Belagavi News In Kannada | News Belgaum

ಕಲಾತಂಡಗಳ ಆಯ್ಕೆಗೆ ಅರ್ಜಿ ಆಹ್ವಾನ

🌐 Belgaum News :

ಬೆಳಗಾವಿ, ನ.02 : 2021-22 ಸಾಲಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಯೋಜನೆ ಹಾಗೂ ಸೇವೆಗಳನ್ನು ಗ್ರಾಮಿಣ ಮಟ್ಟದಲ್ಲಿ ಸಾರ್ವಜನಿಕರಿಗೆ ತಲುಪಿಸಲು ಜಾನಪದ ಕಲಾ ತಂಡಗಳು ಮುಂದಿನ ದಿನಗಳಲ್ಲಿ ಕಾರ್ಯಕ್ರಮ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ನವೆಂಬರ್ 16,2021ರ ಒಳಗಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಸಲ್ಲಿಸಬಹುದು.

 

ಜಾನಪದ ಕಲಾತಂಡಗಳು ಬೆಳಗಾವಿ ಜಿಲ್ಲೆಯ ವ್ಯಾಪ್ತಿಯಲ್ಲಿದ್ದು, ಕೇಂದ್ರ ಸಂಗೀತ ಮತ್ತು ನಾಟಕ ವಿಭಾಗ, ಮಾಹಿತಿ ಮತ್ತು ಪ್ರಸಾರ ಮಂತ್ರಾಲಯ ಭಾರತ ಸರ್ಕಾರ ಬೆಂಗಳೂರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳಲ್ಲಿ ಯಾವುದಾದರೂ ಒಂದು ಇಲಾಖೆಯಲ್ಲಿ ನೊಂದಣಿಯಾಗಿರುವ ಕಲಾ ತಂಡಗಳನ್ನು ಮಾತ್ರ ಪರಿಗಣಿಸಲಾಗುವುದು.

 

ಆಯ್ಕೆಯಾದ ಕಲಾತಂಡಗಳನ್ನು ಜಿಲ್ಲೆಯಾದ್ಯಂತ ತಮ್ಮ ಕಲಾ ಪ್ರಕಾರಗಳಲ್ಲಿ ಕಾರ್ಯಕ್ರಮ ನೀಡಲು ಸಿದ್ಧರಿರಬೇಕು.

ಆಸಕ್ತ ಕಲಾತಂಡಗಳು ತಮ್ಮ ತಂಡದ ಕಲಾ ಪ್ರಕಾರ ಹಾಗೂ ಕೇಂದ್ರ ಸಂಗೀತ ಮತ್ತು ನಾಟಕ ವಿಭಾಗ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ನೊಂದಣಿಯಾದ ಪ್ರಮಾಣ ಪತ್ರಗಳನ್ನು ಅರ್ಜಿಯೊಂದಿಗೆ ಲಗತ್ತಿಸಬೇಕು.

 

ಅವಧಿ ಮೀರಿ ಬಂದ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ಡಾ. ಎಸ್.ವಿ ಮುನ್ಯಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum