Belagavi News In Kannada | News Belgaum

ಸಚಿವೆ ಶಶಿಕಲಾ ಜೊಲ್ಲೆಗೆ ಸಂಕಷ್ಟ !

🌐 Belgaum News :

ಬೆಳಗಾವಿ : ಶಶಿಕಲಾ ಜೊಲ್ಲೆಯವರನ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಸಂಪುಟದಿಂದ ಕೈಬಿಡುವಂತೆ ಒತ್ತಾಯಿಸಿ, ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಸಚಿವ ಶಶಿಕಲಾ ಜೊಲ್ಲೆಯವರ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಅವರ ವಿರುದ್ಧ ತನಿಖೆ ನಡೆಸಿ, ಬೊಮ್ಮಾಯಿ ಸಂಪುಟದಿಂದ ಕೈಬಿಡುವಂತೆ  ಭೀಮಪ್ಪ ಗಡಾದ ಪತ್ರ ಬರೆದಿದ್ದಾರೆ. ಈ ಪತ್ರವನ್ನು, ರಾಜ್ಯಪಾಲರ ಕಚೇರಿಯಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ವರ್ಗಾವಣೆ ಮಾಡಿದ್ದಾರೆ.

ಈ ಪತ್ರವನ್ನು ಇದೀಗ ಆಡಳಿತ ಸುಧಾರಣಾ ಇಲಾಖೆ ವಿಧಾನಸಭಾ ಅಧ್ಯಕ್ಷರಾದಂತ ವಿಶ್ವೇಶ್ವರ್ ಹೆಗಡೆ ಕಾಗೇರಿಗೆ ಪತ್ರ ವರ್ಗಾವಣೆಯಾಗಿದೆ. ಹೀಗಾಗಿ ಸಭಾಧ್ಯಕ್ಷರು ಯಾವ ರೀತಿಯಾಗಿ ಈ ಪತ್ರಕ್ಕೆ ಕ್ರಮ ಕೈಗೊಳ್ಳಲಿದ್ದಾರೆ ಎನ್ನುವುದನ್ನು ಕಾದು ನೋಡಬೇಕಿದೆ.////

📱 Read Top News, Belgaum News Updates, Belagavi News in Kannada, Latest News on News Belgaum