Belagavi News In Kannada | News Belgaum

ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

🌐 Belgaum News :

ಬೆಳಗಾವಿ, ನ.02 : ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರದ ವತಿಯಿಂದ 2021-22 ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಯುವ ಮಂಡಳಗಳು ಕರ್ನಾಟಕ ಸಂಘ ಸಂಸ್ಥೆಗಳ ಕಾಯ್ದೆ 1960 ರ ಅಡಿಯಲ್ಲಿ ನೋಂದಣಿಯಾಗಿರಬೇಕು ಮತ್ತು ನೆಹರು ಯುವ ಕೇಂದ್ರ ಬೆಳಗಾವಿ ಕಛೇರಿಯಲ್ಲಿ ಸಂಯೋಜನೆಗೊಂಡಿರಬೇಕು.

ಏಪ್ರಿಲ್ 2020 ರಿಂದ ಮಾರ್ಚ್ 2021 ರ ಅವಧಿಯಲ್ಲಿ ಸಮಾಜದ ಕೆಲಸ ಕಾರ್ಯಗಳನ್ನು ಮಾಡಿರಬೇಕು. ಅಂದರೆ ಆರೋಗ್ಯ ಮತ್ತು ಕುಟುಂಬಕಲ್ಯಾಣ, ಪರಿಸರ ಸಂರಕ್ಷಣೆ, ವೃತ್ತಿ ತರಬೇತಿ, ಸಾಕ್ಷರತೆ, ಮಹಿಳಾ ಸಬಲೀಕರಣ ಸಾಂಸ್ಕೃತಿಕ ಕಾರ್ಯಕ್ರಮ, ಸ್ವಯಂ ಉದ್ಯೋಗ, ಸಾಮಾಜಿಕ ಪಿಡುಗುಗಳು ಕ್ರೀಡೆಗಳು ಹಾಗೂ ಸಮಾಜ ಕಲ್ಯಾಣಗಳ ಬಗ್ಗೆ ಯುವ ಮಂಡಳಗಳು ಕೆಲಸ ಮಾಡಿರಬೇಕು ಹಾಗೂ ಈ ಕುರಿತು ಸಂಬಂಧಿಸಿದ ದಾಖಲೆಗಳು ಇರಬೇಕು.

ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿ ರೂ.25,000/- ರಾಜ್ಯ ಮಟ್ಟದಲ್ಲಿ 75,000/- ರಾಷ್ಟ್ರ ಮಟ್ಟದಲ್ಲಿ 3,00,000/- ಹಾಗೂ ಪ್ರಶಸ್ತಿ ಪತ್ರವನ್ನು ನೀಡಲಾಗುವುದು.

ಅರ್ಜಿ ದೊರಕುವ ವಿಳಾಸ:

ಬೆಳಗಾವಿ ಜಿಲ್ಲೆಯ ಆಸಕ್ತ ಹಾಗೂ ಅರ್ಹ ಯುವಕ/ತಿ/ಮಹಿಳಾ ಮಂಡಳಗಳು ಜಿಲ್ಲಾ ಯುವ ಅಧಿಕಾರಿಗಳು ನೆಹರು ಯುವ ಕೇಂದ್ರ ಸಿಟಿ,ಎಸ್, ನಂ:9663 ಪ್ಲಾಟ್ ನಂ : 2367 ಅಣ್ಣಪೂರ್ಣ ನಿಲಯ 1ನೇ ಕ್ರಾಸ್, ಮಹಾಂತೇಶ ನಗರ, ಬೆಳಗಾವಿ 590017 ಇವರನ್ನು ಸಂಪರ್ಕಿಸಿ ನಿಗದಿತ ಅರ್ಜಿ ನಮೂನೆಗಳನ್ನು ಪಡೆಯಬಹುದು.

ನವೆಂಬರ್ 15 ಕೊನೆಯ ದಿನಾಂಕ :

ಭರ್ತಿ ಮಾಡಿದ ಅರ್ಜಿಗಳನ್ನು ಪ್ರಸ್ತಾವಣೆಯೊಂದಿಗೆ ಅಗತ್ಯ ದಾಖಲಾತಿಗಳನ್ನು ಅಂದರೆ, ಪೇಪರ್ ಕಟಿಂಗ್ ಪ್ರಮಾಣ ಪತ್ರಗಳು, ಕಾರ್ಯಕ್ರಮದ ಫೆÇೀಟೋ ಇತ್ಯಾದಿಗಳನ್ನು ಲಗತ್ತಿಸಿ ನವೆಂಬರ್ 15 ರ ಒಳಗಾಗಿ ನೆಹರು ಯುವ ಕೇಂದ್ರ, ಬೆಳಗಾವಿ ಸಿಟಿ,ಎಸ್, ನಂ:9663 ಪ್ಲಾಟ್ ನಂ : 2367 ಅಣ್ಣಪೂರ್ಣ ನಿಲಯ 1ನೇ ಕ್ರಾಸ್, ಮಹಾಂತೇಶ ನಗರ, ಬೆಳಗಾವಿ ಈ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0831-2453496 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಯುವ ಅಧಿಕಾರಿಗಳಾದ ರೋಹಿತ ಕಲರಾ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 Read Top News, Belgaum News Updates, Belagavi News in Kannada, Latest News on News Belgaum