Belagavi News In Kannada | News Belgaum

ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಭೇಟಿ, ಪರಿಶೀಲನೆ

🌐 Belgaum News :

ಗೋಕಾಕ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಮಂಗಳವಾರ ಭೇಟಿ ನೀಡಿ, ಪರಿಶೀಲಿಸಿದರು.

ಹೈಸ್ಕೂಲ್, ಪಿಯುಸಿ, ಪದವಿ ಕಾಲೇಜುಗಳ ಕೊಠಡಿಗಳನ್ನು ವೀಕ್ಷಿಸಿ, ಕಾಲೇಜಿನ ಸಮಸ್ಯೆಗಳನ್ನು ಆಲಿಸಿದರು. ಕಾಲೇಜು ಪ್ರಾಂಶುಪಾಲರಾದ ಎಂ.ವೈ.ಕಮ್ಮಾರ್, ಹೆಡ್ ಮಾಸ್ಟರ್ ಜಿ.ಆರ್. ಮಾಳಗಿ, ಸಿಬ್ಬಂದಿ ಅರ್ಜುನ್ ಹಾದಿಮನಿ ಶುದ್ಧ ಕುಡಿಯುವ ನೀರು, ಕೊಠಡಿ ಸೇರಿದಂತೆ ಹಲವು ಬೇಡಿಕೆಗಳಿಟ್ಟರು.

ಬಳಿಕ ರಾಹುಲ್ ಜಾರಕಿಹೊಳಿ ಮಾತನಾಡಿ, ಕಾಲೇಜಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೇಕಾಗುವಂತ ಎಲ್ಲ ಸೌಲಭ್ಯಗಳನ್ನು ಆದಷ್ಟು ಬೇಗ ಈಡೇರಿಸುವ ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

ಕಾಲೇಜು ಸಿಬ್ಬಂದಿ ವರ್ಗ ರಾಹುಲ್ ಜಾರಕಿಹೊಳಿ ಅವರನ್ನು ಸತ್ಕರಿಸಿದರು. ತದನಂತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳೊಂದಿಗೆ ಬಿಸಿ ಊಟ ಸೇವಿಸಿದರು.

📱 Read Top News, Belgaum News Updates, Belagavi News in Kannada, Latest News on News Belgaum