Belagavi News In Kannada | News Belgaum

ಬಿಬಿಎಂಪಿಯಲ್ಲಿ ಪುನೀತ್ ರಾಜ್‍ಕುಮಾರ್ ಪ್ರತಿಮೆ ಸ್ಥಾಪನೆ : ಆಯುಕ್ತ ಗುಪ್ತಾ ಭರವಸೆ

🌐 Belgaum News :

ಬೆಂಗಳೂರು: ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ವರನಟ ಡಾ.ರಾಜ್‍ಕುಮಾರ್ ಪ್ರತಿಮೆ ಸಮೀಪ ಪವರ್‍ ಸ್ಟಾರ್ ಪುನೀತ್ ರಾಜ್‍ಕುಮಾರ್ ಪ್ರತಿಮೆ ಸ್ಥಾಪನೆ ಮಾಡುವ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಪರಿಶೀಲನೆ ನಡೆಸಲಾಗುವುದು ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತಾ ಭರವಸೆ ನೀಡಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘದ ಕಛೇರಿ ಅವರಣದಲ್ಲಿ 66ನೇ ಕನ್ನಡ ರಾಜ್ಯೋತ್ಸವ ಮತ್ತು ಪುನೀತ್‍ರಾಜ್‍ಕುಮಾರ್ ನುಡಿ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪುನೀತ್ ಅವರ ಸಾವು ಎಲ್ಲರಿಗೂ ನೋವು ತರಿಸಿದೆ. ಅವರ ಚಿತ್ರಗಳು ಸದಭಿರುಚಿಯಿಂದ ಕೂಡಿರುತಿತ್ತು. ಅಂತಹ ಕಲಾವಿದ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ ಎಂದರು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ನೌಕರರ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಅಮೃತ್ ರಾಜ್ ಮಾತನಾಡಿ ಕನ್ನಡ ಸಂಘದ ಅವರಣದಲ್ಲಿರುವ ಡಾ.ರಾಜ್ ಕುಮಾರ್ ಅವರ ಪ್ರತಿಮೆ ಪಕ್ಕದಲ್ಲಿ ಪುನೀತ್ ರಾಜ್ ಕುಮಾರ್ ಅವರ ಕಂಚಿನ ಪ್ರತಿಮೆ ಕನ್ನಡ ಸಂಘದ ಸ್ವಂತ ವೆಚ್ಚದಲ್ಲಿ ನಿರ್ಮಿಸಲು ಮಾನ್ಯ ಮುಖ್ಯ ಆಯುಕ್ತರು ಅನುಮತಿ ನೀಡಿದರೆ .ಇನ್ನು ಎರಡು ತಿಂಗಳಲ್ಲಿ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದರು.
ಆಡಳಿತಾಧಿಕಾರಿ ರಾಕೇಶ್ ಸಿಂಗ್ , ವಿಶೇಷ ಆಯುಕ್ತರುಗಳಾದ ದಯಾನಂದ್ , ತುಳಸಿ ಮದ್ದೇನೆನಿ ,ತ್ರಿಲೋಕ ಚಂದ್ರ, ಮಾಜಿ ಮೇಯರ್  ಜೆ.ಹುಚ್ಚಪ್ಪ , ಕನ್ನಡ ಜನಶಕ್ತಿ ಕೇಂದ್ರದ ರಾಜ್ಯಾಧ್ಯಕ್ಷ ಸಿ.ಕೆ.ರಾಮೇಗೌಡ, ಸಂಗೊಳ್ಳಿ ಕೃಷ್ಣಮೂರ್ತಿ ಮತ್ತಿತರರು ಉಪಸ್ಥಿತರಿದ್ದರು.//////

📱 Read Top News, Belgaum News Updates, Belagavi News in Kannada, Latest News on News Belgaum