Belagavi News In Kannada | News Belgaum

30 ದಿನಗಳ ಉಚಿತ ಜೆಸಿಬಿ ಆಪರೇಟರ್ ತರಬೇತಿ: ಅರ್ಜಿ ಆಹ್ವಾನ

🌐 Belgaum News :

ಬೆಳಗಾವಿ, ನ.02 : ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು (ಸಿಬಿಆರ್‍ಸೆಟಿ) ಬೆಳಗಾವಿಯಲ್ಲಿ 18-45 ವಯಸ್ಸಿನ ನಿರುದ್ಯೋಗಿ ಯುವಕರಿಗೆ 30 ದಿನಗಳ ಜೆಸಿಬಿ ಆಪರೇಟರ್ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಬೆಳಗಾವಿ ಜಿಲ್ಲೆಯ ಗ್ರಾಮೀಣ ಆಸಕ್ತ ಅಭ್ಯರ್ಥಿಗಳು ನವೆಂಬರ್ 10 ರ ಒಳಗಾಗಿ ಅರ್ಜಿ ಸಲ್ಲಿಸಬಹುದು.

 

ಭಾಗವಹಿಸಲಿರುವ ಅಭ್ಯರ್ಥಿಗಳು ನಿರುದ್ಯೋಗಿಗಳಾಗಿದ್ದು, 18 ರಿಂದ 45 ವರ್ಷದ ವಯೋಮಿತಿಯಲ್ಲಿರಬೇಕು. ತರಬೇತಿ ಪಡೆದ ನಂತರ ಸ್ವ ಉದ್ಯೋಗ ಕೈಗೊಳ್ಳಲು ಸಿದ್ಧರಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತ ಊಟ ಮತ್ತು ವಸತಿ ಸೌಲಭ್ಯವಿದೆ.

 

ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು, ಬಿಳಿ ಹಾಳೆಯ ಮೇಲೆ ಅಥವಾ ನಮ್ಮ ಸಂಸ್ಥೆಯಲ್ಲಿ ದೊರೆಯುವ ಅರ್ಜಿ ನಮೂನೆಯಲ್ಲಿ ತಮ್ಮ ಹೆಸರು, ವಿಳಾಸ, ವಿದ್ಯಾಭ್ಯಾಸ, ಅನುಭವ ಮುಂತಾದ ಮಾಹಿತಿಗಳನ್ನು ಬರೆದು ಅರ್ಜಿಯ ಜೊತೆಗೆ ಬಿಪಿಎಲ್ ರೇಶನ್ ಕಾರ್ಡ, ಆಧಾರ ಕಾರ್ಡ, ಬ್ಯಾಂಕ ಪಾಸಬುಕ್ ಝೆರಾಕ್ಸ್ ಪ್ರತಿಗಳನ್ನು ಲಗತ್ತಿಸಬೇಕು.

ಮಾಹಿತಿಗಾಗಿ ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್‍ಸೆಟಿ), ವಿಸ್ತರಣಾ ಕೇಂದ್ರ ಹಸನಮಾಳ, ದಾಂಡೇಲಿ-581325 ಗೆ ಅಥವಾ ದೂರವಾಣಿ ಸಂಖ್ಯೆ 08284-298547, 9449782425, 6363429889 ಗೆ ಸಂಪರ್ಕಿಸಬಹುದು ಎಂದು ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum