುಬಚಿ-ಬಬಲೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ನಡೆದಿದ್ದು, ಕಾಲುವೆ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಈ ಯೋಜನೆಯಿಂದ ಅಥಣಿ ಮತಕ್ಷೇತ್ರದ 2783.61 ಹೆಕ್ಟೇರ್ ಪ್ರದೇಶ ನೀರಾವರಿಗೆ ಒಳಪಡಲಿದೆ.
ಮುಧೋಳ/ರಾಮದುರ್ಗ ಮತಕ್ಷೇತ್ರಕ್ಕೆ ಸಂಬಂಧಿಸಿದಂತೆ 544 ಕೋಟಿ ರೂಪಾಯಿ ವೆಚ್ಚದ ವೀರಭದ್ರೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಚಾಲ್ತಿಯಲ್ಲಿದೆ.
ಕಾಗವಾಡ ತಾಲ್ಲೂಕಿನ 27,462 ಹೆಕ್ಟೇರ್ ಕ್ಷೇತ್ರಕ್ಕೆ ನೀರುಣಿಸುವ 1319.27 ಕೋಟಿ ರೂಪಾಯಿ ವೆಚ್ಚದ ಬಸವೇಶ್ವರ(ಕೆಂಪವಾಡ) ಏತ ನೀರಾವರಿ ಯೋಜನೆಯ ಕಾಮಗಾರಿ ಕೂಡ ಚುರುಕಿನಿಂದ ಸಾಗಿದೆ.
ಇವುಗಳಲ್ಲದೇ ಚಚಡಿ, ಮುರುಗೋಡ, ಗೊಡಚಿನಮಲ್ಕಿ, ಸಾಲಾಪಾಉರ ಏತ ನೀರಾವರಿ ಯೋಜನೆಗಳು ಕೂಡ ವಿವಿಧ ಹಂತದಲ್ಲಿವೆ.
ವಿಶ್ವ ಬ್ಯಾಂಕಿನ ಧನ ಸಹಾಯದ ನೆರವಿನೊಂದಿಗೆ ಬೆಳಗಾವಿ ನಗರದಲ್ಲಿ 24/7 ನಿರಂತರ ಕುಡಿಯುವ ನೀರಿನ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ. ಸದರಿ ಕಾಮಗಾರಿಯನ್ನು ಅನುಷ್ಠಾನಗೊಳಿಸಲು ಗುತ್ತಿಗೆದಾರರಾದ ಒ/s. ಐಚಿಡಿseಟಿ & ಖಿouಡಿbo, ಅheಟಿಟಿಚಿi ಇವರಿಗೆ ದಿನಾಂಕ: 15.06.2020ರಂದು ವಹಿಸಲಾಗಿದೆ. ಸದರಿ ಯೋಜನೆಯ ಗುತ್ತಿಗೆ ಮೊತ್ತವು ರೂ. 804.13 ಕೋಟಿ ಇರುತ್ತದೆ.
ಇಷ್ಟೇ ಅಲ್ಲದೇ ಕೋವಿಡ್ ಸಾಂಕ್ರಾಮಿಕದ ಮಧ್ಯೆಯೂ ನಮ್ಮ ಸರಕಾರವು ಜನರಪರ ಹಾಗೂ ಜನಕಲ್ಯಾಣ ಯೋಜನೆಗಳನ್ನು ಮುಂದುವರಿಸಿಕೊಂಡು ಬಂದಿರುತ್ತದೆ. ರೈತರು, ಕಾರ್ಮಿಕರು, ದೀನದಲಿತರು, ಹಿಂದುಳಿದ ವರ್ಗದವರು ಸೇರಿದಂತೆ ಸಮಾಜದ ಎಲ್ಲ ಸ್ತರಗಳ ಜನರ ಹಿತರಕ್ಷಣೆಗೆ ಸರಕಾರ ಬದ್ಧವಿದೆ.
********

ಮಹನೀಯರೇ,
ಅಖಂಡ ಕರ್ನಾಟಕದ ನಿರ್ಮಾಣದ ಕನಸು ನನಸು ಮಾಡಲು ಶ್ರಮಿಸಿದ ನಮ್ಮ ಹಿರಿಯರ ಆಶಯದಂತೆ ಸಮಗ್ರ ಕರ್ನಾಟಕವನ್ನು ಪ್ರಗತಿಪರ ರಾಜ್ಯವನ್ನಾಗಿ ಕಟ್ಟಲು ಎಲ್ಲರೂ ಕೈ ಜೋಡಿಸೋಣ. ಕನ್ನಡ ನಾಡು-ನುಡಿ; ನೆಲ-ಜಲ ಸಂರಕ್ಷಣೆಗೆ ಸರಕಾರ ಸದಾ ಬದ್ಧವಾಗಿರುತ್ತದೆ.
ನಾವೆಲ್ಲರೂ ಒಂದಾಗಿ ಕನ್ನಡದ ತೇರನ್ನು ಮುನ್ನಡೆಸೋಣ; ಕರ್ನಾಟಕವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸೋಣ ಎಂದು ಆಶಿಸುತ್ತಾ ನನ್ನ ಮಾತುಗಳನ್ನು ಮುಗಿಸುತ್ತೇನೆ.

ಜೈ ಹಿಂದ್-ಜೈ ಕರ್ನಾಟಕ
*********

📱 Read Top News, Belgaum News Updates, Belagavi News in Kannada, Latest News on News Belgaum